ನೆಟ್ಟಣ ರೈಲು ನಿಲ್ದಾಣದ ಹಳಿಗೆ ಉರುಳಿದ ಕ್ರೇನ್.. !
ಕಡಬ:ರೈಲು ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುವ ವೇಳೆ ಅಡಿಭಾಗ ಕುಸಿದು ಕ್ರೇನ್ ರೈಲು ಹಳಿಗೆ ಉರುಳಿ ಬಿದ್ದ ಘಟನೆ ಬುಧವಾರ ಕಡಬ ತಾಲೂಕಿನ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಸಂಭವಿಸಿದೆ. ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕ್ರೇನ್ ಪ್ಲಾಟ್ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಉರುಳಿ ರೈಲು ಹಳಿ ಮೇಲೆ ಅಡ್ಡಲಾಗಿ ಬಿದ್ದಿದೆ. ಪ್ಲಾಟ್ ಫಾರ್ಮ್‌ನ ಸೈಡ್ ನಲ್ಲಿದ್ದ ಕ್ರೇನ್ ಪ್ಲಾಟ್ ಫಾರ್ಮ್ನ ಬದಿ ಕುಸಿದ ಪರಿಣಾಮ ನಿಯಂತ್ರಣ ತಪ್ಪಿ ರೈಲು…