ಜುಲೈ 1ರಂದು ದ.ಕ. ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಜುಲೈ 1ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಲಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ಜಿಲ್ಲಾಧ್ಯಕ್ಷ ಪುಷ್ಪರಾಜ್ ಬಿ.ಎನ್. ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ. ವಿ. ಕರಿಕಾಲನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ನ್ಯೂಸ್ 18 ಕನ್ನಡ ವಾಹಿನಿಯ ಪ್ರಧಾನ ಸಂಪಾದಕ ಹರಿಪ್ರಸಾದ್ ಅಡ್ಡಂಗಾಯ ಉಪನ್ಯಾಸ ನೀಡಲಿದ್ದಾರೆ. ಈ…

Read More

ಉದ್ಯಾವರ ನದಿಯಲ್ಲಿ ಬ್ಯಾಂಕ್ ಉದ್ಯೋಗಿಯ ಶವ ಪತ್ತೆ

ಉಡುಪಿ ಜಿಲ್ಲೆಯ ಉದ್ಯಾವರ ನದಿಯಲ್ಲಿ ಶನಿವಾರ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಉಡುಪಿಯ ಕೆನರಾ ಬ್ಯಾಂಕ್ ಉದ್ಯೋಗಿ ರಿಯಾಜ್ (43) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯಂತೆ, ರಿಯಾಜ್ ಅವರು ನದಿಯ ಬಳಿ ತೆರಳಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮಾಹಿತಿ ತಿಳಿದು ಕಾಪು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಾವಿನ ನಿಖರ ಕಾರಣ ಪತ್ತೆಹಚ್ಚಲು ತನಿಖೆ…

Read More

ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ: ಬಂಟ್ವಾಳದಲ್ಲಿ ಮೆಡಿಕಲ್‌ಗಳ ಪರಿಶೀಲನೆ

ಬಂಟ್ವಾಳ: ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆ ವತಿಯಿಂದ ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಮೆಡಿಕಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಪರಿಶೀಲನೆ ವೇಳೆ ಮೆಡಿಕಲ್‌ಗಳಲ್ಲಿ ಮಾರಾಟವಾಗುವ ಔಷಧಿಗಳ ದಾಖಲೆಗಳನ್ನು ಪರಿಶೀಲಿಸಲಾಯಿತು. ವೈದ್ಯರ ಪ್ರಿಸ್ಕ್ರಿಪ್ಷನ್ ಆಧಾರಿತ ಔಷಧಗಳ ವಿತರಣೆ, ನಿಷೇಧಿತ ಹಾಗೂ ದುರುಪಯೋಗಕ್ಕೆ ಒಳಪಡುವ ಔಷಧಿಗಳ ಸಂಗ್ರಹ ಮತ್ತು ಮಾರಾಟದ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ…

Read More

ರಾಮ ಮಂದಿರ ಟ್ರಸ್ಟ್ ದೇಣಿಗೆ ಲೆಕ್ಕಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲಿ: ಬಿ.ಕೆ. ಹರಿಪ್ರಸಾದ್ ಆಗ್ರಹ

ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ಟ್ರಸ್ಟ್‌ಗೆ ಉದ್ಯಮಿ ಮುಕೇಶ್ ಅಂಬಾನಿ ಸೇರಿದಂತೆ ವಿವಿಧ ದಾನಿಗಳಿಂದ ನೀಡಲಾಗಿರುವ ಕೋಟ್ಯಂತರ ರೂಪಾಯಿ ದೇಣಿಗೆಯ ಲೆಕ್ಕ ಸಾರ್ವಜನಿಕವಾಗಿ ಬಹಿರಂಗವಾಗಿಲ್ಲ ಎಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್, ಈ ಕುರಿತು ಹಾಲಿ ಅಥವಾ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರ ಟ್ರಸ್ಟ್‌ಗೆ ಸಂಬಂಧಿಸಿದ ದೇಣಿಗೆ ಹಾಗೂ ಅದರ ಬಳಕೆ ಕುರಿತಂತೆ ಪಾರದರ್ಶಕತೆ ಇರಬೇಕೆಂದು…

