ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತಸಾಗರ: ಒಂದೇ ದಿನ 40 ಸಾವಿರಕ್ಕೂ ಅಧಿಕ ಭಕ್ತರ ಆಗಮನ

ಸುಬ್ರಹ್ಮಣ್ಯ, : ಸರಣಿ ರಜೆಗಳ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ 40 ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಶುಕ್ರವಾರದ ರಜೆ, ನಾಲ್ಕನೇ ಶನಿವಾರ ಹಾಗೂ ಭಾನುವಾರದ ರಜೆ ಒಂದೇ ಸಂದರ್ಭದಲ್ಲಿ ಬಂದಿರುವುದರಿಂದ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಶುಕ್ರವಾರದಿಂದಲೇ ಕ್ಷೇತ್ರಕ್ಕೆ ಆಗಮಿಸಲು ಆರಂಭಿಸಿದ್ದರು. ಪರಿಣಾಮವಾಗಿ ದೇವಸ್ಥಾನದ ಎಲ್ಲಾ ವಸತಿಗೃಹಗಳು ಭರ್ತಿಯಾಗಿದ್ದು, ಖಾಸಗಿ ಲಾಡ್ಜ್‌ಗಳಲ್ಲೂ ಕೊಠಡಿಗಳು ಸಂಪೂರ್ಣ ಭರ್ತಿಯಾಗಿದ್ದವು. ಕೊಠಡಿ ಸಿಗದ…

Read More

ಮಂಗಳೂರು: ಕಾರಿಗೆ ಅಡ್ಡಗಟ್ಟಿ ಉದ್ಯಮಿ ಕುಟುಂಬವನ್ನು ಅಪಹರಿಸಿ ದರೋಡೆ; ಕಾರಿನೊಂದಿಗೆ ಪರಾರಿ

ಮಂಗಳೂರು, ಜೂ. 29: ಮುಂಬೈಯಲ್ಲಿ ಸ್ನೇಹಿತನ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಕೇರಳಕ್ಕೆ ಹಿಂದಿರುಗುತ್ತಿದ್ದ ಉದ್ಯಮಿಯೊಬ್ಬರ ಕಾರನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಗಟ್ಟಿ, ಅವರ ಪತ್ನಿ ಹಾಗೂ ಮಗನನ್ನು ಕಾರಿನ ಸಮೇತ ಅಪಹರಿಸಿ ಚಿನ್ನಾಭರಣ, ಬೆಲೆಬಾಳುವ ವಸ್ತುಗಳು ಮತ್ತು ಕಾರನ್ನು ದೋಚಿದ ಘಟನೆ ಸೋಮವಾರ ಮುಂಜಾನೆ ಬೈಕಂಪಾಡಿ ಸಮೀಪದ ದ್ವಾರ ಹೋಟೆಲ್ ಬಳಿ ನಡೆದಿದೆ. ಕೇರಳದ ಪಯ್ಯನ್ನೂರು ನಿವಾಸಿ ಹಾಗೂ ಉದ್ಯಮಿ ವಿಕಾಸ್ ಅವರು ಪತ್ನಿ ಮತ್ತು ಮಗನೊಂದಿಗೆ ಕಾರಿನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಮುಂಜಾನೆ ಸುಮಾರು 2.30ರ ವೇಳೆಗೆ ರಾಷ್ಟ್ರೀಯ…

Read More

ಲಯನ್ಸ್ ಡಿಸ್ಟ್ರಿಕ್ಟ್ 317ಡಿ ‘ಧನ್ಯೋಸ್ಮಿ’ ಜಿಲ್ಲಾ ಅವಾರ್ಡ್ ನೈಟ್ ವೈಭವ

ಮಂಗಳೂರು, ಜೂ. 29: ಲಯನ್ಸ್ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 317ಡಿ ವತಿಯಿಂದ ಆಯೋಜಿಸಲಾದ ‘ಧನ್ಯೋಸ್ಮಿ’ ಜಿಲ್ಲಾ ಅವಾರ್ಡ್ ನೈಟ್ ಕಾರ್ಯಕ್ರಮ ಮಂಗಳೂರಿನಲ್ಲಿ ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್ ಶೆಣೈ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆಯಿತು. ಹಾಸನ, ಕೊಡಗು, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಲಯನ್ಸ್ ಸದಸ್ಯರ ಸಮ್ಮುಖದಲ್ಲಿ ನಡೆದ ಸಮಾರಂಭವನ್ನು ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್ ಶೆಣೈ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಕ್ಯಾಬಿನೆಟ್ ತಂಡ…

Read More

ಸ್ಟೇಟ್ ಬ್ಯಾಂಕ್–ಬೋಂದೆಲ್ ಮಾರ್ಗಕ್ಕೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಸೇವೆಗೆ ಡಿವೈಎಫ್‌ಐ ಮನವಿ

ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್‌ನಿಂದ ಬೋಂದೆಲ್ ನಡುವಿನ ಮಾರ್ಗದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸರ್ಕಾರಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭಿಸುವಂತೆ ಒತ್ತಾಯಿಸಿ ಡಿವೈಎಫ್‌ಐ ಕೊಂಚಾಡಿ ಘಟಕದ ನೇತೃತ್ವದಲ್ಲಿ ಭಾನುವಾರ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಈಗಿರುವ ಬಸ್‌ಗಳ ಸಂಖ್ಯೆ ಸಾಕಾಗುತ್ತಿಲ್ಲ. ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ತುರ್ತಾಗಿ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ. ಮನವಿ ಸಲ್ಲಿಸುವ ಸಂದರ್ಭದಲ್ಲಿ ಡಿವೈಎಫ್‌ಐ ಮುಖಂಡರಾದ ವೆಂಕಟೇಶ್,…

Read More

ಮಂಗಳೂರು: ಫೇಸ್‌ಬುಕ್‌ನಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ಆರೋಪ – ವ್ಯಕ್ತಿ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನ ‘ಸನಾತನಿ ಸಿಂಹ’ ಎಂಬ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಪ್ರಕಟಿಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ 2025ರ ಸೆಪ್ಟೆಂಬರ್‌ 18ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ವಿಟ್ಲ ಠಾಣೆ ಪೊಲೀಸರು, ಆರೋಪಿಯಾದ ಬೆಂಗಳೂರಿನ ವಿದ್ಯಮಾನ್ಯನಗರ ನಿವಾಸಿ ಆನಂದ್ ಎ. ಅವರನ್ನು ಜೂನ್‌ 27ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತನಿಖೆ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಷಯಗಳನ್ನು ಪ್ರಸಾರ…

Read More

ನೂತನ ವಿಧಾನಪರಿಷತ್ ಸದಸ್ಯ ಪಿ.ಎ. ಮೋಹನ್‌ರಿಂದ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ

ಮಂಗಳೂರು: ನೂತನವಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಪಿ.ಎ. ಮೋಹನ್ ಅವರು ಇಂದು ಮಾಜಿ ಸಚಿವ ಬಿ. ರಮಾನಾಥ ರೈ ಅವರ ನಿವಾಸಕ್ಕೆ ಭೇಟಿ ನೀಡಿ, ಅವರೊಂದಿಗೆ ಕುಶಲೋಪರಿ ವಿಚಾರಿಸಿದರು. ಭೇಟಿಯ ವೇಳೆ ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯತೆ ಹಾಗೂ ಜನಪರ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಉಭಯ ನಾಯಕರು ಸುದೀರ್ಘವಾಗಿ ಚರ್ಚೆ ನಡೆಸಿದರು. ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಯೋಜನೆಗಳು ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳನ್ನು ಇನ್ನಷ್ಟು ಸಕ್ರಿಯಗೊಳಿಸುವ…

Read More

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ: ಬಿ.ಎಲ್.ಎ.ಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು – ಐವನ್ ಡಿ’ಸೋಜಾ

