ನಾಗೋರಿ ಭೂಕುಸಿತ, ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ಎಸ್.ಎಲ್. ಭೋಜೆಗೌಡ ಭೇಟಿ

ಮಂಗಳೂರು: ಮುಂಗಾರು ಮಳೆಯಿಂದ ಹಾನಿಗೊಳಗಾದ ದಕ್ಷಿಣ ಕನ್ನಡ ಜಿಲ್ಲೆಯ ನಾಗೋರಿ ಭೂಕುಸಿತ ಹಾಗೂ ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ಅಧ್ಯಯನ ತಂಡದ ಅಧ್ಯಕ್ಷ ಎಸ್.ಎಲ್. ಭೋಜೆಗೌಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ನಾಗೋರಿ ಭೂಕುಸಿತ ಪ್ರದೇಶದಲ್ಲಿ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ ಅವರು, ಮೃತರ ಕುಟುಂಬಗಳಿಗೆ ಸಾಂತ್ವನ ಸೂಚಿಸಿ, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. ಭೂಕುಸಿತ ತಡೆಗೆ ಶಾಶ್ವತ ಕ್ರಮ, ವೈಜ್ಞಾನಿಕ ಅಧ್ಯಯನ ಹಾಗೂ ಅಪಾಯದ ಪ್ರದೇಶಗಳ ಗುರುತಿಸುವಿಕೆ ಅಗತ್ಯವೆಂದು ಅವರು…

Read More

ಬಿಸಿ ರೋಡ್ KSRTC ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಳ ಹತ್ಯೆ ಅತ್ಯಂತ ದುರದೃಷ್ಟಕರ : ಮಹಿಳೆಯರಿಗೆ ರಕ್ಷಣೆ ನೀಡಿ – ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಸೂರ್ಯವಂಶಿ

ಹಾಡು ಹಗಲೇ ಕರಾವಳಿಯನ್ನು ಬೆಚ್ಚಿ ಬಿಳಿಸುವ ಘಟನೆ ಬಿಸಿ ರೋಡ್ KSRTC ಬಸ್ ನಿಲ್ದಾಣದಲ್ಲಿ ನಡೆದಿದ್ದು ಬಸ್ ಗೆ ಕಾಯುತ್ತಿದ್ದ ಲಾವಣ್ಯ ಅವರನ್ನು ಸಾರ್ವಜನಿಕ ಸ್ಥಳದಲ್ಲಿ ಹತ್ಯೆ ಮಾಡಿರುವಂತದ್ದು ದೇಶವೇ ಬೆಚ್ಚಿ ಬೀಳುವಂತೆ ಮಾಡಿದೆ. ಇದು ಮಹಿಳೆಯರಲ್ಲಿ ಆತಂಕ ಮೂಡಿಸುವಂತೆ ಆಗಿದ್ದು ಈ ಹಿಂದೆಯೂ ಈ ರೀತಿಯ ಘಟನೆ ನಡೆದಿದ್ದು ಕಾನೂನು ವ್ಯವಸ್ಥೆ ಸಡಿಲ ಇರುವ ಕಾರಣ ಈ ರೀತಿಯ ಘಟನೆ ಪುನರವರ್ತನೆ ಆಗುತ್ತಿದೆ ಹಾಗಾಗಿ ಯಾವುದೇ ಧರ್ಮವಾಗಲಿ ಯಾವುದೇ ಜಾತಿಯಾಗಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಆ…

Read More

ಬಿ.ಸಿ ರೋಡ್‌ನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆಗೆ ಸಂಸದ ಕ್ಯಾ. ಚೌಟ ದಿಗ್ಭ್ರಮೆ

