ಪಡೀಲು ನಿವಾಸಿ, ಮಾಜಿ ಅಬಕಾರಿ ಉಪನಿರೀಕ್ಷಕ ಅಂಗಾರ ಪಿ ಇನ್ನಿಲ್ಲ

ಪುತ್ತೂರು: ಅಬಕಾರಿ ಇಲಾಖೆಯ ನಿವೃತ್ತ ಉಪನಿರೀಕ್ಷಕ ಪಡೀಲು ನಿವಾಸಿ ಅಂಗಾರ ಪಿ(65ವ) ಅವರು ಜು.24ರ ನಸುಕಿನ ಜಾವ ನಿಧನರಾದರು. ಪುತ್ತೂರು ಮೊಗೇರ ಸಂಘ, ಬನ್ನೂರು ನವೋದಯ ಯುವಕ ವೃಂದದ ಮಾಜಿ ಅಧ್ಯಕ್ಷರೂ, ಹಾಲಿ ಗೌರವಾಧ್ಯಕ್ಷರೂ ಆಗಿದ್ದ ಅಂಗಾರ ಪಿ ಅವರು ಕಾಂಗ್ರೆಸ್ ಪಡೀಲ್‌ಬೂತ್‌ನ ಅಧ್ಯಕ್ಷರಾಗಿಯೂ, ಪಡೀಲು ಸಾರ್ವಜನಿಕ ಕಟ್ಟೆಪೂಜೆ ಸಮಿತಿಯಲ್ಲೂ ಸಕ್ರಿಯರಾಗಿದ್ದರು. ಪುತ್ತೂರು ಪೇಟೆಯ ಹೃದಯಭಾಗ ಚಿಕ್ಕಪುತ್ತೂರಿನಲ್ಲಿ ಭತ್ತಬೇಸಾಯ ಮಾಡುವ ಮೂಲಕ ಮಾದರಿ ಕೃಷಿಕರಾಗಿದ್ದರು. ವಾರದ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ…

Read More

ಶ್ರೀ ಪುತ್ತಿಗೆ ಮೂಲ ಮಠದಲ್ಲಿ ವಾರ್ಷಿಕ ಅಭಿಷೇಕ

ಉಡುಪಿ: ಉಡುಪಿ ಸಮೀಪದ ಹಿರಿಯಡ್ಕದ ಶ್ರೀ ಪುತ್ತಿಗೆ ಮೂಲ ಮಠದಲ್ಲಿ ವಾರ್ಷಿಕ ಅಭಿಷೇಕ ಮಹೋತ್ಸವವು ಭಕ್ತಿಭಾವದಿಂದ ನಡೆಯಿತು.ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಪಾದರು ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ನೆರವೇರಿಸಿ, ವಿಶೇಷ ಪೂಜೆ ಸಲ್ಲಿಸಿದರು. ಅಭಿಷೇಕ ಮತ್ತು ಪೂಜಾ ವಿಧಿವಿಧಾನಗಳು ವೇದಘೋಷ ಹಾಗೂ ಧಾರ್ಮಿಕ ಸಂಪ್ರದಾಯಗಳಂತೆ ನೆರವೇರಿದವು. ಈ ಸಂದರ್ಭದಲ್ಲಿ ಮಠದ ಅರ್ಚಕರು, ಶಿಷ್ಯವೃಂದ ಹಾಗೂ ಭಕ್ತರು ಉಪಸ್ಥಿತರಿದ್ದು, ವಿಶೇಷ ಪೂಜೆಯಲ್ಲಿ ಭಾಗವಹಿಸಿ ದೇವರ ಅನುಗ್ರಹ…

Read More

ನೀಟ್ ಹೊರಾಟವನ್ನು ಧಾರ್ಮಿಕವಾಗಿ ಥಳುಕು ಹಾಕಿ, ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲು, ಆರೋಪಿಯ ದಸ್ತಗಿರಿ

ವಿಟ್ಲ: ನೀಟ್ ಹೋರಾಟವನ್ನು ಧಾರ್ಮಿಕವಾಗಿ ತಿರುಚಿ, ಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಅವಹೇಳನಕಾರಿ ಬರಹವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ಪಿರ್ಯಾದಿದಾರರ ದೂರಿನಂತೆ, ಸದ್ರಿಯವರು KFC KHANDIGA ಎಂಬ ವಾಟ್ಸಾಪ್ ಗ್ರೂಪ್ ನಲ್ಲಿ ಸದಸ್ಯರಾಗಿದ್ದು, ದಿನಾಂಕ:23.07.2026 ರಂದು ಸದ್ರಿ ಗ್ರೂಪ್ ನಲ್ಲಿ ಬಂದ ಸ್ಕ್ರೀನ್ ಶಾಟ್ ವೊಂದನ್ನು ನೋಡಿದಾಗ ಅದರಲ್ಲಿ ಸಮುದಾಯಗಳ ನಡುವೆ ವೈಮನಸ್ಸು ಮೂಡುವಂತೆ…

