ವಿಶ್ವ ಹಿಂದೂ ಪರಿಷತ್ ಮುಖಂಡ ರವಿಚಂದ್ರ ಶೆಟ್ಟಿ ಅಶೋಕನಗರ ಅವರ ಅಗಲಿಕೆಗೆ ಆಳವಾದ ಕಂಬನಿ: ವಿಶ್ವ ಹಿಂದೂ ಪರಿಷದ್ ಸಂತಾಪ

ವಿಶ್ವ ಹಿಂದೂ ಪರಿಷತ್ ಉರ್ವಾ ಖಂಡ ಸಮಿತಿಯ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಅತ್ಯಂತ ಶ್ರದ್ಧೆ ಹಾಗೂ ನಿಷ್ಠೆಯಿಂದ ಜವಾಬ್ದಾರಿ ನಿರ್ವಹಿಸಿದ್ದ ರವಿಚಂದ್ರ ಶೆಟ್ಟಿ ಅಶೋಕನಗರ ಅವರ ಅಕಾಲಿಕ ಮರಣಕ್ಕೆ ವಿಶ್ವ ಹಿಂದೂ ಪರಿಷತ್ ತೀವ್ರ ಸಂತಾಪ ವ್ಯಕ್ತಪಡಿಸಿದೆ. ರವಿಚಂದ್ರ ಶೆಟ್ಟಿ ಅವರು ಸನಾತನ ಧರ್ಮದ ಮೇಲಿನ ಅಪಾರ ನಿಷ್ಠೆ, ಅನನ್ಯ ಸೇವಾ ಮನೋಭಾವನೆ ಹಾಗೂ ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವಕ್ಕೆ ಹೆಸರಾಗಿದ್ದವರು. ಎಲ್ಲಾಕಾರ್ಯಕರ್ತರೊಡನೆ ಆತ್ಮೀಯರಾಗಿದ್ದ ಸರಳ ವ್ಯಕ್ತಿತ್ವ, ಸಂಘಟನೆಯ ಏಳಿಗೆಗಾಗಿ ಹಗಲಿರುಳು ಶ್ರಮಿಸಿದ ಮಹಾನ್ ಸೇವಕ….

Read More

ಉಡುಪಿ: ಜುಲೈ 25ರಂದು ‘ಗುಜ್ಜಾಡಿ ನರಸಿಂಹ ನಾಯಕ್ ಅವರ ನೆನಪುಗಳು’ ಕೃತಿ ಬಿಡುಗಡೆ

ಉಡುಪಿ: ಗುಜ್ಜಾಡಿ ಸ್ವರ್ಣ ಜುವೆಲರ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕರಾದ ದಿ. ಗುಜ್ಜಾಡಿ ನರಸಿಂಹ ನಾಯಕ್ ಅವರ ಜನ್ಮಶತಮಾನೋತ್ಸವ ವರ್ಷದ ಅಂಗವಾಗಿ ‘ಗುಜ್ಜಾಡಿ ನರಸಿಂಹ ನಾಯಕ್ ಅವರ ನೆನಪುಗಳು’ ಕೃತಿಯ ಬಿಡುಗಡೆ ಸಮಾರಂಭ ಜುಲೈ 25ರಂದು ಬೆಳಿಗ್ಗೆ 10.30ಕ್ಕೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸ್ಮಾರಕ ಸಭಾಭವನದಲ್ಲಿ ನಡೆಯಲಿದೆ ಎಂದು ನಗರಸಭೆಯ ಮಾಜಿ ಅಧ್ಯಕ್ಷ ಗುಜ್ಜಾಡಿ ಪ್ರಭಾಕರ್ ನಾಯಕ್ ತಿಳಿಸಿದರು.ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಪುಸ್ತಕವನ್ನು ಬಿಡುಗಡೆ…

Read More

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ

ಕರ್ನಾಟಕ ಅನಿವಾಸಿ ಭಾರತೀಯರ ಒಕ್ಕೂಟ ಜಿದ್ದಾ ಘಟಕದ ವತಿಯಿಂದ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಶನ್ ಬೆಂಗಳೂರು, ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ರೋಶನಿ ನಿಲಯ ಮಂಗಳೂರು ಸಹಯೋಗದೊಂದಿಗೆ ಆಗಸ್ಟ್ 8 ಮತ್ತು 9 ರಂದು ಮಂಗಳೂರಿನ ವೆಲೆನ್ಸಿಯಾ ಜೆಪ್ಪು ಎಂಬಲ್ಲಿರುವ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ಸಭಾಂಗಣದಲ್ಲಿ ಅಂಗವೈಕಲ್ಯ ವಿಕಲಚೇತನರ ಭವಿಷ್ಯದ ಜೀವನಕ್ಕಾಗಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ ನಡೆಯಲಿದೆ. ಉತ್ತಮ ಗುಣಮಟ್ಟದ ಹಗುರ ಗಾತ್ರದ ಜೈಪುರ್ ಲಿಂಬ್ ನ್ನು ಉಚಿತವಾಗಿ ಶಿಬಿರ…