Read More

ವೆಲೆನ್ಸಿಯ ವಾರ್ಡಿನಲ್ಲಿ ₹20 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 48ನೇ ವೆಲೆನ್ಸಿಯ ವಾರ್ಡಿನ ರೆಡ್ ಬಿಲ್ಡಿಂಗ್ ರೋಹನ್ ಕಾರ್ಪೋರೇಷನ್ ಹಿಂಭಾಗ ರಸ್ತೆಯ ಅಭಿವೃದ್ಧಿ ಕಾಮಗಾರಿಯು 20ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಈ ಭಾಗದಲ್ಲಿ ಸುಮಾರು 300 ಮನೆಗಳಿದ್ದು ಅವರೆಲ್ಲರ ಬಹುದಿನಗಳ ಬೇಡಿಕೆಯಂತೆ ಈ ರಸ್ತೆಯು ನಿರ್ಮಾಣವಾಗಲಿದ್ದು ಕಾಮಗಾರಿ ವೇಳೆ ಉಂಟಾಗುವ ಅಡಚಣೆಗೆ ಸಹಕರಿಸಿ ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರಾದ…

Read More

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ಬೂತ್ ಏಜೆಂಟರೇ ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು – ಇನಾಯತ್ ಅಲಿ

ಮಂಗಳೂರು, ಜೂ. 28: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೂತ್ ಮಟ್ಟದ ಏಜೆಂಟರ (BLA)ಗಾಗಿ ಆಯೋಜಿಸಿದ್ದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ತರಬೇತಿ ಕಾರ್ಯಾಗಾರ ಭಾನುವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, “ಬೂತ್ ಮಟ್ಟದ ಏಜೆಂಟರು ಕೇವಲ ಪಕ್ಷದ ಕಾರ್ಯಕರ್ತರಲ್ಲ, ಪ್ರಜಾಪ್ರಭುತ್ವದ ಮುಂಚೂಣಿ ಸೈನಿಕರು. ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸಿ,…

Read More

ನಗರಪಾಲಿಕೆಯಿಂದ ಬೀದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ವಿರುದ್ದ ಆಕ್ರೋಶ: ಪ್ರತಿಭಟನಾಕಾರರ ಬಂಧನ

ಬೀದಿಬದಿ ವ್ಯಾಪಾರಿಗಳ ವ್ಯಾಪಕ ವಿರೋಧದ ನಡುವೆ ನಗರದ ಮೈದಾನ ರಸ್ತೆ, ಲೇಡಿ ಘೋಷನ್ ಆಸ್ಪತ್ರೆ ರಸ್ತೆ, ಪುರಭವನದ ಬಳಿ ವ್ಯಾಪಾರ ಮಾಡುವ ಬೀದಿ ವ್ಯಾಪಾರಿಗಳನ್ನು ನಗರಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಪಾಲಿಕೆ ಅಧಿಕಾರಿಗಳು ತೆರವು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಬೀದಿಬದಿ ವ್ಯಾಪಾರಿಗಳು ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ಆರಂಭಿಸಿದರು ಬೀದಿ ವ್ಯಾಪಾರದ ನಿಯಮನುಸಾರ ಪರ್ಯಾಯ ವ್ಯವಸ್ಥೆ ಮಾಡಿದ ನಂತರ ಕಾರ್ಯಾಚರಣೆ ನಡೆಸಿ ಎಂದು ಆಯುಕ್ತರಲ್ಲಿ ವಿನಂತಿಕೊಂಡರೂ ಪಾಲಿಕೆ ಆಯುಕ್ತರು ಬೀದಿಬದಿ ವ್ಯಾಪಾರಿಗಳ ಆಗ್ರಹವನ್ನು ಕಡೆಗಣಿಸಿ ಏಕಪಕ್ಷೀಯ…

Read More

ಜಿಲ್ಲೆಯಲ್ಲಿ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ: 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿ – ಐವನ್ ಡಿಸೋಜಾ

