ಕಾಸರಗೋಡು: ತಂದೆಯೊಂದಿಗೆ ಸ್ನಾನ ಮಾಡುತ್ತಿರುವ ಮಧ್ಯೆ ಹೊಳೆಗೆ ಬಿದ್ದ ಬಾಲಕ ಚಿಕಿತ್ಸೆ ಫಲಿಸದೆ ಸಾವು

ಕಾಸರಗೋಡು: ತಂದೆಯೊಂದಿಗೆ ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮಧುವಾಹಿನಿ ಹೊಳೆಗೆ ಬಿದ್ದ 8 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಕಲ್ಲಕಟ್ಟ ಕಡಂಬಟ್ಟೆಯ ಕೆ.ಎ. ಮಶೂದ್ ಎಂಬುವರ ಪುತ್ರ ಅಬ್ದುಲ್ಲ ಸಾವನ್ನಪ್ಪಿದ ದುರ್ದೈವಿ ಬಾಲಕ. ​ರವಿವಾರ ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಮಧುವಾಹಿನಿ ಹೊಳೆಯ ಕಡಂಬಟ್ಟ ಪ್ರದೇಶಕ್ಕೆ ತಂದೆ ಮತ್ತು ಮಗ ಸ್ನಾನ ಮಾಡಲು ಬಂದಿದ್ದರು. ಸ್ನಾನ ಮಾಡುತ್ತಿದ್ದಾಗ ಬಾಲಕ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾನೆ. ತಕ್ಷಣವೇ ಸ್ಥಳೀಯರು ಹೊಳೆಗೆ ಇಳಿದು ಬಾಲಕನನ್ನು ರಕ್ಷಿಸಿ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ…

Read More

ಶಿರ್ವ: ಮೇಯಲು ಬಿಟ್ಟಿದ್ದ ದನ ಕಳವು: ನಾಲ್ವರು ಆರೋಪಿಗಳ ಬಂಧನ

ಉಡುಪಿ: ಮೇಯಲು ಬಿಟ್ಟಿದ್ದ ದನಗಳನ್ನು ಟೆಂಪೋದಲ್ಲಿ ಹಿಂಸಾತ್ಮಕವಾಗಿ ಕಟ್ಟಿಹಾಕಿ ಸಾಗಿಸುತ್ತಿದ್ದ ಆರೋಪದಡಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಟೆಂಪೋ ಹಾಗೂ ದನವನ್ನು ವಶಪಡಿಸಿಕೊಂಡಿದ್ದಾರೆ. ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ಸೆ.19ರಂದು ಸಂಜೆ ವಸಂತಿ ಸುನೀತಾ ಕ್ವಾಡ್ರಸ್‌ ಅವರು ಮೇಯಲು ಬಿಟ್ಟಿದ್ದ ಐದು ದನಗಳ ಪೈಕಿ ಎರಡು ವರ್ಷದ ಕಪ್ಪು ಬಣ್ಣದ ದನವೊಂದು ಕಾಣೆಯಾಗಿತ್ತು. ಹುಡುಕಾಟ ನಡೆಸಿದಾಗ ಸಮೀಪದಲ್ಲಿದ್ದ ಟೆಂಪೋದಲ್ಲಿ ತಮ್ಮ ದನದೊಂದಿಗೆ ಮತ್ತೊಂದು ದನವನ್ನೂ ಹಿಂಸಾತ್ಮಕವಾಗಿ ಕಟ್ಟಿಹಾಕಿರುವುದು ಕಂಡುಬಂದಿತ್ತು. ಟೆಂಪೋ ನೋಂದಣಿ ಸಂಖ್ಯೆ ಪರಿಶೀಲಿಸಿದಾಗ KA…

Read More

ಹೈರಾಕ್ಸ್ ಸ್ಪರ್ಧೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ವಿನೂತನ ಸಾಧನೆ

ಮಂಗಳೂರು:ಆಡಳಿತಾತ್ಮಕ ಜವಾಬ್ದಾರಿಗಳ ಒತ್ತಡದ ನಡುವೆಯೂ ದೈಹಿಕ ಕ್ಷಮತೆಗೆ ಆದ್ಯತೆ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಮುಂಬೈನಲ್ಲಿ ನಡೆದ ‘ಹೈರಾಕ್ಸ್ 2026’ ಅಂತಾರಾಷ್ಟ್ರೀಯ ಫಿಟ್‌ನೆಸ್ ಸ್ಪರ್ಧೆಯ ಮೆನ್ಸ್ ಡಬಲ್ಸ್ ವಿಭಾಗದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಸೆಪ್ಟೆಂಬರ್ 20ರಂದು ನಡೆದ ಸ್ಪರ್ಧೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಹಾಗೂ ಮಂಗಳೂರಿನ ಕಶಾರ್ಪ್ ಫಿಟ್‌ನೆಸ್‌ನ ಜನರಲ್ ಮ್ಯಾನೇಜರ್ ಮತ್ತು ಅಂತಾರಾಷ್ಟ್ರೀಯ ಪವರ್‌ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ ಅವರ ಜೋಡಿ 1 ಗಂಟೆ 39 ನಿಮಿಷ 09 ಸೆಕೆಂಡ್‌ಗಳಲ್ಲಿ ಸ್ಪರ್ಧೆಯನ್ನು…

