ಉಡುಪಿ ಪತ್ರಿಕಾ ಭವನ ಸಮಿತಿ: ಲೆಕ್ಕಾಚಾರ ಮಂಡನೆ, ನೂತನ ಸಮಿತಿಗೆ ಅಧಿಕಾರ ಹಸ್ತಾಂತರ

ಉಡುಪಿ: ಉಡುಪಿ ಪತ್ರಿಕಾ ಭವನ ಸಮಿತಿಯ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಸಮಿತಿಯ ನಿಕಟಪೂರ್ವ ಸಂಚಾಲಕ ಅಜಿತ್ ಆರಾಡಿ ಅಧ್ಯಕ್ಷತೆಯಲ್ಲಿ ಸೋಮವಾರ ಪತ್ರಿಕಾ ಭವನದಲ್ಲಿ ನಡೆಯಿತು.ನಿಕಟಪೂರ್ವ ಸಂಚಾಲಕ ಅಜಿತ್ ಆರಾಡಿ ವರದಿ ವಾಚಿಸಿ, 2024-2025 ಹಾಗೂ 2025-2026 ನೇ ಸಾಲಿನ ಲೆಕ್ಕಪತ್ರವನ್ನು ಸಭೆಯ ಮುಂದಿಟ್ಟರು.ಲೆಕ್ಕಪರಿಶೋಧಕರಿಂದ ಪರಿಶೋಧನೆಗೆ ಒಳಪಟ್ಟಿರುವ ವರದಿಯನ್ನು ಸದಸ್ಯರು ಚಪ್ಪಾಳೆ ತಟ್ಟುವ ಮೂಲಕ ಅಂಗೀಕರಿಸಿದರು. ಲೆಕ್ಕಪತ್ರವನ್ನು ಅಂಗೀಕರಿಸಲಾಯಿತು. ಉಡುಪಿ ಪತ್ರಿಕಾ ಭವನದಲ್ಲಿ 2022 ರ ಅಕ್ಟೋಬರ್ 19 ರಂದು ಉಡುಪಿ…

Read More

ಸಂಜೀವಿನಿ ಒಕ್ಕೂಟದಲ್ಲಿ ₹23 ಲಕ್ಷ ವಂಚನೆ: ದಂಪತಿ ಬಂಧನ

ಉಡುಪಿ, ಜು. 7: ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಪದ್ಮಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಲ್ಲಿ ₹23 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಒಕ್ಕೂಟದ ಮಾಜಿ ಮುಖ್ಯ ಪುಸ್ತಕ ಬರಹಗಾರ್ತಿ ಸುಗಂಧಿ ಹಾಗೂ ಅವರ ಪತಿ ಸಂತೋಷ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಸುಗಂಧಿ ಅವರು 2023ರಿಂದ 2025ರ ಅವಧಿಯಲ್ಲಿ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಹಣವನ್ನು ರಿಜಿಸ್ಟರ್‌ನಲ್ಲಿ ದಾಖಲಿಸಿದ್ದರೂ, ಅದನ್ನು…

Read More

ರಸ್ತೆ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರ ವಿನೂತನ ಪ್ರತಿಭಟನೆ

ಉಡುಪಿ, ಜು. 7: ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರ ದುಸ್ತರವಾಗಿರುವ ಹಿನ್ನೆಲೆಯಲ್ಲಿ ಹಲವು ಬಾರಿ ಪುರಸಭೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಾರ್ವಜನಿಕರು ರಸ್ತೆ ಮಧ್ಯದ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಕಾರ್ಕಳ ಪುರಸಭೆ ವ್ಯಾಪ್ತಿಯ ಕಲ್ಲೊಟ್ಟೆ–ಬಂಡಿಮಠ ರಸ್ತೆಯಲ್ಲಿ ನಡೆದಿದೆ. ಕಾರ್ಕಳ ಮಾರುಕಟ್ಟೆ ರಸ್ತೆಯಿಂದ ಪೆರ್ವಾಜೆ, ಕಲ್ಲೊಟ್ಟೆ ಮೂಲಕ ಬಂಡಿಮಠಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ತೀವ್ರ ಹದಗೆಟ್ಟಿದ್ದು, ವಾಹನಗಳಷ್ಟೇ ಅಲ್ಲದೆ ಪಾದಚಾರಿಗಳ…

