ಚಿತ್ರಕಲಾ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆ

ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ದಿನಾಂಕ 18.11.2025 ಮಂಗಳವಾರ ತುಳುಭವನ ಉರ್ವಸ್ಟೋರ್, ಮಂಗಳೂರು ಇಲ್ಲಿ ಆಯೋಜಿಸಿದ 2025-26ನೇ ಸಾಲಿನ ಕಲಾಪ್ರತಿಭೋತ್ಸವ ಜಿಲ್ಲಾ ಮಟ್ಟದ ಬಾಲಪ್ರತಿಭೆ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ಎಂಟನೇ ತರಗತಿ ಶ್ರೀ ರಾಮ ಆಂಗ್ಲ ಮಾಧ್ಯಮ ಶಾಲೆ ಕಲ್ಲಡ್ಕ ಇವರು ದ್ವಿತೀಯ ಸ್ಥಾನ ಪಡೆದು ಮೈಸೂರಲ್ಲಿ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Read More

ನ. 28 ರಿಂದ 30ರ ತನಕ ಭಾರತೀಯ ಸಾರ್ವಜನಿಕ ಆರೋಗ್ಯ ದಂತ ವೈದ್ಯಕೀಯ ಸಂಘದ 29ನೇ ರಾಷ್ಟ್ರೀಯ ಸಮ್ಮೇಳನ ಸಂಭ್ರಮ .. !

ಮಂಗಳೂರು: ಮಾಹೆ ಅಧೀನದ ಮಣಿಪಾಲ ದಂತ ವಿಜ್ಞಾನಗಳ ಕಾಲೇಜು ನೇತೃತ್ವದಲ್ಲಿ ಮಂಗಳೂರಿನ ಟಿಎಂಎ ಪೈ ಇಂಟ‌ರ್ ನ್ಯಾಷನಲ್ ಕನ್ವೆನ್ಗನ್ ಸೆಂಟರ್‌ನಲ್ಲಿ ನ. 28ರಿಂದ 30ರವರೆಗೆ ಭಾರತೀಯ ಸಾರ್ವಜನಿಕ ಆರೋಗ್ಯ ದಂತ ವೈದ್ಯಕೀಯ ಸಂಘದ 29ನೇ ರಾಷ್ಟ್ರೀಯ ಸಮ್ಮೇಳನ ನಡೆಯಲಿದೆ ಎಂದು ಸಮ್ಮೇಳನದ ಸಂಘಟನಾ ಅಧ್ಯಕ್ಷೆ ಡಾ. ರಮ್ಯಾ ಶೆಣೈ ಮಾಹಿತಿ ನೀಡಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ನವೆಂಬರ್ 28 ರಂದು ಸಂಜೆ 5 ಗಂಟೆಗೆ ಸಮ್ಮೇಳನ ಉದ್ಘಾಟನೆಗೊಳ್ಳಲಿದೆ. ಐಸಿಎಂಆರ್‌ನ ಹೆಚ್ಚುವರಿ ಮಹಾ…

Read More

ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 18: ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ ಪಾರ್ಕ್ಸ್ ಆಫ್ ಇಂಡಿಯಾ, ಬೆಂಗಳೂರು ಇವರ ವತಿಯಿಂದ ಆಯೋಜಿಸಲಾದ ‘ಬೆಂಗಳೂರು ಟೆಕ್ ಸಮ್ಮಿಟ್’ 28 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಮುಖ ನೀತಿಗಳ ರಚನೆ-ಐತಿಹಾಸಿಕ ಹೆಜ್ಜೆಈ ಶೃಂಗಸಭೆಯಲ್ಲಿ, ಕರ್ನಾಟಕ…

Read More

ಮಂಗಳೂರು ಮಹಾ ನಗರ ಪಾಲಿಕೆಯಿಂದ ಹೀಗೊಂದು ಪ್ರಯೋಗ … !

