ಮಂಗಳೂರು ಜೈಲು ಜಾಮರ್ ಸಮಸ್ಯೆ: ವೈಜ್ಞಾನಿಕ ಪರಿಹಾರಕ್ಕೆ ವಕೀಲರ ಒತ್ತಾಯ
ಮಂಗಳೂರು :ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಮೊಬೈಲ್ ಜಾಮರ್ ವ್ಯವಸ್ಥೆಯಿಂದ ಕಳೆದ ಎರಡು ವರ್ಷಗಳಿಂದ ಮಂಗಳೂರು ನ್ಯಾಯಾಲಯ, ಸುತ್ತಮುತ್ತಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಹೋಟೆಲ್‌ಗಳು, ವಸತಿ ವ್ಯವಸ್ಥೆಗಳು ಹಾಗೂ ವಿವಿಧ ವ್ಯಾಪಾರ-ವಾಣಿಜ್ಯ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ.ಈ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಮಂಗಳೂರು ವಕೀಲರ ಸಂಘ ಒತ್ತಾಯಿಸಿದೆ. ಮೊಬೈಲ್ ಜಾಮರ್‌ನ ಪರಿಣಾಮವಾಗಿ ನ್ಯಾಯಾಲಯದ ಆವರಣ ಹಾಗೂ ಸುತ್ತಮುತ್ತ ಮೊಬೈಲ್ ಸಂಪರ್ಕ ಸರಿಯಾಗಿ ಲಭ್ಯವಾಗದ ಕಾರಣ ಕಕ್ಷಿದಾರರು, ವಕೀಲರು, ನ್ಯಾಯಾಲಯದ ಸಿಬ್ಬಂದಿ ಹಾಗೂ ಸಾರ್ವಜನಿಕರು ಹಲವು ರೀತಿಯ ತೊಂದರೆಗಳನ್ನು ಎದುರಿಸುತ್ತಿದ್ದಾರೆ….