ಕಠಿಣ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆಗ್ರಹ ಮಂಗಳೂರು: ಬಿ.ಸಿ ರೋಡ್‌ ಬಸ್‌ ನಿಲ್ದಾಣದ ಬಳಿ ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್‌ ಆಗುತ್ತಿದ್ದ ಲಾವಣ್ಯ ಎಂಬ ಯುವತಿಯನ್ನು ಯುವಕನೊಬ್ಬ ಹಾಡಹಗಲೇ ಸಾರ್ವಜನಿಕವಾಗಿ ಭೀಕರ ಹತ್ಯೆ ಮಾಡಿರುವ ಘಟನೆ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸಂಸದರು, ದಕ್ಷಿಣ ಕನ್ನಡದಂಥಹ ಸುಶಿಕ್ಷಿತ ಜಿಲ್ಲೆಯಲ್ಲಿ ನಾಗರಿಕ ಸಮಾಜ ಬೆಚ್ಚಿ ಬೀಳಿಸುವಂಥ…

Read More

ಬಿಸಿ ರೋಡಿನಲ್ಲಿ ಯುವತಿಯ ಬರ್ಬರ ಹತ್ಯೆ ಖಂಡನೀಯ – ಸಿಪಿಐಎಂ

ಮಹಿಳೆಯರ ಮೇಲಿನ ಹಿಂಸಾಚಾರ ತಡೆಯಲು ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕುಬಿಸಿ ರೋಡಿನಲ್ಲಿ ಇಂದು ನಡೆದ ಯುವತಿಯ ಬರ್ಬರ ಹತ್ಯೆ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದ್ದು, ಈ ಅಮಾನವೀಯ ಕೃತ್ಯವನ್ನು ಸಿಪಿಐ(ಎಂ) ಮಂಗಳೂರು ನಗರ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ಮಹಿಳೆಯರ ಮೇಲೆ ನಡೆಯುತ್ತಿರುವ ನಿರಂತರ ಹಿಂಸಾಚಾರವನ್ನು ಕೇವಲ ಅಪರಾದ ಕೃತ್ಯವನ್ನಾಗಿ ಮಾತ್ರ ನೋಡದೆ, ಮಹಿಳೆಯನ್ನು ಕೀಳಾಗಿ ಕಾಣುವ ಪುರುಷಪ್ರದಾನ ಸಮಾಜದ ಕೀಳು ಮನೋಭಾವ, ಸಾಮಾಜಿಕ ಅಸಮಾನತೆ ಮತ್ತು ಮಾನವೀಯ ಮೌಲ್ಯಗಳ ಕುಸಿತದ ಪರಿಣಾಮವನ್ನು ಗಂಬೀರವಾಗಿ ಪರಿಗಣಿಸಬೇಕು. ಮಹಿಳೆಯರ ಸ್ವಾತಂತ್ರ್ಯ, ಸಮಾನತೆ…

Read More

ಬಿ.ಸಿ.ರೋಡ್‌ನಲ್ಲಿ ಯುವತಿಯ ಬರ್ಬರ ಹತ್ಯೆ: ಏಕಪಕ್ಷೀಯ ಪ್ರೀತಿಯ ಶಂಕೆ, ಆರೋಪಿ ಪರಾರಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಭೀಕರ ಘಟನೆಯಲ್ಲಿ 21 ವರ್ಷದ ಯುವತಿ ಲಾವಣ್ಯ ಮಾರಕಾಸ್ತ್ರದ ದಾಳಿಗೆ ಬಲಿಯಾಗಿದ್ದಾರೆ. ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿಯು ಯುವತಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಲಾವಣ್ಯ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚೇತನ್ ಎಂಬಾತ ಈ ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿ ಮೃತ ಯುವತಿಯ ದೂರದ…

