ಬಿಸಿ ರೋಡ್ ಯುವತಿ ಹತ್ಯೆ ಖಂಡನೀಯ; ಆರೋಪಿಗೆ ಕಠಿಣ ಶಿಕ್ಷೆಯಾಗಲಿ: ಪವನ್ ಕುಮಾರ್ ಶಿರ್ವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಸಿ ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಹತ್ಯೆ ಪ್ರಕರಣ ಅತ್ಯಂತ ಆಘಾತಕಾರಿ ಹಾಗೂ ಖಂಡನೀಯ ಘಟನೆ ಎಂದು ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಹೇಳಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಘಟನೆ ಸಮಾಜದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಸ್ವತಂತ್ರ ಬದುಕಿನ ಬಗ್ಗೆ ತೀವ್ರ ಆತಂಕ ಮೂಡಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು. ಸಮಾಜದಲ್ಲಿ ಪ್ರತಿಯೊಬ್ಬ ಹೆಣ್ಣುಮಗಳನ್ನು ತಮ್ಮ ಮನೆಯ ಮಗಳು ಹಾಗೂ ಸಹೋದರಿಯಂತೆ…

Read More

ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ

ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಸರ್ಕಾರವು ಮಹತ್ವದ ಉತ್ತೇಜನ ನೀಡಿದ್ದು, 2025-26ನೇ ಸಾಲಿನ 23 ಕಂಬಳಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹1.15 ಕೋಟಿ ಅನುದಾನ ಮಂಜೂರು ಮಾಡಿದೆ. ಪ್ರವಾಸೋದ್ಯಮ ಇಲಾಖೆಯಿಂದ ಅನುದಾನದ ಹಣ ಬಿಡುಗಡೆಗೊಂಡಿದ್ದು, ಸರ್ಕಾರದ ನಿರ್ಧಾರವನ್ನು ಕಂಬಳ ಆಯೋಜಕರು ಹಾಗೂ ಸಂಘಟಕರು ಸ್ವಾಗತಿಸಿದ್ದಾರೆ. ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿದ್ದ ಭರವಸೆಯಂತೆ ಕಂಬಳಗಳಿಗೆ ಅನುದಾನ ಬಿಡುಗಡೆ ಮಾಡಿರುವುದು ಸಂತಸದ ಸಂಗತಿ…

Read More

ಅಧಿವೇಶನದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿ ಮಂಡನೆಗೆ ಆಗ್ರಹ

ಉಡುಪಿ: ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ, ಅದರ ಕುರಿತು ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಒತ್ತಾಯಿಸಿದರು.ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಮುನ್ನ ದಿನ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರಿಂದ ವರದಿ ಸ್ವೀಕರಿಸಲಾಗಿದ್ದರೂ, ಹೊಸದಾಗಿ ಅಧಿಕಾರಕ್ಕೆ ಬಂದಿರುವ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ…

Read More

ಮಂಗಳೂರು ವಿವಿಯಲ್ಲಿ ಮಾತೃಭಾಷೆ ತುಳುವಿಗೆ ಉಳಿವಿಲ್ಲ: ಲತೇಶ್ ಬಾಕ್ರಬೈಲು

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ಭಾಷಾ ವಿಭಾಗಗಳನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಹಾಗೂ ಅವುಗಳನ್ನು ಹಂತ ಹಂತವಾಗಿ ಮುಚ್ಚುತ್ತಿರುವ ಕ್ರಮವನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ತೀವ್ರವಾಗಿ ಖಂಡಿಸಿದೆ. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಲತೇಶ್ ಬಾಕ್ರಬೈಲು, ಕರಾವಳಿ ಮತ್ತು ಮಲೆನಾಡು ಭಾಗದ ಉನ್ನತ ಶಿಕ್ಷಣದ ಪ್ರಮುಖ ಕೇಂದ್ರವಾಗಿರುವ ಮಂಗಳೂರು ವಿಶ್ವವಿದ್ಯಾನಿಲಯವು ಭಾಷೆ ಹಾಗೂ ಸಂಸ್ಕೃತಿಯ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿರಬೇಕಾದ ಸಂಸ್ಥೆಯಾಗಿದ್ದು, ಇತ್ತೀಚಿನ ಆಡಳಿತಾತ್ಮಕ ನಿರ್ಧಾರಗಳು ಶೈಕ್ಷಣಿಕ ವಾತಾವರಣಕ್ಕೆ ಗಂಭೀರ…

