ಕುಡ್ಲ ಉದ್ಯೋಗ ಮೇಳಕ್ಕೆ 750ಕ್ಕೂ ಹೆಚ್ಚು ನೋಂದಣಿ

ಮಂಗಳೂರು: ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘದ ವತಿಯಿಂದ ಸೆ.20ರಂದು ನಗರದ ಕದ್ರಿ ಪಾರ್ಕ್‌ ಬಳಿಯ ಶ್ರೀ ಗೋರಕ್ಷನಾಥ ಜ್ಞಾನ ಮಂದಿರದಲ್ಲಿ ಬೆಳಗ್ಗೆ 10 ಗಂಟೆಯಿಂದ ‘ಕುಡ್ಲ ಉದ್ಯೋಗ ಮೇಳ 2026’ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕಿರಣ್‌ ಕುಮಾರ್‌ ಜೋಗಿ ತಿಳಿಸಿದರು. ಮಂಗಳವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ಕಳೆದ 56 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಜೋಗಿ ಸಮಾಜದ ಏಳಿಗೆ ಹಾಗೂ ಸಂರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ. ಮಂಗಳೂರು…

Read More

ಹಂಪನಕಟ್ಟೆಯಲ್ಲೇ ತುಳು ಎಂ.ಎ. ಅಧ್ಯಯನ ಕೇಂದ್ರ ಮುಂದುವರಿಸಿ

ಮಂಗಳೂರು: ನಗರದ ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನಲ್ಲೇ ತುಳು ಎಂ.ಎ. ಅಧ್ಯಯನ ಕೇಂದ್ರವನ್ನು ಮುಂದುವರಿಸಬೇಕು ಹಾಗೂ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕು ಎಂದು ‘ಪರಪು’ ತುಳು ಎಂ.ಎ. ಹಿರಿಯ ವಿದ್ಯಾರ್ಥಿಗಳ ಸಂಘ ಆಗ್ರಹಿಸಿದೆ. ಮಂಗಳೂರು ವಿಶ್ವವಿದ್ಯಾಲಯವು 2018ರಲ್ಲಿ ಉತ್ತಮ ಪಠ್ಯಕ್ರಮ ರೂಪಿಸಿ, ಹಂಪನಕಟ್ಟೆಯ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ತುಳು ಸ್ನಾತಕೋತ್ತರ ಅಧ್ಯಯನ ಕೇಂದ್ರ ಆರಂಭಿಸುವ ಮೂಲಕ ತುಳು ಭಾಷಾ ಅಧ್ಯಯನಕ್ಕೆ ಸೂಕ್ತ ಶೈಕ್ಷಣಿಕ ಸ್ವರೂಪ ನೀಡಿತ್ತು. ಏಳು ಬ್ಯಾಚ್‌ಗಳಲ್ಲಿ ಸುಮಾರು…

Read More

ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ ಸೆ.17ರಂದು ಶಿಲಾನ್ಯಾಸ

ಮಂಗಳೂರು, ಸೆ.14: ಕರಾವಳಿ ಭಾಗದ ದೀರ್ಘಕಾಲದ ಬೇಡಿಕೆಯಾಗಿರುವ ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ ಸೆ.17ರಂದು ಸಂಜೆ 4.30ಕ್ಕೆ ಬಜಪೆಯಲ್ಲಿ ಶಿಲಾನ್ಯಾಸ ನೆರವೇರಲಿದೆ ಎಂದು ಕರ್ನಾಟಕ ರಾಜ್ಯ ಹಜ್ ನಿರ್ವಹಣಾ ಸಮಿತಿ ಅಧ್ಯಕ್ಷ ಹಾಜಿ ಡಾ. ಯೆನೆಪೋಯ ಅಬ್ದುಲ್ಲ ಕುಂಞಿ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ತಾಲೂಕಿನ ಬಜಪೆಯಲ್ಲಿ ಉದ್ಯಮಿ ಇನಾಯತ್ ಅಲಿ ಅವರು ತಮ್ಮ ತಂದೆ-ತಾಯಿಯ ಸ್ಮರಣಾರ್ಥ ಹಜ್ ಭವನ ನಿರ್ಮಾಣಕ್ಕಾಗಿ ಸುಮಾರು 1.55 ಎಕರೆ ಜಮೀನನ್ನು ದಾನವಾಗಿ ನೀಡಿದ್ದಾರೆ….

