ನಾಗುರಿ ದುರಂತದ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕ್ಯಾ.ಚೌಟ
ಘಟನಾ ಸ್ಥಳಕ್ಕೆ ಸಂಸದರ ಭೇಟಿ; ಸಂತ್ರಸ್ತರಿಗೆ ತಕ್ಷಣ ಪುನರ್ವಸತಿ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಂಗಳೂರು: ನಾಗುರಿಯಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದಲ್ಲಿ ಗಾಯಗೊಂಡು ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಸಂಸದರು, ದುರಂತದಿಂದ ಬದುಕುಳಿದು ಸದ್ಯ ಚಿಕಿತ್ಸೆ ಪಡೆಯುತ್ತಿರುವ ಬಾಲಕೃಷ್ಣ ಮತ್ತು ಮಕ್ಕಳಾದ ಅಲ್ಕಾ ಹಾಗೂ ಅನುಷಾ ಅವರ ಆರೋಗ್ಯ…
