ಉಡುಪಿ: ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ- ಕಾರಣ ನಿಗೂಢ!

ಉಡುಪಿ: ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬರು ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪುತ್ತೂರು ನೆಲ್ಯಾಡಿ ನಿವಾಸಿ ಜಿನ್ಸನ್ ಪಿ. ಎಮ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಗರ ಪೋಲಿಸ್ ಠಾಣೆಯ‌ ಠಾಣಾಧಿಕಾರಿ ಭರತೇಶ್, ಪಿ ಎಸ್ ಐ ನಾರಾಯಣ, ಎ.ಎಸ್.ಐ ವಿಜಯ್ ಘಟನಾ ಸ್ಥಳದಲ್ಲಿದ್ದು, ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Read More

‘ಕೆಡಿ – ದಿ ಡೆವಿಲ್’ ಹಾಡಿಗೆ ವಿವಾದದ ಬೆಂಕಿ – ಡಬಲ್ ಮೀನಿಂಗ್‌ಗೆ ಕನ್ನಡಿಗರ ಆಕ್ರೋಶ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ – ದಿ ಡೆವಿಲ್’ ಚಿತ್ರದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಬಿಡುಗಡೆಯಾದ ಬೆನ್ನಲ್ಲೇ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ನಿರ್ದೇಶಕ ಜೋಗಿ ಪ್ರೇಮ್ ಅವರ ಕಲ್ಪನೆಯಲ್ಲಿ ಮೂಡಿಬಂದಿರುವ ಈ ಹಾಡಿನ ಸಾಹಿತ್ಯವು ಅತ್ಯಂತ ಅಸಭ್ಯತೆಯಿಂದ ಕೂಡಿದೆ ಮತ್ತು ದ್ವಂದ್ವಾರ್ಥ (Double Meaning) ನೀಡುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಧ್ರುವ ಸರ್ಜಾ ನಟನೆಯ ಈ ಚಿತ್ರದ ಹಾಡಿನಲ್ಲಿ ಬಳಸಲಾಗಿರುವ ಕೆಲವು ಪದಗಳು ಸಭ್ಯ ಸಮಾಜಕ್ಕೆ ಮುಜುಗರ…

Read More

ಉಪ್ಪಿನಂಗಡಿ ಬಳಿ ಭೀಕರ ಅಪಘಾತ: ಐದು ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ

ಉಪ್ಪಿನಂಗಡಿ: ಸಮೀಪದ ಕಲ್ಲೇರಿ ಪ್ರದೇಶದಲ್ಲಿ ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಬಾಲಕಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ದುರ್ಘಟನೆ ಸಂಭವಿಸಿದೆ. ಮೃತ ಬಾಲಕಿಯನ್ನು ಸುಹೈರಾ (5) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ತಾಯಿ ಸಾಜಿರಾ (33) ಮತ್ತು ಅಜ್ಜ ಇಸ್ಮಾಯಿಲ್ (60) ಸೇರಿದ್ದಾರೆ. ತಣ್ಣಿರುಪಂತ ಗ್ರಾಮದ ಕೊಡಂಗೆ ನಿವಾಸಿ ಇಸ್ಮಾಯಿಲ್ ಅವರು ತಮ್ಮ ಮಗಳು ಸಾಜಿರಾ ಹಾಗೂ ಮೊಮ್ಮಗಳು ಸುಹೈರಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಪ್ರಯಾಣಿಸುತ್ತಿದ್ದ ವೇಳೆ, ವೇಣೂರು ಮೂಲದ ಶಿವಪ್ರಸಾದ್…

Read More

ಮಂಜೇಶ್ವರ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ: ಗೆಲುವಿಗೆ ಶ್ರಮಿಸಲು ಶೋಭಾ ಕರಂದ್ಲಾಜೆ ಕರೆ