Read More

ಲಯನ್ಸ್ ಜಿಲ್ಲಾ ಅವಾರ್ಡ್ ನೈಟ್‌ನಲ್ಲಿ ಲಯನ್ ಸುದರ್ಶನ್ ಪಡಿಯಾರ್‌ಗೆ ಬಹು ಪ್ರಶಸ್ತಿಗಳ ಗೌರವ

ಮಂಗಳೂರು: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317ಡಿ ವ್ಯಾಪ್ತಿಯ ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಲಯನ್ಸ್ ಕ್ಲಬ್‌ಗಳಿಗಾಗಿ ಆಯೋಜಿಸಿದ್ದ “ಧನ್ಯೋಸಿ ಜಿಲ್ಲಾ ಅವಾರ್ಡ್ ನೈಟ್” ಕಾರ್ಯಕ್ರಮದಲ್ಲಿ ಲಯನ್ ಸುದರ್ಶನ್ ಪಡಿಯಾರ್ ವಿಟ್ಲ ಅವರಿಗೆ ವಿವಿಧ ಪ್ರತಿಷ್ಠಿತ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯಪಾಲ ಲಯನ್ ಕುಡುಪಿ ಅರವಿಂದ್ ಶೆಣೈ ಅವರು ಜಿಲ್ಲೆಯ ಬೆಸ್ಟ್ ಪಿಆರ್‌ಒ (Best PRO), ರೋರಿಂಗ್ ಲಯನ್ ಆಫ್ ದ ಇಯರ್ (Roaring Lion of the Year), ಇಂಟರ್ನ್ಯಾಷನಲ್…

Read More

ನೀಟ್ ನ್ಯಾಯಕ್ಕಾಗಿ ಉಳ್ಳಾಲದಲ್ಲಿ ಸಾವಿರಾರು ವಿದ್ಯಾರ್ಥಿಗಳ ಮೇಣದಬತ್ತಿ ಮೆರವಣಿಗೆ

ಉಳ್ಳಾಲ, ಜು. 24: ನೀಟ್ ಪರೀಕ್ಷೆಗೆ ಸಂಬಂಧಿಸಿದ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ‘ವಿ ದಿ ಪೀಪಲ್ ಆಫ್ ಇಂಡಿಯಾ–ಉಳ್ಳಾಲ’ ಹಾಗೂ ‘ಜೆನ್ Z ಆಫ್ ಉಳ್ಳಾಲ’ ಸಂಘಟನೆಗಳ ನೇತೃತ್ವದಲ್ಲಿ ಉಳ್ಳಾಲದಲ್ಲಿ ಬೃಹತ್ ಶಾಂತಿಯುತ ಮೇಣದಬತ್ತಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ವಿದ್ಯಾರ್ಥಿಗಳ ಹಕ್ಕು ಮತ್ತು ನ್ಯಾಯದ ಪರವಾಗಿ ಐಕ್ಯತೆ ಪ್ರದರ್ಶಿಸಿದರು. ಕೈಯಲ್ಲಿ ಮೇಣದಬತ್ತಿ ಹಿಡಿದು ಶಾಂತಿಯುತವಾಗಿ ಸಾಗಿದ ಪ್ರತಿಭಟನೆ ವಿದ್ಯಾರ್ಥಿಗಳ ಧ್ವನಿಯನ್ನು ಸಮಾಜದ ಗಮನಕ್ಕೆ ತರುವ ಪ್ರಯತ್ನವಾಗಿತ್ತು….

Read More

ನೀಟ್ ರದ್ದುಪಡಿಸಿ, ಸಿಇಟಿ ವ್ಯವಸ್ಥೆ ಮರುಜಾರಿ ಮಾಡಿ: ಪಿ.ಎಂ. ಮಾಲತೇಶ್ ಆಗ್ರಹ

ಬೆಂಗಳೂರು, ಜು. 24: ದೇಶದಲ್ಲಿ ನೀಟ್ ಪರೀಕ್ಷಾ ಪದ್ಧತಿಯನ್ನು ರದ್ದುಪಡಿಸಿ, ವೈದ್ಯಕೀಯ ಹಾಗೂ ತಾಂತ್ರಿಕ ಪದವಿ ಪ್ರವೇಶವನ್ನು ಮತ್ತೆ ರಾಜ್ಯ ಸರ್ಕಾರಗಳ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ವ್ಯಾಪ್ತಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಪಿ.ಎಂ. ಮಾಲತೇಶ್ ಆಗ್ರಹಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ದೇಶದಲ್ಲೇ ಮೊದಲ ಬಾರಿಗೆ ಸಿಇಟಿ ವ್ಯವಸ್ಥೆ ಜಾರಿಗೆ ತಂದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ…

Read More

ಜುಲೈ 31 ರಂದು ಬಂಟ್ವಾಳದಲ್ಲಿ ಬೃಹತ್ ಉದ್ಯೋಗ ಮೇಳ ಮಾಹಿತಿ ಶಿಬಿರ: ಆಕಾಂಕ್ಷಿ ಯುವಕರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಂದ ಮತ್ತೊಂದು ಅವಕಾಶ

