CJP ಸಂಸತ್ ಮೆರವಣಿಗೆ; ಪ್ರತಿಭಟನೆಯನ್ನು ತಡೆದ ದೆಹಲಿ ಪೊಲೀಸರು, ಜಂತರ್ ಮಂತರ್‌ನಲ್ಲಿ ಲಾಠಿಚಾರ್ಜ್
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಕ್ಷ (CJP) ಆಯೋಜಿಸಿದ್ದ ಸಂಸತ್ ಮೆರವಣಿಗೆ ಆರಂಭವಾಗುವ ಮುನ್ನವೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದ ನೂರಾರು ಕಾರ್ಯಕರ್ತರ ಮೇಲೆ ದೆಹಲಿ ಪೊಲೀಸರು ಲಾಠಿಚಾರ್ಜ್ ನಡೆಸಿದರು. ಸ್ಥಳದಲ್ಲಿ ಭಾರೀ ಪ್ರಮಾಣದ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ದಾಟಲು ಯತ್ನಿಸಿದಾಗ ಘರ್ಷಣೆ ಉಂಟಾಯಿತು. ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದ ಕಾರಣ ಮೆರವಣಿಗೆಯನ್ನು ಪೊಲೀಸರು ತಡೆಯುವುದಾಗಿ ಮುಂಚಿತವಾಗಿಯೇ ತಿಳಿಸಿದ್ದರು. ವಿರೋಧ ಪಕ್ಷಗಳ ಸಂಸದರೂ ಪ್ರತಿಭಟನಾ…