ಮಂಗಳೂರು: ವಿಶ್ವ ವಿದ್ಯಾಲಯ ಕಾಲೇಜು ಹಂಪನಕಟ್ಟೆ ಗ್ರಂಥಾಲದ ಸನಿಹ ಇರುವ ಮಾರ್ಗದ ಬದಿಯು ಈ ಮೊದಲು ಹೆಚ್ಚಾಗಿ ಕಸದ ರಾಶಿಯಿಂದಲೇ ತುಂಬಿರುತ್ತಿತ್ತು .ಇದು ಆ ಮಾರ್ಗವಾಗಿ ಸಂಚಾರ ನಡೆಸುವ ಪ್ರಯಾಣಿಕರಿಗೆ ಕಿರಿ ಕಿರಿಯನ್ನು ದುರ್ವಾಸನೆಯಿಂದ ಮೂಗು ಮುಚ್ಚಿ ಹೋಗುವಂತೆ ಮಾಡುತ್ತಿತ್ತು .ಇದೀಗ ಮಂಗಳೂರು ಮಹಾ ನಗರ ಪಾಲಿಕೆಯು ಆ ಪ್ರದೇಶಕ್ಕೆ ಕಸ ಹಾಕದಂತೆ ಬೇಲಿ ಹಾಕಿ ಇದು ನನ್ನ ನಗರ ಸ್ವಚ್ಛತೆ ಕಾಪಾಡುವುದು ನನ್ನ ಧರ್ಮ ಎಂಬುದಾಗಿ ಸಂದೇಶವನ್ನು ಅಲ್ಲಿ ಕಸವನ್ನು ಬಿಸಾಕಿ ಹೋಗುವ ನಾಗರಿಕರಿಗೆ ದಪ್ಪ…

Read More

ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯನ್ನು ಮೊದಲ ದಿನವೇ ಕಣ್ತುಂಬಿಕೊಂಡ 1.36 ಲಕ್ಷ ಭಕ್ತರು…. !

ಶಬರಿಮಲೆ: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಮಂಡಲ ಯಾತ್ರೆ ಸೋಮವಾರದಿಂದ ವಿಧ್ಯುಕ್ತ ವಾಗಿ ಆರಂಭವಾಯಿತು. ಮೊದಲ ದಿನವೇ 1.36 ಲಕ್ಷ ಭಕ್ತರು ಅಯ್ಯಪ್ಪನ ದರ್ಶನ ಪಡೆದರು. ಸೋಮವಾರ ಶಬರಿಮಲೆ ಋತುವಿನ ಆರಂಭದ ದಿನವಾದ್ದರಿಂದ ಪ್ರಧಾನ ಆರ್ಚಕರ ನೇತೃತ್ವದಲ್ಲಿ ಸಕಲ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಭಾನುವಾರ ಸಂಜೆಯೇ ದೇಗುಲದ ಬಾಗಿಲು ತೆರೆಯಲಾಗಿದ್ದು, ಸೋಮವಾರದಿಂದ 41 ದಿನಗಳ ಮಂಡಲ ಯಾತ್ರೆಗೆ ಚಾಲನೆ ನೀಡಲಾಯಿತು.ಈ ಸಮಯದಲ್ಲಿ ಬೇರೆ ಬೇರೆ ರಾಜ್ಯಗಳ ಲಕ್ಷಾಂತರ ಮಂದಿ ಯಾತ್ರೆ ಕೈಗೊಂಡು…

