21ನೇ ಪದವು ಪಶ್ಚಿಮ ವಾರ್ಡಿನಲ್ಲಿ ₹10 ಲಕ್ಷ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 21ನೇ ಪದವು ಪಶ್ಚಿಮ ವಾರ್ಡಿನ ಶ್ರೀ ಕೃಷ್ಣ ಭಜನಾ ಮಂದಿರ ಟ್ರಸ್ಟ್ (ರಿ.) ತಿಂಪೈ ಕಾಲೋನಿ, ಕಾನಡ್ಕ ಶಕ್ತಿನಗರ ಬಳಿ ರೂ.10 ಲಕ್ಷದ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಕೃಷ್ಣ ಭಜನಾ ಮಂದಿರವು ಹಲವಾರು ವರ್ಷಗಳಿಂದ ಅನೇಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದೆ. ಇಂತಹ ಪರಿಸರದಲ್ಲಿ ಅಭಿವೃದ್ಧಿಯಾಗಬೇಕು ಎಂಬ ಹಲವರ ಮನವಿ ಮೇರೆಗೆ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಮುಗಿಯುವ…