ಅಪಾಯದಲ್ಲಿ ವೃದ್ಧ: ಸ್ಥಳೀಯರ ಸಮಯಪ್ರಜ್ಞೆ ಮತ್ತು ಅಗ್ನಿಶಾಮಕ ದಳದ ಸಾಹಸಕ್ಕೆ ಜಯ

​ಕಾಸರಗೋಡು : ಚೆಮ್ನಾಡ್ ಅಣಿಯದಲ್ಲಿ ಬಾವಿಗೆ ಬಿದ್ದಿದ್ದ 65 ವರ್ಷದ ರಾಜ್‌ಮೋಹನ್ ಅವರನ್ನು ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಇವರು 25 ಅಡಿ ಆಳವಿದ್ದ ಬಾವಿಗೆ ಆಕಸ್ಮಿಕವಾಗಿ ಅವರು ಬಿದ್ದಿದ್ದರು. ಸ್ಥಳೀಯರು ತಕ್ಷಣ ರಕ್ಷಣೆಗೆ ಧಾವಿಸಿದರೂ ಸಫಲವಾಗಲಿಲ್ಲ. ಬಳಿಕ ಹಿರಿಯ ಅಗ್ನಿಶಾಮಕ ಅಧಿಕಾರಿ ವಿ.ಎಂ. ಸತೀಶನ್ ನೇತೃತ್ವದ ತಂಡ ಸ್ಥಳಕ್ಕೆ ಆಗಮಿಸಿ, ಸಾಹಸಮಯ ಕಾರ್ಯಾಚರಣೆ ನಡೆಸಿ ರಾಜ್‌ಮೋಹನ್ ಅವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದೆ. ಬಾವಿಯಲ್ಲಿ 8 ಅಡಿ ನೀರಿದ್ದರೂ, ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ…

Read More

ವಿಳಿಂಜಂ ಬಂದರಿನಲ್ಲಿ ಎಂಎಸ್‌ಸಿ ಕಂಪನಿಗೆ ಏಕಸ್ವಾಮ್ಯ ಹಕ್ಕು ಇರುವುದಿಲ್ಲ; ಸ್ಪಷ್ಟನೆ ನೀಡಿದ ಅದಾನಿ ಪೋರ್ಟ್ಸ್ ಸಿಇಒ

ಷೇರು ವರ್ಗಾವಣೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ನವೀಕರಿಸಿದ ಬಳಿಕ Adani Ports and Special Economic Zone ಸ್ಪಷ್ಟನೆ ನೀಡಿದೆ. ಷೇರು ವರ್ಗಾವಣೆ ನಡೆದರೂ *MSC Mediterranean Shipping Companyಗೆ ವಿಳಿಂಜಂ ಬಂದರಿನಲ್ಲಿ ಯಾವುದೇ ಏಕಸ್ವಾಮ್ಯ ಹಕ್ಕು (Monopoly) ಇರುವುದಿಲ್ಲ ಎಂದು ಅದಾನಿ ಪೋರ್ಟ್ಸ್‌ನ ಸಿಇಒ *Ashwani Gupta ತಿಳಿಸಿದ್ದಾರೆ. ಕೇರಳ ಸರ್ಕಾರದೊಂದಿಗೆ ಉತ್ತಮ ಸಂಬಂಧ ಮುಂದುವರಿಯಲಿದ್ದು, ರಾಜ್ಯ ಸರ್ಕಾರದ ಅನುಮತಿ ಪಡೆದ ನಂತರವೇ ಅಂತಿಮ ಒಪ್ಪಂದಕ್ಕೆ ಸಹಿ ಹಾಕಲಾಗುವುದು ಎಂದು ಅದಾನಿ ಗ್ರೂಪ್ ಬಿಡುಗಡೆ…