Read More

ರಜೆ ಮಾಡದ ರಾಜ ಹಾಸ್ಯಗಾರ ವಳಕುಂಜ ಅವರಿಗೆ ಕದ್ರಿ ವಿಷ್ಣು ಪ್ರಶಸ್ತಿ

ಮಂಗಳೂರು: 27 ವರ್ಷ ಗಳ ಶ್ರೀ ಕಟೀಲು ಮೇಳದ ತಿರುಗಾಟದಲ್ಲಿ 19 ವರ್ಷ ಒಂದೇ ಒಂದು ರಜೆ ಪಡೆಯದೆ ದಾಖಲೆ ಮಾಡಿರುವ ಅಪೂರ್ವ ಕಲಾರಾಧಕ, ತೆಂಕು ತಿಟ್ಟಿನ ಪ್ರಾತಿನಿಧಿಕ ಯಕ್ಷಗಾನ ರಾಜ ಹಾಸ್ಯಗಾರ ರವಿಶಂಕರ್ ವಳಕುಂಜ ಅವರಿಗೆ ” ಕದ್ರಿ ವಿಷ್ಣು ಪ್ರಶಸ್ತಿ -2025″ ನೀಡಿ ಗೌರವಿಸಲಾಯಿತು.ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕರಾದ ಲಕ್ಷ್ಮೀ ನಾರಾಯಣ ಆಸ್ರಣ್ಣ ಅವರು ಕಳೆದ 9 ವರ್ಷ ಗಳಿಂದ ಕದ್ರಿ ದೇವಸ್ಥಾನದ ಅಂಗಣದಲ್ಲಿ ಕಟೀಲು ಮೇಳದ ಸೇವೆ ಬಯಲಾಟ ನಡೆಸಿಕೊಂಡು ಬರುತ್ತಿರುವ ಕದ್ರಿ…

Read More

ಆಮ್ ಆದಿ ಪಾರ್ಟಿ ಮಂಗಳೂರು- ನಾಗರಿಕ ಅಹವಾಲು ಪೋರ್ಟಲ್ ಪ್ರಾರಂಭ

ಮಂಗಳೂರು: ಇಂದಿನಿಂದ ಮಂಗಳೂರಿನ ನಾಗರಿಕರು ಮಂಗಳೂರು ನಗರಸಭೆಯ ವ್ಯಾಪ್ತಿಯ ನಾಗರಿಕ ಸಮಸ್ಯೆಗಳ ಕುರಿತು ಅಹವಾಲುಗಳನ್ನು https://aapdakshinakannada.org/Grievance/ ಎನ್ನುವ ಪೋರ್ಟಲ್ ಮುಖಾಂತರ ಆನ್‌ಲೈನ್‌ನಲ್ಲಿ ದಾಖಲಿಸಬಹುದು ಎಂದುಪೋರ್ಟಲ್ ಸಂಚಾಲಕರಾದ ನೈಜಲ್ ಅಲ್ಬುಕರ್ಕ್ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ತಿಳಿಸಿ , ಸುತ್ತುಮುತ್ತಲಿನ ಸಮಸ್ಯೆಗಳ ಫೋಟೋಗಳು, ವೀಡಿಯೋಗಳು ಮತ್ತು ಸಮಸ್ಯೆಗಳ ಕುರಿತಾದ ವಿವರಣೆಗಳನ್ನು ಕೂಡ ನಾಗರಿಕ ಅಹವಾಲು ಪೋರ್ಟಲ್ ಸೇರಿಸಬಹುದಾಗಿದೆ . ಸ್ವಚ್ಛತೆ , ನೀರು , ರಸ್ತೆ ಮತ್ತು ಚರಂಡಿ ವ್ಯವಸ್ಥೆ , ಘನ…

Read More

ರಾಜ್ಯಮಟ್ಟದ‌ ಆಟೋಟ ಸ್ಪರ್ಧೆಯಲ್ಲಿ ಮಿಂಚಿದ ಪೃಥ್ವಿನ್ ಪ್ರಭು

ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಳದ ಶಾಲೆಯ ವಿದ್ಯಾರ್ಥಿ ಪೃಥ್ವಿನ್ ಪ್ರಭು ರಾಜ್ಯ ಮಟ್ಟದ ಸಬ್ ಜೂನಿಯರ್ ವಿಭಾಗದ 600ಮೀಟರ್ ಓಟದಲ್ಲಿ ಐದನೇ ಸ್ಥಾನವನ್ನು ಪಡೆದು ಶಾಲೆ ಕೀರ್ತಿ ತಂದಿದ್ದಾನೆ. ರಾಜ್ಯ ಮಟ್ಟದ ಸಬ್ ಜೂನಿಯರ್ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಕಾಸರಗೋಡು ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಪ್ರಮುಖ ಆಟಗಾರನಾಗಿ ಹೊರಹೊಮ್ಮಿದ್ದಾನೆ. ಮಾತ್ರವಲ್ಲ ಕಾಸರಗೋಡು ತಂಡ ರನ್ನರ್ಸ್ ಆಗಿ ಹೊರ ಹೊಮ್ಮಿದೆ.ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ರಕ್ಷಕ ಶಿಕ್ಷಕ ಸಂಘ, ಅಭಿನಂದನೆಗಳನ್ನು ಸಲ್ಲಿಸಿದರು.