Read More

ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಆರು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಬಜಾಲ್–ನಂತೂರು ನಿವಾಸಿ, 34 ವರ್ಷದ ಮಹಮ್ಮದ್ ನೌಫಲ್ ಅಲಿಯಾಸ್ ಸಫಾರಿ ನೌಫಲ್ ಬಂಧಿತ ಆರೋಪಿ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. 24/2020ರ ಪ್ರಕರಣದಲ್ಲಿ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ…

Read More

ಕೆಎಸ್‌ಆರ್‌ಟಿಸಿ ಬಸ್‌ಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತಕ್ಷಣದ ಗಮನ ಹರಿಸುವುದು ಅಗತ್ಯ: ಎಂ.ಎಲ್. ಅಶ್ವಿನಿ

ಕಾಸರಗೋಡು: ನಿನ್ನೆ ನೀಲೇಶ್ವರ ಬಳಿ, ಪಡನಕ್ಕಾಡ್ ಕೆಎಸ್‌ಆರ್‌ಟಿಸಿ ಪ್ರಿಯದರ್ಶಿನಿ ಬಸ್ ಪ್ಲಾಟ್‌ಫಾರ್ಮ್ ಕುಸಿದು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವುದು‌, ಕಾಸರಗೋಡಿನಲ್ಲಿ ಸರ್ವೀಸ್ ನಡೆಸುವ ಎಲ್ಲಾ ಸರಕಾರಿ ಬಸ್‌ಗಳ ಫಿಟ್‌ನೆಸ್ ಹಾಗೂ ಸುರಕ್ಷತೆಯ ಬಗ್ಗೆ ಕಾಸರಗೋಡು ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್. ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಕರು ಮತ್ತು ಉದ್ಯೋಗಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಬಸ್ ಗಳ ತುರ್ತು ಸುರಕ್ಷತಾ ಪರಿಶೀಲನೆ ನಡೆಸಬೇಕು. ಕೇರಳದ ಅನೇಕ ಹಳೆಯ ಸರಕಾರಿ ಬಸ್‌ಗಳು ಕಾಸರಗೋಡು ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿವೆ. ಏತನ್ಮಧ್ಯೆ,…

Read More

ಸೂರ್ಲು ಗಣೇಶ ಭಜನಾ ಮಂದಿರದಲ್ಲಿ ಧಾರ್ಮಿಕ ಸಭೆ: ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳರಿಗೆ ಗೌರವ ಸನ್ಮಾನ

ಕಾಸರಗೋಡು ಸೂರ್ಲು ಶ್ರೀ ಗಣೇಶ ಭಜನಾ ಮಂದಿರದಲ್ಲಿ ನಡೆದ ಶ್ರೀ ಗಣೇಶ ಚತುರ್ಥಿಯ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಜೈ ಹಿಂದ್ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಸೂರ್ಲು ಇವರು ವಹಿಸಿದರು. ಸಭೆಯಲ್ಲಿ ಕಾಸರಗೋಡಿನ ಧಾರ್ಮಿಕ ಮುಂದಾಳು ಡಾl ಕೆ.ಎನ್. ವೆಂಕಟ್ರಮಣ ಹೊಳ್ಳ ಇವರಿಗೆ ಶಾಲು, ಪೇಟ, ಹಾರ, ಸ್ಮರಣಿಕೆ ಹಾಗೂ ಗೌರವ ಸನ್ಮಾನ ಪತ್ರ ನೀಡಿ ಗೌರವಿಸಿದರು. ಗೋಕುಲ ಜಿಲ್ಲಾ ಕಾರ್ಯದರ್ಶಿ ಶ್ರೀ ರಾಜೇಂದ್ರ ಮವ್ವಾರು ಧಾರ್ಮಿಕ…

Read More

ಮರಳು ಮತ್ತು ಕೆಂಪುಕಲ್ಲಿನ ಬೆಲೆ ಇಳಿಕೆಗೆ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಿ— ಸಿರಾಜ್ ಬಜ್ಪೆ

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಅಕ್ಟೋಬರ್ 18ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಜಿಲ್ಲೆಯ ಜನರಲ್ಲಿ ಹಲವು ನಿರೀಕ್ಷೆಗಳು ಮೂಡಿವೆ. ಈ ಮಹತ್ವದ ಸಭೆಯನ್ನು ಜಿಲ್ಲೆಯಲ್ಲಿ ಆಯೋಜಿಸಿರುವುದಕ್ಕೆ ಮುಖ್ಯಮಂತ್ರಿ ಅವರಿಗೆ ಅಭಿನಂದನೆ ಸಲ್ಲಿಸಿರುವ ಸ್ಥಳೀಯ ಮುಖಂಡರು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಜನಪರ ನಿರ್ಧಾರಗಳನ್ನು ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಕೇವಲ ಕಾರ್ಪೊರೇಟ್ ಕಂಪನಿಗಳು ಮತ್ತು ದೊಡ್ಡ ಹೂಡಿಕೆದಾರರಿಗೆ ಅನುಕೂಲವಾಗುವ ನಿರ್ಧಾರಗಳಿಗೆ ಮಾತ್ರ ಆದ್ಯತೆ ನೀಡದೆ, ಬಡವರು,…

Read More

ಕ.ಸಾ.ಪದಿಂದ ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆ ಮತ್ತು ಕನ್ನಡ ಪತ್ರಕರ್ತರೊಂದಿಗೆ ಸೌಹಾರ್ದ ಸಂವಾದ

ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲೊಬ್ಬರಾದ ಸರ್ ಎಂ .ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆ ಮತ್ತು ಕನ್ನಡ ಪತ್ರಕರ್ತರೊಂದಿಗೆ ಸೌಹಾರ್ದ ಸಂವಾದ ಕಾರ್ಯಕ್ರಮವು ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಕಾಸರಗೋಡು ಅಡ್ಕತ್ತಬೈಲಿನಲ್ಲಿರುವ ಹೋಟೆಲ್ ಉಡುಪಿ ಗಾರ್ಡನ್ ನ ಮಥುರಾ ಸಭಾಂಗಣದಲ್ಲಿ ನಡೆಯಿತು. ಗಡಿನಾಡ ಚೇತನ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ರಾಧಾಕೃಷ್ಣ ಕೆ .ಉಳಿಯುತ್ತಡ್ಕ ಅವರು ಮುಖ್ಯ ಅತಿಥಿಯಾಗಿ ಸರ್ ಎಂ. ವಿಶ್ವೇಶ್ವರಯ್ಯನವರ ಬದುಕು, ವ್ಯಕ್ತಿತ್ವ ,ಸಾಧನೆಗಳ ಕುರಿತು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತು…

Read More

ಕಾಸರಗೋಡು :ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಹಿಂಬದಿ ಚಕ್ರ ಸ್ಫೋಟ; 70 ಪ್ರಯಾಣಿಕರು ಪಾರು

ಕಾಸರಗೋಡು : ನೀಲೇಶ್ವರದಿಂದ ಹೊಸದುರ್ಗಕ್ಕೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಭೀಕರ ಅವಘಡ ಸಂಭವಿಸಿದೆ. ಬಸ್ ಹೊಸದುರ್ಗ ಸೌತ್ ತಲುಪುತ್ತಿದ್ದಂತೆ ಹಿಂಭಾಗದ ಚಕ್ರ ಭಾರೀ ಶಬ್ದದೊಂದಿಗೆ ದಿಢೀರ್ ಸ್ಫೋಟಗೊಂಡಿದೆ. ಇದರ ತೀವ್ರತೆಗೆ ಬಸ್‌ನ ಅಡಿಭಾಗದ ಪ್ಲಾಟ್‌ಫಾರ್ಮ್ ಕಿತ್ತುಬಂದಿದ್ದು, ಹಿಂಭಾಗದ ಸೀಟಿನಲ್ಲಿದ್ದ ನೀಲೇಶ್ವರ ನಿವಾಸಿ ಎಂ.ಕೆ. ಕುಂಞಾಯಿಷ (39) ಅವರ ಕಾಲಿಗೆ ತೀವ್ರ ಪೆಟ್ಟಾಗಿದೆ. ​ಅಡಿಭಾಗದಲ್ಲಿ ಕಾಲು ಸಿಲುಕಿ ಎಡಕಾಲಿನ ಮೂಳೆ ಮುರಿದಿದ್ದು, ತಕ್ಷಣವೇ ಅವರನ್ನು ಹೊಸದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದಾಗ ಬಸ್‌ನಲ್ಲಿ ಸುಮಾರು 70 ಪ್ರಯಾಣಿಕರಿದ್ದು,…

Read More

ಕುಂಬಳೆಯಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ: ದಿಢೀರ್ ದಾಳಿ, ಟಿಪ್ಪರ್-ಜೆಸಿಬಿ ವಶ

​ಕುಂಬಳೆ : ಇಲ್ಲಿಯ ಪರಿಸರದಲ್ಲಿ ಕಾನೂನುಬಾಹಿರವಾಗಿ ಮಣ್ಣು ಅಗೆದು ಸಾಗಿಸುವ ದಂಧೆ ಎಡಬಿಡದೆ ಸಾಗುತ್ತಿದ್ದು, ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಬಂದ್ಯೋಡು ಮೀಪ್ರಿ ಎಂಬಲ್ಲಿ ಅಕ್ರಮವಾಗಿ ಮಣ್ಣು ಲೂಟಿ ಮಾಡುತ್ತಿದ್ದ ಜಾಗದ ಮೇಲೆ ಕುಂಬಳೆ ಎಸ್‌ಐ ಹಾಗೂ ಎಎಸ್‌ಐ ನೇತೃತ್ವದ ಪೊಲೀಸ್ ಪಡೆ ದಿಢೀರ್ ದಾಳಿ ನಡೆಸಿದೆ. ​ದಾಳಿ ವೇಳೆ ಮಣ್ಣು ಸಾಗಿಸುತ್ತಿದ್ದ ಒಂದು ಟಿಪ್ಪರ್ ಲಾರಿ ಹಾಗೂ ಜೆಸಿಬಿಯನ್ನು ವಶಪಡಿಸಿಕೊಳ್ಳಲಾಗಿದೆ. ಘಟನಾ ಸ್ಥಳದಲ್ಲಿದ್ದ ಜಾರ್ಖಂಡ್ ಮೂಲದ ಸಹಜಾದ್ (21) ಮತ್ತು ಮೊಹಮ್ಮದ್ ಅರ್ಬಾಸ್ (23) ಅವರನ್ನು ವಶಕ್ಕೆ…

Read More
error: Content is protected !!