ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಅಣ್ಣಾಮಲೈ ಭೇಟಿ
ಉಡುಪಿ : ತಮಿಳುನಾಡಿನ ಮುಖ್ಯಮಂತ್ರಿ ನಟ ವಿಜಯ್ ಮತ್ತು ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ಭೇಟಿಯ ಬಳಿಕ ಉಡುಪಿ ಜಿಲ್ಲೆಯ ಪ್ರಸಿದ್ಧ ಶಕ್ತಿ ಪೀಠವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಖ್ಯಾತ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ರಾಜಕೀಯ ನಾಯಕ ಕೆ. ಅಣ್ಣಾಮಲೈ ಅವರು ಮಂಗಳವಾರ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಳಕ್ಕೆ ಆಗಮಿಸಿದ ಅಣ್ಣಾಮಲೈ ಅವರನ್ನು ದೇವಳದ ಆಡಳಿತ ಮಂಡಳಿ ಹಾಗೂ ಅರ್ಚಕ ವೃಂದ ಆತ್ಮೀಯವಾಗಿ…