Read More

ವಯನಾಡಿನ ಕಳ್ಳಾಡಿ ಸುರಂಗ ಮಾರ್ಗದ ಬಳಿ ಭೂಕುಸಿತ; ಹಲವು ವಾಹನಗಳು ಸಿಲುಕಿವೆ

ವಯನಾಡು: ಕಳ್ಳಾಡಿ ಸುರಂಗ ಮಾರ್ಗದ ಸಮೀಪ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಸ್ಥಳದಲ್ಲೇ ಸಿಲುಕಿಕೊಂಡಿವೆ. ಸುರಂಗ ಮಾರ್ಗ ನಿರ್ಮಾಣಕ್ಕಾಗಿ ನಿರ್ಮಿಸಲಾಗಿದ್ದ ಕಾಂಕ್ರೀಟ್ ತಡೆಗೋಡೆ ಸಂಪೂರ್ಣವಾಗಿ ಕುಸಿದಿದೆ. ಕಳೆದ ಕೆಲವು ಗಂಟೆಗಳಿಂದ ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಭೂಕುಸಿತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ರಾಜ್ಯ ಸಚಿವ ಟಿ. ಸಿದ್ದೀಕ್ ಅವರು ಎನ್‌ಡಿಆರ್‌ಎಫ್ (ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆ) ತಂಡವನ್ನು ತಕ್ಷಣ ಘಟನೆ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಆರಂಭಗೊಂಡಿದೆ. ಭೂಕುಸಿತದಿಂದ ಈ…

Read More

ವಿದ್ಯಾರ್ಥಿಗಳ ಸಮಸ್ಯೆಗಳ ಆಲಿಕೆಗೆ ‘ಛಾತ್ರೋಂಕಿ ಗೂಂಜ್’ ಅಭಿಯಾನ: ಎಂ.ಕಾಂ. ಕೋರ್ಸ್ ರದ್ದತಿ ವಿರುದ್ಧ ದ. ಕ ಎನ್‌ಎಸ್‌ಯುಐ ಗುಡುಗು …. !

ಮಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳ ಧ್ವನಿಯನ್ನು ಆಲಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ “ಛಾತ್ರೋಂಕಿ ಗೂಂಜ್” (ವಿದ್ಯಾರ್ಥಿಗಳ ಧ್ವನಿ) ಅಭಿಯಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್‌ಎಸ್‌ಯುಐ ಮತ್ತು ಯೂತ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಚಾಲನೆ ನೀಡಲಾಯಿತು. ಬಳಿಕ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ.ಕ.ಜಿಲ್ಲಾಧ್ಯಕ್ಷ ಸುಹಾನ್ ಆಳ್ವ , ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು, ಪರೀಕ್ಷಾ ವಿಭಾಗದಲ್ಲಿನ ಅಕ್ರಮಗಳು ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ…

Read More

ವಿಳಿಂಜಂ ಬಂದರು ಯೋಜನೆಗೆ ಸರ್ಕಾರ ವೆಚ್ಚ ಮಾಡಿದ್ದು ₹3,764.54 ಕೋಟಿ; ವಿರೋಧಪಕ್ಷ ಶಾಸಕರ ಪ್ರಶ್ನೆಗೆ ಮುಖ್ಯಮಂತ್ರಿ ಉತ್ತರ

