ಉಡುಪಿ ಶ್ರೀಕೃಷ್ಣ ಮಠದಲ್ಲಿ ಆದಿ ಶಂಕರಾಚಾರ್ಯರ ನಿಂದನೆ ವಿವಾದ – ಕ್ಷಮೆ ಯಾಚಿಸಿದ ಹರಿಕಥೆ ಕಲಾವಿದೆ
ಉಡುಪಿ : ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಹರಿಕಥೆ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಹರಿಕಥೆ ಕಲಾವಿದೆ ವಿಡಿಯೋ ಸಂದೇಶದ ಮೂಲಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಜೊತೆಗೆ, ಈ ವಿಚಾರದಲ್ಲಿ ಉಡುಪಿ ಮಠ ಅಥವಾ ಶಿರೂರು ಮಠಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಡಿಯೋದಲ್ಲಿ ಮಾತನಾಡಿರುವ ಕಲಾವಿದೆ, ‘ಯಾರನ್ನೂ ನಿಂದಿಸುವ ಉದ್ದೇಶ ನಮಗಿರಲಿಲ್ಲ. ಯಾವುದೇ ಮಧ್ವ ಮಠದವರು ಈ ರೀತಿಯ ಹೇಳಿಕೆ ನೀಡುವಂತೆ ನಮಗೆ ಹೇಳಿಕೊಟ್ಟಿಲ್ಲ. ಪುಸ್ತಕವನ್ನು ಉಲ್ಲೇಖಿಸಿ ಓದಿದ್ದೇವೆ….