Read More

ಅಯೋಧ್ಯೆ ರಾಮಮಂದಿರ ದೇಣಿಗೆ ದುರ್ಬಳಕೆ; ಪ್ರತಿದಿನ ₹6–7 ಲಕ್ಷವರೆಗೆ ಕಳವು, ಚಿನ್ನ ಕರಗಿಸಿದ್ದ ಆರೋಪ, ಮುಖ್ಯ ಆರೋಪಿ ಕಾರು ಖರೀದಿಸಿದ್ದಾನೆ ಎಂದು ತನಿಖೆಯಲ್ಲಿ ಬಹಿರಂಗ

ರಾಮ ಮಂದಿರದಲ್ಲಿ ದೇಣಿಗೆಯಾಗಿ ಬಂದ ಹಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಹೊಸ ಮಾಹಿತಿಗಳು ಹೊರಬಿದ್ದಿವೆ. ಕಳವು ಮಾಡಿದ ದೇಣಿಗೆ ಹಣವನ್ನು ಬಳಸಿ ಮುಖ್ಯ ಆರೋಪಿ ಅವಿನಾಶ್ ಶುಕ್ಲ ಕಾರು ಖರೀದಿಸಿದ್ದಾನೆ ಎಂದು ತನಿಖಾ ತಂಡ ಪತ್ತೆಹಚ್ಚಿದೆ. ದೇಣಿಗೆಯ ಹಣದಿಂದಲೇ ಮಾರುತಿ ಬ್ರೇಜ್ಝ ಕಾರನ್ನು ಖರೀದಿಸಲಾಗಿದ್ದು, ಅದರ ನಿಜವಾದ ಮಾಲೀಕತ್ವವನ್ನು ಮರೆಮಾಚುವ ಉದ್ದೇಶದಿಂದ ಶುಕ್ಲ ಅವರ ಸಹೋದರ ಅಭಿಷೇಕ್ ಶುಕ್ಲ ಅವರ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಆರೋಪಿಗಳು ಪ್ರತಿದಿನ ಸುಮಾರು ₹6…

Read More

ಪಿಎಸ್‌ಸಿ ಪರೀಕ್ಷಾ ಅಕ್ರಮ; ಆಂತರಿಕ ತನಿಖೆಯನ್ನು ಪರೀಕ್ಷಾ ನಿಯಂತ್ರಕರಿಗೆ ವಹಿಸಲಾಗಿದೆ

ಪಿಎಸ್‌ಸಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದ ಅಕ್ರಮಗಳ ತನಿಖೆ ಪ್ರಹಸನವಾಗುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ. ಈ ತನಿಖೆಯನ್ನು ಪರೀಕ್ಷಾ ನಿರ್ವಹಣೆಯ ಹೊಣೆಗಾರರಾಗಿರುವ ಪರೀಕ್ಷಾ ನಿಯಂತ್ರಕರಿಗೇ ವಹಿಸಲಾಗಿದೆ. ಆಂತರಿಕ ವಿಜಿಲೆನ್ಸ್ ಮೂಲಕ ತನಿಖೆ ನಡೆಸುವ ನಿರ್ಧಾರ ಜಾರಿಯಾಗದೇ ಹೋದ ಹಿನ್ನೆಲೆಯಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಆಂತರಿಕ ವಿಜಿಲೆನ್ಸ್ ವಿಭಾಗದ ಮುಖ್ಯಸ್ಥರೂ ಪರೀಕ್ಷಾ ನಿಯಂತ್ರಕರೇ ಆಗಿರುವುದರಿಂದಲೇ ಅವರಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ ಎಂದು ಪಿಎಸ್‌ಸಿ ಸ್ಪಷ್ಟಪಡಿಸಿದೆ. ವಿಜಿಲೆನ್ಸ್ ಮತ್ತು ಭದ್ರತಾ ವಿಭಾಗಕ್ಕೆ ಪೊಲೀಸ್ ಅಧಿಕಾರಿಯೊಬ್ಬರು ನೇತೃತ್ವ ವಹಿಸುತ್ತಿದ್ದು, ಸಾಧ್ಯವಾದಷ್ಟು ಬೇಗ ತನಿಖೆ…

