ಮಲಯಾಳಿಗಳಿಗೆ ಸಂತಸದ ಸುದ್ದಿ; ಓಣಂ ಹಬ್ಬಕ್ಕೆ ಕೇರಳಕ್ಕೆ 100 ವಿಶೇಷ ರೈಲುಗಳು – ರೈಲ್ವೆ ಸಚಿವರ ಘೋಷಣೆ
ಓಣಂ ಹಬ್ಬದ ಪ್ರಯುಕ್ತ ಕೇರಳಕ್ಕೆ ಹೆಚ್ಚುವರಿಯಾಗಿ 100 ವಿಶೇಷ ರೈಲುಗಳನ್ನು ಅಳವಡಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದ್ದಾರೆ.ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಂದ ಕೇರಳದ ವಿವಿಧ ಭಾಗಗಳಿಗೆ ವಿಶೇಷ ರೈಲು ಸೇವೆಗಳು ಆರಂಭವಾಗುವ ಸಾಧ್ಯತೆಯಿದೆ. ಈ ಕುರಿತು ಅಧಿಕೃತ ವೇಳಾಪಟ್ಟಿ ಮತ್ತು ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಓಣಂ ಸಂದರ್ಭದಲ್ಲಿ ಹೆಚ್ಚಾಗುವ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಈ ಹೆಚ್ಚುವರಿ ಸೇವೆಗಳನ್ನು ಒದಗಿಸಲಾಗುತ್ತಿದೆ. ವಿಶೇಷ ರೈಲುಗಳ ವೇಳಾಪಟ್ಟಿ, ಮಾರ್ಗಗಳು ಹಾಗೂ ನಿಲ್ದಾಣಗಳ…
