ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐ(ಎಂ) ಮಾನವ ಸರಪಳಿ
ಮಂಗಳೂರು, ಜುಲೈ 20: ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಸರ್ಕಾರದ ಕ್ರಮವನ್ನು ಹಿಂಪಡೆಯಬೇಕು, ವೆನ್ಲಾಕ್ ಜಿಲ್ಲಾ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಹಾಗೂ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಬೇಕು ಮತ್ತು ನಗರ ಆರೋಗ್ಯ ಕೇಂದ್ರಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ಸೋಮವಾರ ನಗರದ ವೆನ್ಲಾಕ್…
