ಸುಳ್ಯ ತಾ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ
ಕಾಸರಗೋಡು, ಜು. 13:* ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮಡಿಕೇರಿ ಸದಸ್ಯರಾಗಿರುವ, ಸಾಹಿತ್ಯ–ಸಂಸ್ಕೃತಿ ಪೋಷಕರಾದ ಶ್ರೀ ಚಂದ್ರಶೇಖರ ಪೇರಾಲು ಅವರನ್ನು ಗಡಿನಾಡು ಕಾಸರಗೋಡಿನ ಖ್ಯಾತ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ವತಿಯಿಂದ ಪ್ರದಾನ ಮಾಡಲಾಗುವ ಪ್ರತಿಷ್ಠಿತ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ – 2026”ಗೆ ಆಯ್ಕೆ ಮಾಡಲಾಗಿದೆ. ಜುಲೈ 26ರಂದು ಕನ್ನಡ ಭವನದ *ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ…