5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ನೀಡುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಭಾನುವಾರ ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭಾರತವು ಪೋಲಿಯೊ ಮುಕ್ತ ರಾಷ್ಟ್ರವಾಗಿ ಗುರುತಿಸಿಕೊಂಡಿದ್ದರೂ, ಆ ಸಾಧನೆಯನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬ ಮಗುವಿಗೂ ಪೋಲಿಯೊ ಲಸಿಕೆ ನೀಡುವುದು ಅತ್ಯಗತ್ಯವಾಗಿದೆ. ಪಾಲಕರು ಯಾವುದೇ ನಿರ್ಲಕ್ಷ್ಯ ವಹಿಸದೆ ತಮ್ಮ 5 ವರ್ಷದೊಳಗಿನ…

Read More

ಕೇರಳದಲ್ಲೂ ‘ಬಂಗಾಳ’ ಪುನರಾವರ್ತನೆಯಾಗಲಿದೆ: ಎಂ.ಎಲ್. ಅಶ್ವಿನಿ

ಮುಳಿಯಾರು: ಮುಂಬರುವ ಚುನಾವಣೆಗಳಲ್ಲಿ ಕೇರಳದಲ್ಲೂ ಬಂಗಾಳದ ಇತಿಹಾಸ ಪುನರಾವರ್ತನೆಯಾಗಲಿದ್ದು, ಕೇರಳ ವಿಧಾನಸಭೆಯಲ್ಲೂ ಬಿಜೆಪಿಯ ಪ್ರಾತಿನಿಧ್ಯವು ಮೂರರಿಂದ ಮೂವತ್ತಕ್ಕೆ ಬೆಳೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಎಂ.ಎಲ್. ಅಶ್ವಿನಿ ಹೇಳಿದರು. ಬಿಜೆಪಿ ಮುಳಿಯಾರು ಕ್ಷೇತ್ರ ಸಮಿತಿ ಆಯೋಜಿಸಿದ್ದ ದ್ವಿದಿನ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ನಮ್ಮ ದೇಶದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಸೋಲಿನಿಂದ ಪಾಠ ಕಲಿತು ಅತ್ಯಂತ ಬಲಿಷ್ಠವಾಗಿ ಮರಳಿ ಬಂದ ಇತಿಹಾಸ ಬಿಜೆಪಿಗಿದೆ. ದೇಶ ಮತ್ತು ಸಂಘಟನೆಯ ಹಿತಾಸಕ್ತಿಯ ಮುಂದೆ ವ್ಯಕ್ತಿಗಳಿಗೆ ಹಾಗೂ ವೈಯಕ್ತಿಕ ಹಿತಾಸಕ್ತಿಗಳಿಗೆ…

Read More

ಪೊಲೀಸ್ ಅಧಿಕಾರಿಯ ಬದುಕಿನ ಹೋರಾಟ: ಶಸ್ತ್ರಚಿಕಿತ್ಸೆಯ ಬಳಿಕ ಎರಡನೇ ಕಾಲನ್ನೂ ಕಳೆದುಕೊಂಡ ಕೆ.ಎಂ. ಸೂರಜ್

ಕಾಸರಗೋಡು: ಕರ್ತವ್ಯದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೈಲಿಕೋಡ್ ಮೂಲದ ಸಿವಿಲ್ ಪೊಲೀಸ್ ಅಧಿಕಾರಿ ಕೆ.ಎಂ. ಸೂರಜ್ ಅವರ ಎರಡನೇ ಕಾಲನ್ನು ಶಸ್ತ್ರಚಿಕಿತ್ಸೆ ಮೂಲಕ ಕತ್ತರಿಸಲಾಗಿದೆ. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರ ಬಲಗಾಲಿಗೆ ಶೇ. 70ರಷ್ಟು ಗಾಯಗಳಾಗಿದ್ದು, ಹಲವು ಬಾರಿ ಶಸ್ತ್ರಚಿಕಿತ್ಸೆ ನಡೆಸಿದರೂ ಯಶಸ್ವಿಯಾಗದ ಕಾರಣ ಅನಿವಾರ್ಯವಾಗಿ ವೈದ್ಯರು ಈ ನಿರ್ಧಾರ ಕೈಗೊಂಡಿದ್ದಾರೆ. ​ಈ ತಿಂಗಳು 18ರಂದು ಪಡನ್ನಾಕಾಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ, ನಿಯಂತ್ರಣ ತಪ್ಪಿ ಬಂದ ಕಾರು…

Read More
error: Content is protected !!