ಮಂಗಳೂರು: ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (Special Intensive Revision–SIR) ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷ ಸಕ್ರಿಯವಾಗಿ ಭಾಗವಹಿಸುವ ಉದ್ದೇಶದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ನಗರದ ವಿವಿಧ ವಾರ್ಡ್‌ಗಳಲ್ಲಿ ಬೂತ್ ಲೆವೆಲ್ ಏಜೆಂಟ್‌ಗಳ (BLA) ಹಾಗೂ ಸಂಯೋಜಕರ ಸಭೆ ನಡೆಸಿ, ಬಿ.ಎಲ್.ಎ.ಗಳಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿ’ಸೋಜಾ, ಚುನಾವಣಾ ಆಯೋಗದ ವತಿಯಿಂದ ಒಂದು ತಿಂಗಳ ಕಾಲ ನಡೆಯಲಿರುವ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷದ ಬಿ.ಎಲ್.ಎ.ಗಳು ಅತ್ಯಂತ…

Read More

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ: ಭಕ್ತರಿಗೆ ಮೂಲಸೌಕರ್ಯ ವಿಸ್ತರಣೆಗೆ ಶೀಘ್ರ ಮಾಸ್ಟರ್ ಪ್ಲಾನ್ ಜಾರಿ

ಕುಂದಾಪುರ: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಭಾನುವಾರ ಬೆಳಗ್ಗೆ ಪತ್ನಿಯೊಂದಿಗೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಚಂಡಿಕಾ ಹೋಮದಲ್ಲೂ ಭಾಗವಹಿಸಿದರು. ದೇವಾಲಯದ ಹಿರಿಯ ಅರ್ಚಕರಾದ ನರಸಿಂಹ ಅಡಿಗ ಹಾಗೂ ಸುಬ್ರಮಣ್ಯ ಅಡಿಗ ಅವರ ನೇತೃತ್ವದಲ್ಲಿ ಚಂಡಿಕಾ ಹೋಮ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಪೂಜೆ ಬಳಿಕ ದೇವಾಲಯದ ಆಡಳಿತ…

Read More

ಬೀದಿಬದಿ ವ್ಯಾಪಾರಸ್ಥರ ತೆರವು ಕ್ರಮ ಖಂಡನೀಯ – ಎಸ್.ಡಿ.ಟಿ.ಯು

ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಬೀದಿಬದಿ ವ್ಯಾಪಾರಸ್ಥರನ್ನು ಯಾವುದೇ ಮಾನವೀಯತೆ ಇಲ್ಲದೆ ತೆರವುಗೊಳಿಸಿರುವ ಕ್ರಮವನ್ನು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಮಂಗಳೂರು ನಗರ ಜಿಲ್ಲೆ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾ ಉಪಾಧ್ಯಕ್ಷ ಇರ್ಫಾನ್ ಕಾನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೀದಿಬದಿ ವ್ಯಾಪಾರಸ್ಥರು ತಮ್ಮ ಕುಟುಂಬದ ಜೀವನೋಪಾಯಕ್ಕಾಗಿ ಸಣ್ಣ ವ್ಯಾಪಾರ ನಡೆಸುತ್ತಿದ್ದಾರೆ. ಅವರ ಜೀವನೋಪಾಯವನ್ನು ಕಸಿದುಕೊಳ್ಳುವ ರೀತಿಯಲ್ಲಿ ಏಕಾಏಕಿ ತೆರವು ಕಾರ್ಯಾಚರಣೆ ನಡೆಸುವುದು ಮಾನವೀಯವಲ್ಲ. ಇತ್ತೀಚಿನ ತೆರವು ಕಾರ್ಯಾಚರಣೆ ಕುರಿತು ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ ಕೆಲವು ವ್ಯಕ್ತಿಗಳ…

Read More

ಸಹಕಾರ ಚಳುವಳಿಯ ಮೂಲಕ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ: ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್

ಮಂಗಳೂರು: ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ಸಂವತ್ಸರಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್), ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಶೇಷ ಸಹಕಾರ ಸಪ್ತಾಹ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ವಿಜೃಂಭಣೆಯಿಂದ…

Read More
error: Content is protected !!