Read More

ಗೋಹತ್ಯಾ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜು.27ರಂದು ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು, ಜು.22: ಗೋಮಾತೆ ರಕ್ಷಣೆ ಹಾಗೂ ದೇಶಾದ್ಯಂತ ಗೋಹತ್ಯಾ ನಿಷೇಧ ಕಾಯಿದೆ ಜಾರಿಗೊಳಿಸುವಂತೆ ಆಗ್ರಹಿಸಿ, ‘ಗೋಮಾತೆಯ ಗೌರವದ ಅಭಿಯಾನ’ದ ಅಂಗವಾಗಿ ಜುಲೈ 27ರಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಶ್ರೀಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠದ ಶ್ರೀಸಾಯಿ ಈಶ್ವರ್ ಗುರೂಜಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಮಾತೆಗೆ ರಾಷ್ಟ್ರ ತಾಯಿ, ರಾಷ್ಟ್ರೀಯ ದೇವರು ಹಾಗೂ ರಾಷ್ಟ್ರೀಯ ಪರಂಪರೆ ಎಂಬ ಗೌರವದ ಮಾನ್ಯತೆ ನೀಡಬೇಕೆಂಬ ಉದ್ದೇಶದಿಂದ…

Read More

ಉದ್ಯಾವರ ಹಿಂದೂ ರುದ್ರಭೂಮಿ ವಿವಾದ: ಸಮಾಧಿ ಧ್ವಂಸ ಆರೋಪ, ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಆಗ್ರಹ

ಕಾಸರಗೋಡು: ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ಹಲವು ವರ್ಷಗಳಿಂದ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಇತ್ತೀಚಿನ ಬೆಳವಣಿಗೆಗಳ ಕುರಿತು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್. ಅವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಿತು.ಸುಮಾರು 2.70 ಎಕರೆ ವಿಸ್ತೀರ್ಣ ಹೊಂದಿರುವ ಉದ್ಯಾವರ ಹಿಂದೂ ರುದ್ರಭೂಮಿಯಲ್ಲಿ ಅನೇಕ ವರ್ಷಗಳಿಂದ ಹಿಂದೂ ಸಮುದಾಯದ ಅಂತ್ಯಕ್ರಿಯೆಗಳು ನಡೆಯುತ್ತಿವೆ. ರುದ್ರಭೂಮಿಯ ಸುತ್ತಮುತ್ತ ಕಾನೂನು ಪ್ರಕಾರ ನಿರ್ದಿಷ್ಟ ಅಂತರದೊಳಗೆ ವಸತಿ ನಿರ್ಮಾಣಕ್ಕೆ ಅವಕಾಶ ಇರಬಾರದು. ಆದರೆ, ರುದ್ರಭೂಮಿಯ ಸುತ್ತಲೂ ಮನೆಗಳು ನಿರ್ಮಾಣವಾಗಿರುವ ಬಗ್ಗೆ ಸಭೆಯಲ್ಲಿ ಪ್ರಶ್ನೆ ಎತ್ತಲಾಯಿತು. ಇದೇ ವೇಳೆ,…

Read More

ಹೊಸಂಗಡಿಯಲ್ಲಿ ಭಕ್ತಿಭಾವದಿಂದ ಗಣೇಶೋತ್ಸವ ವಿಗ್ರಹ ಮುಹೂರ್ತ

46ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿಗ್ರಹ ಮುಹೂರ್ತವು ಇಂದು ಬೆಳಿಗ್ಗೆ 8 ಗಂಟೆಗೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ವೈದಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಕ್ಷೇತ್ರದ ಅರ್ಚಕರಾದ ಶ್ರೀ ತಿರುಮಲೇಶ್ ಆಚಾರ್ಯ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರೆ, ಶಿಲ್ಪಿ ಶ್ರೀ ಮಹೇಶ್ ಆಚಾರ್ಯ ಬಾಯಾರು ವಿಗ್ರಹ ಮುಹೂರ್ತ ನೆರವೇರಿಸಿದರು.ವಿಗ್ರಹ ಮುಹೂರ್ತವನ್ನು ಶಿಲ್ಪಿ ಶ್ರೀ ಮಹೇಶ್ ಆಚಾರ್ಯ ಬಾಯಾರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಗುರುಸ್ವಾಮಿ ಶ್ರೀ ಉದಯ ಪಾವಳ ಹಾಗೂ ಸಮಿತಿಯ ಅಧ್ಯಕ್ಷರಾದ ಶ್ರೀ ಯಾದವ ಬಡಾಜೆ, ಪ್ರ. ಕಾರ್ಯದರ್ಶಿ…

