ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಜು.4ರಂದು
ಮಂಗಳೂರು: ಸಹಕಾರಿ ಪಿತಾಮಹ ದಿವಂಗತ ಮೊಳಹಳ್ಳಿ ಶಿವರಾವ್ ಅವರ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಸಮಾರಂಭವು ಜುಲೈ 4ರಂದು ಮಧ್ಯಾಹ್ನ 3 ಗಂಟೆಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ನಡೆಯಲಿದೆ. 2025–26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ಬ್ಯಾಂಕಿನ ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಗುವುದು. ಮಾಜಿ ಸಚಿವ ಹಾಗೂ…
