ಕಂಕನಾಡಿ ಸಮೀಪ ತಡೆಗೋಡೆ ಕುಸಿತ: ಇಬ್ಬರು ಮಕ್ಕಳು ಸೇರಿ ಮೂವರು ಮೃತ್ಯು – ಶಾಸಕ ವೇದವ್ಯಾಸ ಕಾಮತ್ ಸಂತಾಪ
ನಗರದಲ್ಲಿ ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಂಕನಾಡಿ ಸಮೀಪ ತಡೆಗೋಡೆ ಕುಸಿದು ಮನೆ ಮೇಲೆ ಬಿದ್ದು ಸಂಭವಿಸಿದ ದುರಂತದಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಮೃತರ ಕುಟುಂಬಕ್ಕೆ ತಕ್ಷಣ ಸೂಕ್ತ ಪರಿಹಾರ ಒದಗಿಸಲು ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿ, ಅವರು…