Read More

ಲಯನ್ಸ್ ಕ್ಲಬ್ ಮಂಗಳೂರು ನೂತನ ಪದಾಧಿಕಾರಿಗಳ ಪದಗ್ರಹಣ ಇಂದು

ಮಂಗಳೂರು, ಲಯನ್ಸ್ ಇಂಟರ್‌ನ್ಯಾಷನಲ್‌ನ ಲಯನ್ಸ್ ಕ್ಲಬ್ ಮಂಗಳೂರು ಘಟಕದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 4ರಂದು ಸಂಜೆ 7 ಗಂಟೆಗೆ ನಗರದ ಲಯನ್ಸ್ ಸೇವಾ ಭವನದಲ್ಲಿ ನಡೆಯಲಿದೆ. ನೂತನ ಅಧ್ಯಕ್ಷರಾಗಿ ಹೇಮಾ ರಾವ್, ಕಾರ್ಯದರ್ಶಿಯಾಗಿ ನ್ಯಾನ್ಸಿ ಮಸ್ಕರೆನ್ಹಾಸ್ ಹಾಗೂ ಕೋಶಾಧಿಕಾರಿಯಾಗಿ ಸೀಮಾ ವಿಜಯ ವಿಷ್ಣುಮಯ ಅಧಿಕಾರ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ರಾಜ್ಯಪಾಲ ಕವಿತಾ ಶಾಸ್ತ್ರಿ ಅವರು ಪದಗ್ರಹಣ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಗೌರವ ಅತಿಥಿಯಾಗಿ ನಿಕಟಪೂರ್ವ ಜಿಲ್ಲಾ ರಾಜ್ಯಪಾಲ ಅರವಿಂದ್ ಶೆಣೈ (ಉಡುಪಿ)…

Read More

ಸಾಹಿತಿ ಎಂ. ಬಸವರಾಜ್‌ಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’

ದಾವಣಗೆರೆ, ಜು. 4: ದಾವಣಗೆರೆಯ ಜನಪ್ರಿಯ ಸಾಹಿತಿ, 36ಕ್ಕೂ ಹೆಚ್ಚು ಕೃತಿಗಳ ಕರ್ತೃ, ಸಾಮಾಜಿಕ ಹಾಗೂ ಸಾಹಿತ್ಯ ಸಂಘಟಕರಾದ ಎಂ. ಬಸವರಾಜ್ ಅವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’ ಪ್ರದಾನ ಮಾಡಲಾಗುತ್ತಿದೆ. ಜುಲೈ 26ರಂದು ಕಾಸರಗೋಡು ಕನ್ನಡ ಭವನದಲ್ಲಿ ನಡೆಯಲಿರುವ ‘ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ’ ಹಾಗೂ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದ ಅಂಗವಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಎಂ. ಬಸವರಾಜ್ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್….

Read More

ಜು. 6ರಂದು ಕಾಸರಗೋಡು ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ಎಚ್ಚರಿಕೆ ಮುಷ್ಕರ

ಕಾಸರಗೋಡು, ಜು. 4: ಮಹಿಳೆಯರಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಜಾರಿಯಾದ ಬಳಿಕ ಖಾಸಗಿ ಬಸ್‌ಗಳ ಆದಾಯದಲ್ಲಿ ಗಣನೀಯ ಕುಸಿತ ಉಂಟಾಗಿದ್ದು, ನಷ್ಟದಲ್ಲಿರುವ ಖಾಸಗಿ ಬಸ್ ಉದ್ಯಮವನ್ನು ರಕ್ಷಿಸುವಂತೆ ಆಗ್ರಹಿಸಿ ಜುಲೈ 6ರಂದು (ಸೋಮವಾರ) ಜಿಲ್ಲೆಯಾದ್ಯಂತ ಒಂದು ದಿನದ ಎಚ್ಚರಿಕೆ ಮುಷ್ಕರ ನಡೆಸಲು ಪ್ರೈವೇಟ್ ಬಸ್ ಆಪರೇಟರ್ಸ್ ಫೆಡರೇಷನ್ ತೀರ್ಮಾನಿಸಿದೆ. ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೆಡರೇಷನ್ ಪದಾಧಿಕಾರಿಗಳು, ಕೆಎಸ್‌ಆರ್‌ಟಿಸಿ ಸಂಚರಿಸುವ ಮಾರ್ಗಗಳಲ್ಲಿ ಓಡಾಡುವ ಖಾಸಗಿ ಬಸ್‌ಗಳಿಗೆ ಡೀಸೆಲ್ ವೆಚ್ಚ ಭರಿಸುವಷ್ಟು ಆದಾಯವೂ ದೊರೆಯುತ್ತಿಲ್ಲ. ಇತರ…