ಬಿಜೆಪಿ ನೇತೃತ್ವದ ಎನ್‌ಡಿಎ ಮಂಜೇಶ್ವರ ಮಂಡಲ ಚುನಾವಣಾ ಕಾರ್ಯಾಲಯವು ಉಪ್ಪಳದ ಸೋಂಕಾಲಿನಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಕೇಂದ್ರ ಉದ್ಯೋಗ ಖಾತೆ ಸಹ ಸಚಿವೆ ಹಾಗೂ ಕೇರಳ ವಿಧಾನಸಭಾ ಚುನಾವಣೆಯ ಕೋಝಿಕ್ಕೋಡ್ ವಲಯ ಉಸ್ತುವಾರಿ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇನ್ನುಳಿದ ದಿನಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಗಲಿರುಳು ಶ್ರಮಿಸಿ ಮಂಜೇಶ್ವರದಲ್ಲಿ ಪಕ್ಷವನ್ನು ಗೆಲ್ಲಿಸಬೇಕು. ಕೇರಳದಲ್ಲಿ ಈ ಬಾರಿ ಬಿಜೆಪಿ ನಿರ್ಣಾಯಕ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಲಿದೆ. ಪ್ರಬಲ ತೃತೀಯ ಶಕ್ತಿಯಾಗಿ ಬೆಳೆಯುವುದು ನಿಶ್ಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದರು….

Read More

ಮೂಡುಬಿದಿರೆ ಬಳಿ ಬಸ್–ಟೆಂಪೋ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ಮೂಡುಬಿದಿರೆ: ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಮತ್ತು ಮಿನಿ ಗೂಡ್ಸ್ ಟೆಂಪೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಬಂಟ್ವಾಳ ತಾಲೂಕು ಕೆಲಿಂಜೆ ನಿವಾಸಿ Lester David D’Souza (30) ಎಂದು ಗುರುತಿಸಲಾಗಿದೆ. ಮೂಡುಬಿದಿರೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ವಿರುದ್ಧ ದಿಕ್ಕಿನಲ್ಲಿ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಮಿನಿ ಗೂಡ್ಸ್ ಟೆಂಪೋಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಟೆಂಪೋ ಚಾಲಕ ಸ್ಥಳದಲ್ಲೇ…

Read More

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ

ಪುತ್ತೂರು: ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ i ಅವರಿಗೆ ಹೈ ಕೋರ್ಟ್ ಒಫ್ ಕರ್ನಾಟಕ ಆದೇಶದಂತೆ ಆರು ತಿಂಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಲಾಗಿದೆ. ಈ ಕುರಿತು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಆದೇಶ ಹೊರಡಿಸಿದ್ದು, ಗಡಿಪಾರು ಅವಧಿ ಮಾರ್ಚ್ 16ರಿಂದ ಸೆಪ್ಟೆಂಬರ್ 16ರವರೆಗೆ ಜಾರಿಯಲ್ಲಿರಲಿದೆ. ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ…

Read More

ಉಡುಪಿ ಕಟಪಾಡಿ ಹೆದ್ದಾರಿಯಲ್ಲಿ ಮಗುಚಿದ ಗ್ಯಾಸ್ ಟ್ಯಾಂಕರ್ ತೆರವು: 16 ಗಂಟೆಗಳ ಕಾರ್ಯಾಚರಣೆಯ ಬಳಿಕ ಸಂಚಾರ ಪುನರಾರಂಭ

ಉಡುಪಿ: ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿಬಿದ್ದ ಗ್ಯಾಸ್ ಟ್ಯಾಂಕರ್ ಅನ್ನು ಸತತ 16 ಗಂಟೆಗಳ ಕಾರ್ಯಾಚರಣೆಯ ಮೂಲಕ ಅಧಿಕಾರಿಗಳು ಯಶಸ್ವಿಯಾಗಿ ತೆರವುಗೊಳಿಸಿದರು. ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ಪುನರಾರಂಭಿಸಲಾಯಿತು. ಟ್ಯಾಂಕರ್ ಮಗುಚಿದ ಸಂದರ್ಭದಲ್ಲಿ ಎಲ್‌ಪಿಜಿ ಅನಿಲ ಸೋರಿಕೆ ಸಂಭವಿಸಿದ್ದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹೆದ್ದಾರಿ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಕಾರ್ಯಾಚರಣೆ ಕೈಗೊಳ್ಳಲಾಯಿತು. ಕಾರ್ಯಾಚರಣೆಯ ಭಾಗವಾಗಿ ಮಂಗಳೂರಿನಿಂದ ಭಾರತ್ ಗ್ಯಾಸ್‌ನ…