Read More

ವಿದ್ಯಾರ್ಥಿಗಳ ಕಣ್ಣೀರಿಗೆ ಮಾತ್ರವಲ್ಲ, ಹೋರಾಟಗಾರನ ಜೀವಕ್ಕೂ ಕೇಂದ್ರ ಸರ್ಕಾರ ನಿರ್ಲಕ್ಷ್ಯ’; ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ಆತಂಕ: ಪಿಣರಾಯಿ ವಿಜಯನ್

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಹೋರಾಟ ಮುಂದುವರಿಸುತ್ತಿರುವ ಸೋನಂ ವಾಂಗ್ಚುಕ್ ಅವರಿಗೆ ವಿರೋಧ ಪಕ್ಷದ ನಾಯಕ ಪಿಣರಾಯಿ ವಿಜಯನ್ ಬೆಂಬಲ ವ್ಯಕ್ತಪಡಿಸಿದ್ದಾರೆ.ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಪಿಣರಾಯಿ ವಿಜಯನ್, ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ವಿದ್ಯಾರ್ಥಿಗಳ ಕಣ್ಣೀರಿಗೆ ಮಾತ್ರವಲ್ಲ, ಹೋರಾಟಗಾರನ ಜೀವಕ್ಕೂ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರಿದೆ” ಎಂದು ಅವರು ಬರೆದಿದ್ದಾರೆ. ಕಳೆದ 19 ದಿನಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಯುವಕರು ಈ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ…

Read More

ಭಾರೀ ಮಳೆಗೆ ಮಂಜೇಶ್ವರದಲ್ಲಿ ಗುಡ್ಡ ಕುಸಿತ; ಬಾವಿ ಮಣ್ಣಿನಲ್ಲಿ ಸಂಪೂರ್ಣ ಮುಚ್ಚಳ

ಮಂಜೇಶ್ವರ: ನಿನ್ನೆ ಸುರಿದ ಭಾರೀ ಮಳೆಯ ಪರಿಣಾಮ ಮಂಜೇಶ್ವರದ ಪೊಯ್ಯೆ ಕಂಡ ಪ್ರದೇಶದಲ್ಲಿ ಗುಡ್ಡ ಕುಸಿದ ಘಟನೆ ನಡೆದಿದೆ.ಗುಡ್ಡದಿಂದ ಜರಿದು ಬಂದ ಅಪಾರ ಪ್ರಮಾಣದ ಮಣ್ಣು ಪುರುಷೋತ್ತಮ ಎಂಬವರ ಮನೆಯ ಬಾವಿಯೊಳಗೆ ನುಗ್ಗಿ, ಬಾವಿ ಸಂಪೂರ್ಣ ಮಣ್ಣಿನಿಂದ ಮುಚ್ಚಿಹೋಗಿದೆ. ಇದರಿಂದ ಬಾವಿಗೆ ಭಾರೀ ಹಾನಿಯಾಗಿದ್ದು, ಬಳಕೆಗೆ ಅಸಾಧ್ಯವಾಗಿದೆ. ಗುಡ್ಡ ಕುಸಿತ ಸಂಭವಿಸಿದ ಸ್ಥಳದ ಪಕ್ಕದಲ್ಲೇ ಮನೆ ಇದ್ದರೂ, ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.

Read More

ಬಿ.ಸಿ.ರೋಡ್ ಲಾವಣ್ಯ ಹತ್ಯೆ ಪ್ರಕರಣ: ಆರೋಪಿ ಚೇತನ್ ಬಂಧನ……?!!!

ಮಂಗಳೂರು, ಜು.17:* ಬಿ.ಸಿ.ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಳನ್ನು ತಲ್ವಾರ್‌ನಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಚೇತನ್‌ನನ್ನು ಪೊಲೀಸರು ಶುಕ್ರವಾರ ಬೆಳಿಗ್ಗೆ ಮಂಗಳೂರು ಸಮೀಪ ಬಂಧಿಸಿರುವುದಾಗಿ ತಿಳಿದುಬಂದಿದೆ. ಬಂಧಿತ ಆರೋಪಿ ಚೇತನ್ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿಯಾಗಿದ್ದು, ಮೃತ ಲಾವಣ್ಯ (ಕಕ್ಯಪದವು ನಿವಾಸಿ) ಅವರನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಲಾವಣ್ಯ ಆತನ ಪ್ರೀತಿಯನ್ನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಗುರುವಾರ ಸಂಜೆ ಬಿ.ಸಿ.ರೋಡ್ ಸರ್ಕಾರಿ ಬಸ್…