Read More

ಮಕ್ಕಳ ಜೀವದೊಂದಿಗೆ ಆಟ: ಮಗುಚಿಬಿದ್ದ ಶಾಲಾ ಆಟೋ: ಏಳು ವಿದ್ಯಾರ್ಥಿಗಳು ಗಾಯ

ಮಂಜೇಶ್ವರ /​ಕಾಸರಗೋಡು : ಶಾಲಾ ಮಕ್ಕಳ ರಕ್ಷಣೆಯನ್ನು ಗಾಳಿಗೆ ತೂರಿ, ಮಿತಿಗಿಂತ ಅಧಿಕ ಮಕ್ಕಳನ್ನು ತುಂಬಿಕೊಂಡು ತೆರಳುತ್ತಿದ್ದ ಆಟೋರಿಕ್ಷಾವೊಂದು ಪಲ್ಟಿಯಾಗಿ ಏಳು ವಿದ್ಯಾರ್ಥಿಗಳು ಹಾಗೂ ಚಾಲಕ ಗಾಯಗೊಂಡಿರುವ ಭೀಕರ ಘಟನೆ ನಗರದ ಎಂ.ಜಿ. ರಸ್ತೆಯ ಫೋರ್ಟ್ ರಸ್ತೆಯಲ್ಲಿ ಬೆಳಿಗ್ಗೆ ನಡೆದಿದೆ.ಅಪರಿಮಿತ ವೇಗ ಹಾಗೂ ಮಿತಿಮೀರಿದ ಮಕ್ಕಳ ಭಾರವೇ ಈ ದುರ್ಘಟನೆಗೆ ಕಾರಣವೆಂದು ಸಿಸಿಟಿವಿ ದೃಶ್ಯಗಳಿಂದ ತಿಳಿದುಬಂದಿದೆ. ಮೆಡೋನಾ ಮತ್ತು ಟೌನ್ ಮುನ್ಸಿಪಲ್ ಶಾಲೆಯ ಮುದ್ದು ಮಕ್ಕಳು ಗಾಯಾಳುಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋಗಳಲ್ಲಿ ಮಕ್ಕಳ ಜೀವದೊಂದಿಗೆ ಆಟವಾಡುವ ಚಾಲಕರ…

Read More

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ: ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಪ್ರಧಾನ ಮಂತ್ರಿ ನಿವಾಸದ ಬಳಿ ಪ್ರತಿಭಟನೆ ನಡೆಸಿದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ವಿರೋಧಿಸಿ ಮಂಗಳೂರಿನ ಲಾಲ್‌ಬಾಗ್‌ನ ನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕಾಂಗ್ರೆಸ್ ಧುರೀಣ ಪದ್ಮರಾಜ್ ಆರ್ ಪೂಜಾರಿ ಈ ಸಂದರ್ಭದಲ್ಲಿ ಮಾತನಾಡಿದರು. ಇದೇ ವೇಳೆ…

Read More

ಉಡುಪಿ: 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಬಂಧನ

ಉಡುಪಿ: 2002ರಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2002ರ ಸೆಪ್ಟೆಂಬರ್ 7ರಂದು ಬೆಳಿಗ್ಗೆ 8.30ರ ಸುಮಾರಿಗೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಡಾ ಗ್ರಾಮದ ಮೂಳೂರು ಮಸೀದಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಹಾರಾಷ್ಟ್ರ ನೋಂದಣಿಯ ಮಿನಿ ಗೂಡ್ಸ್ ಲಾರಿ (MH12FA6993)ಯನ್ನು ಚಾಲಕ ವಿಲಾಸ್ ಶಿಂಧೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ…

Read More

ಕಡಬ ಸಮುದಾಯ ಆರೋಗ್ಯ ಕೇಂದ್ರದ ಅಭಿವೃದ್ಧಿಗೆ ಐದು ಕೋಟಿ ರೂ ಪ್ರಸ್ತಾವನೆ: ಶಾಸಕಿ ಭಾಗೀರಥಿ ಮುರುಳ್ಯ

ಕಡಬ ಸಮುದಾಯ ಆರೋಗ್ಯ ಕೇಂದ್ರವನ್ನು ಸಮಗ್ರ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಐದು ಕೋಟಿ ರೂ ಅನುದಾನಕ್ಕೆ ್ಲ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಅವರು ಮಂಗಳವಾರ ಸಂಜೆ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಇಲ್ಲಿನ ಡಯಾಲಿಸಿಸ್ ಕೇಂದ್ರದ ಸಮಸ್ಯೆಯನ್ನು ಪರಿಶೀಲಿಸಿದ ಬಳಿಕ ಪತ್ರಕರ್ತರೊಂದಿಗೆ ಮಾನಾಡಿದರು. ನಮ್ಮ ಜಿಲ್ಲೆಯವರಾದ, ಕಡಬದ ಸಂಬoಧ ಹೊಂದಿರುವ ಯು.ಟಿ ಖಾದರ್ ಅವರು ಆರೋಗ್ಯ ಸಚಿವರಾಗಿರುವುದರಿಂದ ಮತ್ತು ಕಡಬದ ಬಗ್ಗೆ ಅವರಿಗೆ ವಿಶೇಷ ಕಾಳಜಿ ಇರುವುದರಿಂದ…

Read More
error: Content is protected !!