Read More

ಕರೋಪಾಡಿಯಲ್ಲಿ ಅಕ್ರಮ ಕೆಂಪುಕಲ್ಲು, ಮಣ್ಣು ಗಣಿಗಾರಿಕೆ ಮೇಲೆ ದಾಳಿ: ಯಂತ್ರೋಪಕರಣ, ವೇ-ಬ್ರಿಡ್ಜ್ ವಶ

ಬಂಟ್ವಾಳ, ಜು. 4: ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ, ವಾಹನಗಳು, ಯಂತ್ರೋಪಕರಣಗಳು ಹಾಗೂ ವೇ-ಬ್ರಿಡ್ಜ್‌ನ್ನು ವಶಪಡಿಸಿಕೊಂಡಿದೆ. ದಾಳಿಯ ವೇಳೆ ಮುಳಿಗದ್ದೆ ಝಕಾರಿಯಾ ಹಾಗೂ ಇತರರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರು ಎನ್ನಲಾಗಿದ್ದು, ಪೊಲೀಸ್ ವಾಹನವನ್ನು ಕಂಡ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳ ಪರಿಶೀಲನೆ ನಡೆಸಿದಾಗ ಯಾವುದೇ ಪರವಾನಗಿ ಇಲ್ಲದೆ…

Read More

ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ: ಹಲವು ಪ್ರಕರಣಗಳ ಆರೋಪಿಗೆ ಸೈಬರ್ ಪೊಲೀಸರ ಬಲೆ

ಬಂಟ್ವಾಳ, ಜು. 4: ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು ಸೈಬರ್ ವಂಚನೆಗೆ ಬಳಸಲು ಸಹಕರಿಸುತ್ತಿದ್ದ ಆರೋಪಿಯನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಜುಬೈರ್ (32) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಜುಲೈ 3ರಂದು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣವು ದಕ್ಷಿಣ ಕನ್ನಡ ಜಿಲ್ಲಾ ಸೈಬರ್…

Read More

ಕುದ್ಮುಲ್ ರಂಗರಾವ್ ಜಯಂತಿ ಜು.5ರಂದು: ಉಚಿತ ಕಾಲೇಜು ಬ್ಯಾಗ್ ವಿತರಣೆ

ಮಂಗಳೂರು, ಜು. 4: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಪರಿಶಿಷ್ಟ ಜಾತಿ ವಿಭಾಗ) ವತಿಯಿಂದ ಮಹಾನ್ ಸಮಾಜ ಸುಧಾರಕ, ಶಿಕ್ಷಣದ ಹರಿಕಾರ ಹಾಗೂ ದಲಿತೋದ್ಧಾರದ ಮುಂಚೂಣಿ ನಾಯಕರಾದ ಕುದ್ಮುಲ್ ರಂಗರಾವ್ ಅವರ ಜಯಂತಿಯನ್ನು ಜುಲೈ 5ರಂದು (ಭಾನುವಾರ) ಬೆಳಿಗ್ಗೆ 10.30ಕ್ಕೆ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಜಯಂತಿ ಅಂಗವಾಗಿ ಪರಿಶಿಷ್ಟ ಜಾತಿಯ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಕಾಲೇಜು ಬ್ಯಾಗ್‌ಗಳನ್ನು ವಿತರಿಸಲಾಗುವುದು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ…

Read More
error: Content is protected !!