Read More

ಕಲಿಯುಗದ ಉದ್ಯೋಗದಾತ ಶ್ರೀ ಕೋತ್ವಾಲ್ ಪದ್ಮನಾಭ ಶೇರುಗಾರ್‌ಗೆ ‘ಕನ್ನಡ ಪಯಸ್ವಿನಿ – ಉದ್ಯೋಗ ರತ್ನ’ ಅಚೀವ್‌ಮೆಂಟ್ ಅವಾರ್ಡ್-2026

ಕಾಸರಗೋಡು, ಜು. 17: ಉದ್ಯೋಗ ಸೃಷ್ಟಿ, ಸಮಾಜಸೇವೆ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಬೆಳ್ಳಾರಿಯ ಖ್ಯಾತ ಉದ್ಯಮಿ, ಸಮಾಜಸೇವಕ ಹಾಗೂ ವರ್ಷಿಣಿ ಎಂಟರ್‌ಪ್ರೈಸಸ್‌ನ ಸಂಸ್ಥಾಪಕರಾದ ಶ್ರೀ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರಿಗೆ ಗಡಿನಾಡು ಕಾಸರಗೋಡಿನ ಪ್ರತಿಷ್ಠಿತ ಕನ್ನಡ ಸಂಸ್ಥೆಯಾದ ಕನ್ನಡ ಭವನ ನೀಡುವ ಅಂತರ್‌ರಾಜ್ಯ ‘ಕನ್ನಡ ಪಯಸ್ವಿನಿ – ಉದ್ಯೋಗ ರತ್ನ’ ಅಚೀವ್‌ಮೆಂಟ್ ಅವಾರ್ಡ್-2026ಕ್ಕೆ ಆಯ್ಕೆ ಮಾಡಲಾಗಿದೆ. ವರ್ಷಿಣಿ ಎಂಟರ್‌ಪ್ರೈಸಸ್ ಮೂಲಕ 3 ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿರುವ ಶ್ರೀ ಶೇರುಗಾರ್…

Read More

ವರ್ಕಾಡಿ : ಪೆರ್ಮನಂಜಿ – ಮುಡಿಮಾರು ರಸ್ತೆ ಕಾಮಗಾರಿಗೆ ಚಾಲನೆ

ಜಿಲ್ಲಾ ಪಂಚಾಯತಿನಿಂದ 20 ಲಕ್ಷ ರೂ. ಮೊತ್ತದ ಕಾಮಗಾರಿ ವರ್ಕಾಡಿ ಗ್ರಾಮ ಪಂಚಾಯತಿಯ ಬಹುಕಾಲದ ಜನತೆಯ ಕನಸಾಗಿದ್ದ ಪೆರ್ಮನಂಜಿ – ಮುಡಿಮಾರು ರಸ್ತೆ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಡಲಾಗಿದೆ. ಕಾಸರಗೋಡು ಜಿಲ್ಲಾ ಪಂಚಾಯತಿಯಿಂದ ಈ ರಸ್ತೆ ಕಾಮಗಾರಿಗೆ 20 ಲಕ್ಷ ರೂಪಾಯಿ ಮಂಜೂರಾಗಿದ್ದು, ಕಾಮಗಾರಿಯ ಉದ್ಘಾಟನೆ ಇಂದು ನೆರವೇರಿತು. ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ ಅವರು ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕಮಲಾಕ್ಷಿ ಕೆ….

Read More

ಬಿ.ಸಿ.ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ: ಆರೋಪಿಗೆ ಕಠಿಣ ಶಿಕ್ಷೆಯಾಗಲಿ – ಕೆ.ಎ. ಅಸ್ಮ ಹಸೈನಾರ್

ಬಂಟ್ವಾಳ: ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ, ಕಲ್ಲಡ್ಕ ನರ್ಸಿಂಗ್ ಆಸ್ಪತ್ರೆಯ ಸಿಬ್ಬಂದಿಯಾಗಿದ್ದ ಲಾವಣ್ಯ ಎಂಬ ಯುವತಿಯನ್ನು ಹಾಡುಹಗಲೇ ಸಾರ್ವಜನಿಕರ ಎದುರಲ್ಲೇ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಅಮಾನವೀಯ ಘಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇತ್ತೀಚೆಗೆ ನಡೆದ ಹಲವು ಘಟನೆಗಳು ಇದಕ್ಕೆ ಸಾಕ್ಷಿಯಾಗಿವೆ…

Read More
error: Content is protected !!