Read More

ಬಂಟ್ವಾಳ ಬಸ್‌ ನಿಲ್ದಾಣದಲ್ಲಿ ಯುವತಿಯ ಮೇಲೆ ಮಾರಕಾಸ್ತ್ರ ದಾಳಿ; ಚಿಕಿತ್ಸೆ ಫಲಿಸದೆ ಸಾವು

ಬಂಟ್ವಾಳ ಕೆಎಸ್‌ಆರ್‌ಟಿಸಿ ಹೊಸ ಬಸ್‌ ನಿಲ್ದಾಣದ ಸಮೀಪ ಬಸ್‌ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳ ಮೇಲೆ ಅಪರಿಚಿತ ಯುವಕನೋರ್ವ ಹರಿತವಾದ ಆಯುಧದಿಂದ ದಾಳಿ ನಡೆಸಿದ ಪರಿಣಾಮ, ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿರುವ ದುರ್ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ಯುವತಿ ಕಕ್ಯಪದವು ಗ್ರಾಮದ ನಿವಾಸಿಯಾಗಿದ್ದು, ದಾಳಿ ನಡೆದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ತಕ್ಷಣವೇ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಯನ್ನು ಚೇತನ್ ಎಂದು…

Read More

ಭೋವಿ ಜಾತಿ ಪ್ರಮಾಣ ಪತ್ರಕ್ಕೆ ವಲಸೆ ಪ್ರಮಾಣ ಪತ್ರ ಕಡ್ಡಾಯವಲ್ಲ: ಪವನ್ ಶಿರ್ವ

ಕರ್ನಾಟಕ ಅವಿಭಾಜ್ಯ ಜಿಲ್ಲೆಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 70,000 ಭೋವಿ ಜನಾಂಗದವರು ವಾಸವಾಗಿದ್ದು ಸುಮಾರು 7-8 ವರ್ಷಗಳಿಂದ ಅಧಿಕಾರಿಗಳು ಜಾತಿ ಪ್ರಮಾಣ ಪತ್ರ ನೀಡದಿರುವುದು ಖಂಡನಿಯ ಎಂದು ಸಾಮಾಜಿಕ ಹೋರಾಟಗಾರ ಪವನ್ ಕುಮಾರ್ ಶಿರ್ವ ಆಕ್ರೋಶ ವ್ಯಕ್ತಪಡಿಸಿದರು. ಭಾರತ ಸರ್ಕಾರದ ಅಧಿಸೂಚನೆ ಸಂಖ್ಯೆ BC12016/34/76-SCT-5 ರ ದಿನಾಂಕ 27-07-1997 ರಂದು ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ 101 ಪರಿಶಿಷ್ಟ ಜಾತಿಗಳನ್ನು ನಮೋದಿಸಲಾಗಿದ್ದು ಕ್ರಮ ಸಂಖ್ಯೆ 23ರಲ್ಲಿ ಭೋವಿ ಜನಾಂಗವನ್ನು ನಮೂದಿಸಿದೆ ಎಂದು ಹೇಳಿದರು.. ಇಂದಿನ…

Read More

ವಾರಾಹಿ ಪೈಪ್‌ಲೈನ್ ಕಾಮಗಾರಿ ನಿರ್ಲಕ್ಷ್ಯ: ಆರೂರಿನಲ್ಲಿ ನದಿ ಪಾಲಾಗುತ್ತಿರುವ ಕೃಷಿಭೂಮಿ, ರೈತರ ಆತಂಕ

ಉಡುಪಿ: ಉಡುಪಿ ಜಿಲ್ಲೆಯ ಆರೂರು ಗ್ರಾಮದಲ್ಲಿ ವಾರಾಹಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿ ಬಳಿಕ ನದಿಯಲ್ಲಿ ಹಾಕಿದ್ದ ಮಣ್ಣು ಹಾಗೂ ಕಲ್ಲುಗಳನ್ನು ತೆರವುಗೊಳಿಸದ ಕಾರಣ ನದಿಯ ಹರಿವಿನ ದಿಕ್ಕು ಬದಲಾಗಿದ್ದು, ಕೃಷಿಭೂಮಿಗಳು ನದಿ ಪಾಲಾಗುತ್ತಿರುವ ಘಟನೆ ರೈತರಲ್ಲಿ ಆತಂಕ ಮೂಡಿಸಿದೆ. ಆರೂರು ಗ್ರಾಮದ ತೆಂಕಬೆಟ್ಟು ಸೇತುವೆ ಸಮೀಪ ಹರಿಯುವ ಮಡಿಸಾಲು ಹೊಳೆಯಲ್ಲಿ ವಾರಾಹಿಯಿಂದ ಮಣಿಪಾಲಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್‌ಲೈನ್ ಅಳವಡಿಸುವ ವೇಳೆ ನದಿಗೆ ಅಡ್ಡಲಾಗಿ ಮಣ್ಣು ಮತ್ತು ಕಲ್ಲುಗಳನ್ನು ಹಾಕಲಾಗಿತ್ತು. ಕಾಮಗಾರಿ ಪೂರ್ಣಗೊಂಡು ಒಂದು…

