ಮಾದಕವಸ್ತು ಬಳಕೆ ವಿರುದ್ಧ ಪೊಲೀಸ್ ಅಭಿಯಾನ
ಮಾದಕ ವಸ್ತುಗಳ ಬಳಕೆಯ ವಿರುದ್ಧ ಮಂಗಳೂರು ನಗರದಾದ್ಯಂತ ನಡೆಯುತ್ತಿರುವ ತಪಾಸಣಾ ಅಭಿಯಾನದ ಭಾಗವಾಗಿ ಈ ವರ್ಷ 150 ಕಾಲೇಜುಗಳ 8,310 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಆ ಪೈಕಿ 98 ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಬಂದಿತ್ತು. ಆ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ಪೋಷಕರ ಮೂಲಕ ಕೌನ್ಸೆಲಿಂಗ್ ಮಾಡಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಮೊದಲ ಹಂತದ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದ ವಿದ್ಯಾರ್ಥಿಗಳ ಸ್ಥಿತಿಯನ್ನು ಪರಿಶೀಲಿಸಲು ಮತ್ತು ಸಮಾಲೋಚನೆಯ ಬಳಿಕ…