Read More

ರೋಟರಿ ವಂದನಾ ಪ್ರಶಸ್ತಿಗೆ ಹಸಿರು ಕ್ರಾಂತಿಕಾರ ” ಡಾ. ಆರ್. ಕೆ. ನಾಯರ್” ಆಯ್ಕೆ

ಮಂಗಳೂರು : ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 21 ರಂದು ಸಂಜೆ 07.30 ರಿಂದ ರಾಜ್ಯ ಮಟ್ಟದ “ವಂದನಾ ಪ್ರಶಸ್ತಿ – 2026″ ನಗರದ ಹೊಟೇಲ್ ಸೀ ವ್ಯೂವ್‌ನ ಸಭಾಂಗಣದಲ್ಲಿ ನಡೆಯಲಿದ್ದುಪ್ರಶಸ್ತಿಯನ್ನು ಈ ಬಾರಿ ಹಸಿರು ಕ್ರಾಂತಿಕಾರ ಡಾ. ಆರ್. ಕೆ. ನಾಯರ್ ಅವರಿಗೆ ನೀಡಲಾಗುವುದೆಂದು ರೋಟರಿ ಸಂಸ್ಥೆಯ ಅಧ್ಯಕ್ಷ, ರೋ। ಭಾಸ್ಕರ್ ರೈ ಕಟ್ಟಾ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ…

Read More

ಬೆಳಿಂಜದಲ್ಲಿ ಕಿನ್ನಿಮಾಣಿ ಯುವಕೇಂದ್ರದ 44ನೇ ವಾರ್ಷಿಕೋತ್ಸವ: ಸತ್ಯನಾರಾಯಣ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮಗಳು

ಬೆಳಿಂಜ: ಶ್ರೀ ಪೂಮಾಣಿ ಕಿನ್ನಿಮಾಣಿ ಯುವಕೇಂದ್ರದ 44ನೇ ವಾರ್ಷಿಕೋತ್ಸವದ ಅಂಗವಾಗಿ ಹಾಗೂ ಬೆಳಂಜ ಕಿನ್ನಿಗೋಳಿ ಮಾಡದ ಜಾತ್ರೋತ್ಸವದ ಸುಸಂದರ್ಭದಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾರ್ಚ್ 22 ಮತ್ತು 23ರಂದು ಆಯೋಜಿಸಲಾಗಿದೆ. ಮಾರ್ಚ್ 22, ಭಾನುವಾರ ಬೆಳಿಗ್ಗೆ 8.30ಕ್ಕೆ ದೀಪಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಬಳಿಕ ಬೆಳಿಗ್ಗೆ 9 ಗಂಟೆಯಿಂದ ಶ್ರೀ ಮಹಾವಿಷ್ಣು ಭಜನಾ ಸಂಘ, ಆಲಿಂಜ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 10.30ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭವಾಗಲಿದ್ದು, ಮಧ್ಯಾಹ್ನ…

Read More

ಪುರಾಣ ಪ್ರಸಿದ್ಧ ಕಳವಾರು ಶ್ರೀ ಬೆಂಕಿನಾಥೇಶ್ವರ ಕ್ಷೇತ್ರದಲ್ಲಿ ಮಾರ್ಚ್ 20ರಿಂದ 29ರ ವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ

ಪುರಾಣ ಪ್ರಸಿದ್ಧ ಕಳವಾರು ಶ್ರೀ ಬೆಂಕಿನಾಥೇಶ್ವರ ಕ್ಷೇತ್ರದಲ್ಲಿ ಮಾರ್ಚ್ 20ರಿಂದ 29ರ ವರೆಗೆ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ದೇವಾಲಯದಲ್ಲಿ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಗಳು ನಡೆಯಲಿದ್ದು. ಮಾರ್ಚ್ 27 ಶುಕ್ರವಾರದಂದು ಬೆಳಿಗ್ಗೆ ಗಂಟೆ 10-51ಕ್ಕೆ ಒದಗುವ ವೃಷಭ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಶ್ರೀ ಎಡಪದವು ರಾಧಾಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ಶ್ರೀ ಬೆಂಕಿನಾಥೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ಬಿ.ರವೀಂದ್ರ ರಾವ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ,…

Read More
error: Content is protected !!