Read More

ವಂದೇ ಮಾತರಂಗೆ ರಾಷ್ಟ್ರಗೀತೆ ಸಮಾನ ಪ್ರಾಮುಖ್ಯತೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ವಂದೇ ಮಾತರಂ ಗೀತೆ ಸ್ವಾತಂತ್ರ್ಯ ಚಳುವಳಿಯಲ್ಲಿ ಬಹುಮುಖ್ಯ ಪಾತ್ರವಹಿಸಿದೆ. ಇದಕ್ಕೆ ರಾಷ್ಟ್ರಗೀತೆ ಸಮನಾದ ಪ್ರಾಮುಖ್ಯತೆ ಸಿಕ್ಕಿರುವುದು ಸಂತೋಷದ ವಿಚಾರ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬುಧವಾರ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಸಹಕಾರದಲ್ಲಿ ವಂದೇ ಮಾತರಂನ 150 ರ ಸಂಭ್ರಮಾಚರಣೆ, ಕವಿ ಚಕ್ರವರ್ತಿ ಕಾಳಿದಾಸ ಜಯಂತಿ ಅಂಗವಾಗಿ ನಡೆದ ಯುವ ರಂಗೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೀಗ ದೇಶಾದ್ಯಂತ ಸುಮಾರು 20…

Read More

ಕೊಳಲಗಿರಿ–ಪರಾರಿ ಸೇತುವೆ ದುಸ್ಥಿತಿ: ತಕ್ಷಣ ದುರಸ್ತಿ, ಸಿಸಿಟಿವಿ ಅಳವಡಿಕೆಗೆ ಆಗ್ರಹ

ಉಡುಪಿ, ಜು.16:ಉಡುಪಿ ನಗರಸಭೆ ವ್ಯಾಪ್ತಿಯ ಕೊಳಲಗಿರಿ–ಪರಾರಿ–ಮಣಿಪಾಲ ಸಂಪರ್ಕಿಸುವ ಶೀಮ್ರಾ (ಪರಂಪಳ್ಳಿ) ಸೇತುವೆ ತೀವ್ರ ದುಸ್ಥಿತಿಯಲ್ಲಿದ್ದು, ಸಾರ್ವಜನಿಕರು, ಮಹಿಳೆಯರು ಹಾಗೂ ವಾಹನ ಸವಾರರ ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದೆ. ಸೇತುವೆಯನ್ನು ತಕ್ಷಣ ದುರಸ್ತಿ ಮಾಡಿ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಉಡುಪಿ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಹಾಗೂ ಸಮಾಜಸೇವಕ ಸತೀಶ್ ಪೂಜಾರಿ ಕೀಳಂಜೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಣಿಪಾಲ, ಕೆಎಂಸಿ ಆಸ್ಪತ್ರೆ, ಬ್ರಹ್ಮಾವರ, ಪೆರಡೂರು, ಮಂದರ್ತಿ, ಕೊಕ್ಕರ್ಣೆ ಸೇರಿದಂತೆ ವಿವಿಧ ಭಾಗಗಳಿಗೆ ಸಂಪರ್ಕ…

Read More
error: Content is protected !!