ಬಂಟ್ವಾಳ: ಉದ್ಯೋಗಾಕಾಂಕ್ಷಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ನೇತೃತ್ವದಲ್ಲಿ ‘ವಿಕಸಿತ ಬಂಟ್ವಾಳ’ ವತಿಯಿಂದ ಬೃಹತ್ ಉದ್ಯೋಗ ಮೇಳ ಮಾಹಿತ ಶಿಬಿರ ಆಯೋಜಿಸಲಾಗಿದೆ.ಜುಲೈ 31 (ಶುಕ್ರವಾರ) ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ವಿವಿಧ ಕ್ಷೇತ್ರಗಳ ಆಕರ್ಷಕ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಸ್ಥಳದಲ್ಲೇ ಅಭ್ಯರ್ಥಿಗಳ ಸಂದರ್ಶನ ನಡೆಸಲಾಗುತ್ತದೆ. ಆಗಸ್ಟ್ 7 ಮತ್ತು 8ರಂದು ಮೂಡಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್…

Read More

ವಿವಾಹಿತೆ ಸಾವಿನ ಪ್ರಕರಣ: ಅತ್ತೆ, ಮಾವ ಸೇರಿ ಮೂವರು ಬಂಧನ

ಸುಳ್ಯ, ಜು. 24: ಸುಳ್ಯ ತಾಲೂಕಿನ ಸಂಪಾಜೆ ಸಮೀಪ ವಿವಾಹಿತೆ ಫಾತಿಮತ್ ನಿಶಾನಾ (24) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಮಾವ ಸಿ.ಪಿ. ಅಳವಿ (54), ಅತ್ತೆ ಆಯಿಷಾ ಸಿ.ಎ. ಹಾಗೂ ನಾದಿನಿ ಫಸೀಲಾ ಸಿ.ಎ. (29) ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಸಂಪಾಜೆಯ ಯುವಕನೊಂದಿಗೆ ವಿವಾಹವಾಗಿದ್ದ ಫಾತಿಮತ್ ನಿಶಾನಾ ಅವರು ಜುಲೈ 18ರಂದು ಮೃತಪಟ್ಟಿದ್ದರು. ಸಾವಿನ ಮುನ್ನದ ದಿನ ತಾಯಿ ಜುಬೈದಾ ಅವರಿಗೆ ಕರೆ ಮಾಡಿ, ಅತ್ತೆ-ಮಾವರಿಂದ ಕಿರುಕುಳವಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದರು…

Read More

ರಾಹುಲ್, ಪ್ರಿಯಾಂಕಾ ಬಂಧನ ಖಂಡಿಸಿ ಮೂಡುಬಿದಿರೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮೂಡುಬಿದಿರೆ, ಜು. 24: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದ ವೇಳೆ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್, ನೀಟ್ ಅಕ್ರಮದಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಅದನ್ನು ಪ್ರಶ್ನಿಸಿದವರ ವಿರುದ್ಧ ಕೇಂದ್ರ ಸರ್ಕಾರ ದಮನಕಾರಿ ಕ್ರಮ ಕೈಗೊಳ್ಳುತ್ತಿರುವುದು ಖಂಡನೀಯ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ…

Read More

ಕಾಸರಗೋಡು ರೈಲ್ವೆ ಪಾರ್ಸಲ್ ಸೇವೆ ಸ್ಥಗಿತಗೊಳಿಸದಂತೆ ಕೇಂದ್ರ ರೈಲ್ವೆ ಸಚಿವರಿಗೆ ನೇರ ಮನವಿ: ಎಂ.ಎಲ್. ಅಶ್ವಿನಿ

ಕಾಸರಗೋಡು: ಕಾಸರಗೋಡು ರೈಲ್ವೆ ನಿಲ್ದಾಣದಿಂದ ಪಾರ್ಸಲ್ ಸೇವೆಯನ್ನು ಸ್ಥಗಿತಗೊಳಿಸುವ ದಕ್ಷಿಣ ರೈಲ್ವೆಯ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಹಾಗೂ ಈ ವಿಷಯವನ್ನು ಖುದ್ದಾಗಿ ಭೇಟಿಯಾಗಿ ಮಂಡಿಸಲಾಗುವುದು ಎಂದು ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ. ಎಲ್. ಅಶ್ವಿನಿ ತಿಳಿಸಿದ್ದಾರೆ. ಕಾಸರಗೋಡು ರೈಲ್ವೆ ನಿಲ್ದಾಣದಲ್ಲಿ ಪಾರ್ಸಲ್ ಸೇವೆಯನ್ನು ಸ್ಥಗಿತಗೊಳಿಸಿದರೆ ಜಿಲ್ಲೆಯ ವಾಣಿಜ್ಯ ಕ್ಷೇತ್ರಕ್ಕೆ ದೊಡ್ಡ ಹೊಡೆತ ಬೀಳಲಿದೆ. ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳು ಸರಕು ಸಾಗಣೆಗೆ ರೈಲ್ವೆ…

Read More
error: Content is protected !!