ತಿರುವನಂತಪುರಂ: ವಿಳಿಂಜಂ ಬಂದರು ಯೋಜನೆಗಾಗಿ ರಾಜ್ಯ ಸರ್ಕಾರ ಇದುವರೆಗೆ ₹3,764.54 ಕೋಟಿ ವೆಚ್ಚ ಮಾಡಿದೆ ಎಂದು ಮುಖ್ಯಮಂತ್ರಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.ವಿರೋಧಪಕ್ಷ ಶಾಸಕರ ಪ್ರಶ್ನೆಗೆ ಉತ್ತರ ನೀಡಿದ ವೇಳೆ ಯೋಜನೆಗೆ ಸಂಬಂಧಿಸಿದ ವೆಚ್ಚದ ವಿವರಗಳನ್ನು ಮುಖ್ಯಮಂತ್ರಿ ಮಂಡಿಸಿದರು. ಸರ್ಕಾರವು ₹5,370 ಕೋಟಿ ವೆಚ್ಚ ಮಾಡಿದೆ ಎಂದು ಪ್ರತಿಪಕ್ಷ ಆರೋಪಿಸುತ್ತಿರುವ ನಡುವೆಯೇ ಈ ಅಧಿಕೃತ ಅಂಕಿ-ಅಂಶಗಳು ಪ್ರಕಟವಾಗಿರುವುದು ಗಮನಾರ್ಹವಾಗಿದೆ.ಮುಖ್ಯಮಂತ್ರಿಯವರ ಮಾಹಿತಿ ಪ್ರಕಾರ, ಮೊದಲ ಹಂತದಲ್ಲಿ ಕೇಂದ್ರ ಸರ್ಕಾರ ₹817.80 ಕೋಟಿ ಹಾಗೂ ಅದಾನಿ ಗುಂಪು ₹2,454 ಕೋಟಿ ಹೂಡಿಕೆ ಮಾಡಿದೆ….

Read More

ಮಂಜೇಶ್ವರ ರೈಲು ನಿಲ್ದಾಣದಲ್ಲಿ ಮಳೆಗಾಲದ ಸಂಕಷ್ಟ: ಮೇಲ್ಛಾವಣಿ ಕೊರತೆಯಿಂದ ಶೌಚಾಲಯದಲ್ಲಿ ಆಶ್ರಯ ಪಡೆಯುತ್ತಿರುವ ಪ್ರಯಾಣಿಕರು

ಮಂಜೇಶ್ವರ, ಜು. 7: ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಮಂಜೇಶ್ವರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ. ಪ್ಲಾಟ್‌ಫಾರ್ಮ್‌ನಲ್ಲಿ ಸಮರ್ಪಕ ಮೇಲ್ಛಾವಣಿ (ಶೀಟ್ ಹೊದಿಕೆ) ಇಲ್ಲದ ಕಾರಣ ಮಳೆ ಸುರಿದಾಗ ಪ್ರಯಾಣಿಕರು ಶೌಚಾಲಯದೊಳಗೆ ಆಶ್ರಯ ಪಡೆಯಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಸ್ತುತ ಪ್ಲಾಟ್‌ಫಾರ್ಮ್‌ನ ಮಧ್ಯಭಾಗದಲ್ಲಿ ಮಾತ್ರ ಭಾಗಶಃ ಮೇಲ್ಛಾವಣಿ ಅಳವಡಿಸಲಾಗಿದ್ದು, ಉಳಿದ ಭಾಗ ಸಂಪೂರ್ಣ ಬಯಲಾಗಿಯೇ ಉಳಿದಿದೆ. ಪರಿಣಾಮ ಮಳೆ ಬಂದಾಗ ಪ್ರಯಾಣಿಕರು ನೆನೆಯುವುದನ್ನು ತಪ್ಪಿಸಿಕೊಳ್ಳಲು ಶೌಚಾಲಯ ಅಥವಾ ಇತರೆ ಸಣ್ಣ ಆಶ್ರಯ ಸ್ಥಳಗಳತ್ತ ಧಾವಿಸಬೇಕಾದ ಪರಿಸ್ಥಿತಿ ಎದುರಾಗುತ್ತಿದೆ….