Read More

ಕ್ಯಾಬಿನೆಟ್ ಸಭೆಯಲ್ಲಿ ಆದಿದ್ರಾವಿಡ ಸಮುದಾಯ ನಿರ್ಲಕ್ಷ್ಯ: ಆಕ್ರೋಶ

ಮಂಗಳೂರು: ರಾಜ್ಯ ಸರ್ಕಾರದ ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಹಾಗೂ ಮಲೆನಾಡಿಗೆ ₹36,611 ಕೋಟಿ ಮೊತ್ತದ ವಿವಿಧ ಯೋಜನೆಗಳನ್ನು ಘೋಷಿಸಿದ್ದರೂ, ತುಳುನಾಡಿನ ಆದಿದ್ರಾವಿಡ ಸಮುದಾಯದ ಬೇಡಿಕೆಗಳಿಗೆ ಯಾವುದೇ ಅನುದಾನ ಅಥವಾ ಯೋಜನೆ ಘೋಷಿಸದಿರುವುದನ್ನು ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಖಂಡಿಸಿದೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಅರ್ಬಿಗುಡ್ಡೆ, ಮೂಡುಬಿದಿರೆಯ ಮಿಜಾರು ಗ್ರಾಮದ ಅಲೇರಿಯಲ್ಲಿರುವ ಶ್ರೀ ಸತ್ಯ ಸಾರಮಾನಿ ಕಾನದ ಕಟದ ಮೂಲಕ್ಷೇತ್ರದ…

Read More

ಸತೀಶ್ ಜಾರಕಿಹೊಳಿ ಮೇಲಿನ ED ದಾಳಿ ಖಂಡಿಸಿ ಕಾಂಗ್ರೆಸ್ ಖಂಡನೆ

ಮಂಗಳೂರು: ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ನಾಯಕ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸೇರಿದ ಮನೆ ಮತ್ತು ಕಚೇರಿಗಳ ಮೇಲೆ ಸೆಪ್ಟೆಂಬರ್ 9 ಮತ್ತು 10ರಂದು ಸುಮಾರು 36 ಗಂಟೆಗಳ ಕಾಲ 21 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ನಡೆಸಿದ ದಾಳಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕ ತೀವ್ರವಾಗಿ ಖಂಡಿಸಿದೆ. ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ದಿನೇಶ್ ಮೂಳೂರು, ವಿಪಕ್ಷ ನಾಯಕರ…

Read More

ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಸಂಗಮ

ಸೂರಂಬೈಲು: ಸರ್ಕಾರಿ ಪ್ರೌಢಶಾಲೆ ಸೂರಂಬೈಲು ವತಿಯಿಂದ ಹಳೇ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ‘ಹಳೇ ವಿದ್ಯಾರ್ಥಿ ಸಂಗಮ’ ಕಾರ್ಯಕ್ರಮವನ್ನು ಸೆಪ್ಟೆಂಬರ್ 20ರಂದು ಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಶಾಲೆಯಲ್ಲಿ ಹಲವು ವರ್ಷಗಳ ಹಿಂದೆ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ತಮ್ಮ ಶಾಲಾ ದಿನಗಳ ಸವಿ ನೆನಪುಗಳನ್ನು ಮೆಲುಕು ಹಾಕಿದರು. ಸಹಪಾಠಿಗಳು ಹಾಗೂ ಶಿಕ್ಷಕರೊಂದಿಗೆ ಕಳೆದ ದಿನಗಳನ್ನು ನೆನಪಿಸಿಕೊಂಡು ಪರಸ್ಪರ ತಮ್ಮ ಅನುಭವಗಳನ್ನು ಹಂಚಿಕೊಂಡರು. ಹಳೆಯ ವಿದ್ಯಾರ್ಥಿಗಳಲ್ಲಿ ಸ್ನೇಹ ಮತ್ತು ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದರ ಜೊತೆಗೆ, ಶಾಲೆಯೊಂದಿಗಿನ ಸಂಬಂಧವನ್ನು…

Read More

ಸಾಣೂರಿನಲ್ಲಿ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

ಕಾರ್ಕಳ: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿಯಾದ ಘಟನೆ ಕಾರ್ಕಳ ಸಮೀಪದ ಸಾಣೂರು ಜಂಕ್ಷನ್‌ನಲ್ಲಿ ನಡೆದಿದೆ. ಕಾರ್ಕಳ–ಮೂಡುಬಿದಿರೆ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ರಮಾನಾಥ ರೈ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಅವರ ಕಾರು ಚಾಲಕ ಹಾಗೂ ಆಪ್ತ ಸಹಾಯಕ ಸೇರಿದಂತೆ ಕೆಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ಹಾನಿಗೊಂಡಿದೆ. ಘಟನೆ ಕುರಿತು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ…