Read More

ಬಹುನಿರೀಕ್ಷಿತ “ಫುಲ್ ಮೀಲ್ಸ್” ಸಿನಿಮಾ ನ.21ರಂದು ರಾಜ್ಯಾದ್ಯಂತ ಬಿಡುಗಡೆಗೆ ಸಿದ್ದ …. !

ಮಂಗಳೂರು: ಕನ್ನಡ ಭಾಷೆಯ ಬಹುನಿರೀಕ್ಷಿತ “ಫುಲ್ ಮೀಲ್ಸ್” ಸಿನಿಮಾ ನ.21ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಾಯಕ ನಟರಾದ ಲಿಖಿತ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಮೂರು ವರ್ಷಗಳ ಕಾಲ ಈ ಸಿನಿಮಾಕ್ಕೆ ದುಡಿದಿದ್ದು ಕಥೆ ತುಂಬಾ ಚೆನ್ನಾಗಿದೆ. ಚಿತ್ರದ ನಿರ್ದೇಶಕ ವಿನಾಯಕ್ ಇನ್ಸ್ಟಾಗ್ರಾಮ್ ಮೂಲಕ ನನ್ನನ್ನು ಸಂಪರ್ಕಿಸಿದರು. ಅವರು ಹೇಳಿದ ಕಥೆ ಕೇಳಿ ಖುಷಿಯಾಗಿ ಸಿನಿಮಾಕ್ಕೆ ಬಂಡವಾಳ ಹಾಕಿದ್ದೇನೆ. ಒರಿಯರ್ದೊರಿ ಅಸಲ್, ಮದಿಮೆ ಸಿನಿಮಾದಲ್ಲಿ ನಟಿಸಲು ಅವಕಾಶ ಕೊಟ್ಟು ನನ್ನನ್ನು ಬೆಳೆಸಿರುವ ಹಿರಿಯ ರಂಗಭೂಮಿ ಕಲಾವಿದ ವಿಜಯ್…

Read More

ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಡಾ. ಶ್ರೀ ಶ್ರೀ ಶ್ರೀ ಪಣವಾನಂದ ಸ್ವಾಮೀಜಿಗಳು ಬ್ರಹ್ಮಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿಯ ಭೇಟಿ …. !

ಉಡುಪಿ: ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಡಾ. ಶ್ರೀ ಶ್ರೀ ಶ್ರೀ ಪಣವಾನಂದ ಸ್ವಾಮೀಜಿಗಳು ಬ್ರಹ್ಮಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಬಿಲ್ಲವ ಸಮಾಜದ ಹಿರಿಯ ಮುಖಂಡರಾದ ಮಂಜುನಾಥ ಪೂಜಾರಿಯವರನ್ನು ಹೆಬ್ರಿಯಲ್ಲಿ ಭೇಟಿ ಮಾಡಿದರು . ಈ ಸಂದರ್ಭದಲ್ಲಿ ಡಿಸೆಂಬರ್ 7ನೇ ತಾರೀಕು ಮಂಗಳೂರು ಮತ್ತು ಉಡುಪಿ ಜಿಲ್ಲೆಗಳ ಐತಿಹಾಸಿಕ ಪಾದಯಾತ್ರೆಯ ಪೂರ್ವಭಾವಿ ಸಭೆಯ ಕುರಿತು ಚರ್ಚೆಯನ್ನು ನಡೆಸಲಾಯಿತು . ಮಂಜುನಾಥ ಪೂಜಾರಿ ಅವರನ್ನು ಭೇಟಿ ಮಾಡಿ ನಿಗಮದ ಹಲವಾರು ವಿಷಯಗಳ ಬಗ್ಗೆ ಸುಮಾರು 2…

Read More
error: Content is protected !!