Read More

ವಿಬಿ-ಜಿ ರಾಮ್ ಜಿ ಯೋಜನೆ ಯಶಸ್ವಿಗೆ ಪಿಡಿಒಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ: ಸಿಇಒ ನರ್ವಡೆ ವಿನಾಯಕ ಕಾರ್ಬಾರಿ

ಮಂಗಳೂರು, ಜು. 7: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)’ (ವಿಬಿ-ಜಿ ರಾಮ್ ಜಿ) ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಸಂಪೂರ್ಣ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ ಸೂಚಿಸಿದರು. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲೆಯ ಅನುಷ್ಠಾನ ಅಧಿಕಾರಿಗಳು, ಪಂಚಾಯತ್…

Read More

ಮಲಯಾಳ ಭಾಷಾ ಮಸೂದೆ-2025 ಕುರಿತು ಸ್ಪಷ್ಟೀಕರಣ ಪತ್ರ: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮರುಪ್ರತ್ಯುತ್ತರ

ಕಾಸರಗೋಡು, ಜು. 7: ಕೇರಳ ಸರ್ಕಾರದ ಮಲಯಾಳ ಭಾಷಾ ಮಸೂದೆ-2025 ಕುರಿತು ಸಲ್ಲಿಸಿದ್ದ ಮನವಿಗೆ ಕೇರಳ ಸರ್ಕಾರದ ಆಡಳಿತ ಭಾಷಾ (Official Language) ಇಲಾಖೆಯ ಎಡಿಷನಲ್ ಮುಖ್ಯ ಕಾರ್ಯದರ್ಶಿ ಕಚೇರಿಯಿಂದ ಸ್ಪಷ್ಟೀಕರಣ ಪತ್ರ ಬಂದಿರುವುದಾಗಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ತಿಳಿಸಿದೆ. ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರು ಈ ಹಿಂದೆ ಮುಖ್ಯಮಂತ್ರಿ ಹಾಗೂ ಕೇರಳ ರಾಜ್ಯ ಭಾಷಾ ಅಲ್ಪಸಂಖ್ಯಾತರ ಸಮಿತಿಯ ಅಧ್ಯಕ್ಷರಿಗೆ ಸಲ್ಲಿಸಿದ್ದ ಮನವಿಯಲ್ಲಿ, ಮಲಯಾಳ ಭಾಷಾ ಮಸೂದೆಯ ಕೆಲ ಅಂಶಗಳು ಕನ್ನಡ ಭಾಷಿಕರು ಹಾಗೂ ಕನ್ನಡ…

Read More

ವಿದ್ಯುತ್ ಶಾಕ್ ತಗುಲಿ ಎಂಟನೇ ತರಗತಿ ವಿದ್ಯಾರ್ಥಿ ಸಾವು

​ ಕಾಸರಗೋಡು/ ತ್ರಿಶೂರು: ಮನೆಯಂಗಳದಲ್ಲಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತನನ್ನು ತ್ರಿಶೂರು ಜಿಲ್ಲೆಯ ಕೊಂಗಂಪಾರ ನಿವಾಸಿ ರಮೇಶ್ ಅವರ ಪುತ್ರ ಬದ್ರೀನಾಥ್ ಎಂದು ಗುರುತಿಸಲಾಗಿದೆ. ಈತ ತ್ರಿಶೂರು ಗುರುದೇವ ಶಾಲೆಯ ವಿದ್ಯಾರ್ಥಿಯಾಗಿದ್ದನು. ​ಮನೆಯಂಗಳದಲ್ಲಿ ಸ್ನೇಹಿತರೊಂದಿಗೆ ಫುಟ್‌ಬಾಲ್ ಆಡುತ್ತಿದ್ದಾಗ, ಮೈನ್ ಸ್ವಿಚ್‌ ಹತ್ತಿರವಿದ್ದ ಅರ್ಥಿಂಗ್ ತಂತಿಗೆ ಸ್ಪರ್ಶಿಸಿ ಬಾಲಕನಿಗೆ ವಿದ್ಯುತ್ ಶಾಕ್ ತಗುಲಿದೆ. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬದ್ರೀನಾಥ್‌ನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ…

Read More
error: Content is protected !!