Read More

ಮಂಜೇಶ್ವರದ ಡಾನ್ ಬಾಸ್ಕೋ ಶಾಲೆಯಲ್ಲಿ ಡಿಬೇಟ್ ಸ್ಪರ್ಧೆ

ಮಂಜೇಶ್ವರ, ಸೆಪ್ಟೆಂಬರ್ 19: ಡಾನ್ ಬಾಸ್ಕೋ ಸೆಂಟ್ರಲ್ ಸ್ಕೂಲ್ ಮಂಜೇಶ್ವರದಲ್ಲಿ 2026ನೇ ಸಾಲಿನ ಡಿಬೇಟ್ ಸ್ಪರ್ಧೆ ಶನಿವಾರ ನಡೆಯಿತು. “AI – ಕೃತಕ ಬುದ್ಧಿಮತ್ತೆ: ಅನುಗ್ರಹವೋ ಶಾಪವೋ?” ಎಂಬ ವಿಷಯದ ಕುರಿತು ವಾದಪ್ರತಿವಾದ ನಡೆಯಿತು. ಬೆಳಗ್ಗೆ 10 ಗಂಟೆಗೆ ವಿದ್ಯಾರ್ಥಿಗಳ ಪ್ರಾರ್ಥನಾ ನೃತ್ಯದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶಾಲಾ ಸಂಯೋಜಕಿ ಬಿಂದು ಅಲೆಕ್ಸಾಂಡರ್ ಎಂ.ಸಿ. ಆಗಿ ಕಾರ್ಯನಿರ್ವಹಿಸಿದರು. ಪ್ರಾಂಶುಪಾಲ ಫಾ. ಕೆ.ಸಿ. ಮ್ಯಾಥ್ಯೂ ಅತಿಥಿಗಳನ್ನು ಸ್ವಾಗತಿಸಿದರು. ತುಮಕೂರು ಡಾನ್ ಬಾಸ್ಕೋ ಸೆಂಟ್ರಲ್ ಸ್ಕೂಲ್‌ನ ಪ್ರಾಂಶುಪಾಲ ಫಾ. ಜಿನ್ಸ್ ಮಡಪ್ಪಳ್ಳಿ…

Read More

ಮೇರು ಕವಿ ಶ್ರೀಕೃಷ್ಣಯ್ಯ ಅನಂತಪುರ ಅವರಿಗೆ ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ……!

ಕಾಸರಗೋಡು: ಮೇರು ಕವಿ ಶ್ರೀಕೃಷ್ಣಯ್ಯ ಅನಂತಪುರ ಅವರನ್ನು 2026ನೇ ಸಾಲಿನ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಅವರ ಸಾರಥ್ಯದಲ್ಲಿ ಅಕ್ಟೋಬರ್ 11ರಿಂದ 20ರವರೆಗೆ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ನಡೆಯಲಿರುವ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’ರ ಅಂಗವಾಗಿ ಅಕ್ಟೋಬರ್ 18ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ‘ಕಾಸರಗೋಡು ದಸರಾ ಕವಿ ಸಮ್ಮೇಳನ’ದಲ್ಲಿ ಶ್ರೀಕೃಷ್ಣಯ್ಯ ಅನಂತಪುರ ಅವರಿಗೆ ಪ್ರಶಸ್ತಿ ಪ್ರದಾನ…

Read More

ಖ್ಯಾತ ಕವಿ ಗುಣಾಜೆ ರಾಮಚಂದ್ರ ಭಟ್ ಅವರಿಗೆ ಕಾಸರಗೋಡು ದಸರಾ ಕವಿಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ

ಕಾಸರಗೋಡು: ಖ್ಯಾತ ಕವಿ, ಸಾಹಿತಿ ಗುಣಾಜೆ ರಾಮಚಂದ್ರ ಭಟ್ ಅವರು ಕಾಸರಗೋಡು ದಸರಾ ಕವಿಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026ಕ್ಕೆ ಆಯ್ಕೆಯಾಗಿದ್ದಾರೆ. ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಅವರ ಸಾರಥ್ಯದಲ್ಲಿ ಅ.11ರಿಂದ 20ರವರೆಗೆ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ನಡೆಯಲಿರುವ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026ರ ಅಂಗವಾಗಿ ಅ.18ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ಕಾಸರಗೋಡು ದಸರಾ ಕವಿ ಸಮ್ಮೇಳನದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಸಾಹಿತ್ಯ ಸಂಘಟಕ ಬಿ. ಶ್ರೀನಿವಾಸ್…

Read More
error: Content is protected !!