ಸಮಯಪ್ರಜ್ಞೆಯಿಂದ ಜೀವ ಉಳಿಸಿದ ವಿಟ್ಲ ಎಸ್‌ಐ ರಾಮಕೃಷ್ಣ; ಮಾನವೀಯ ಪೊಲೀಸ್ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ
ಬಂಟ್ವಾಳ: ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ ವೇಳೆ ಬೆಳಕಿಗೆ ಬಂದಿದೆ. ಸೂರಿಕುಮೇರ್ ಪೆಟ್ರೋಲ್ ಬಂಕ್ ಬಳಿಯ ಹೋಟೆಲ್ ಮುಂಭಾಗದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿತು. ಕಾರಿನೊಳಗೆ ಮಗು, ಮಹಿಳೆ ಹಾಗೂ ಚಾಲಕ ಸಿಲುಕಿಕೊಂಡಿದ್ದರು. ಕ್ಷಣಾರ್ಧದಲ್ಲಿ ನೆರವು ಸಿಗದಿದ್ದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇತ್ತು. ಅದೇ ಸಮಯದಲ್ಲಿ ಸಮೀಪದಲ್ಲೇ ಮತ್ತೊಂದು ಪ್ರಮುಖ ಪ್ರಕರಣದ ಸಂಬಂಧ ಕರ್ತವ್ಯ ನಿರ್ವಹಿಸುತ್ತಿದ್ದ…
