ಜಮೀರ್ ಅಹ್ಮದ್ ಖಾನ್‌ಗೆ ಪ್ರಮುಖ ಸಚಿವ ಸ್ಥಾನ ನೀಡುವಂತೆ ಡಿಕೆಶಿಗೆ ಕಾಂಗ್ರೆಸ್ ಕಾರ್ಯಕರ್ತನ ಮನವಿ
ಬಂಟ್ವಾಳ, ಜೂನ್ 27:ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಜನಸೇವೆ ಹಾಗೂ ಕಾಂಗ್ರೆಸ್ ಪಕ್ಷದ ಮೇಲಿನ ನಿಷ್ಠೆಯನ್ನು ಪರಿಗಣಿಸಿ ರಾಜ್ಯ ಸರ್ಕಾರದಲ್ಲಿ ಪ್ರಮುಖ ಸಚಿವ ಸ್ಥಾನ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಾಂಗ್ರೆಸ್ ಕಾರ್ಯಕರ್ತ ಅಸೀಬ್ ರಹ್ಮಾನ್ ಅವರು ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪತ್ರದಲ್ಲಿ ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಗೆ ಮಹತ್ವದ ಕೊಡುಗೆ ನೀಡಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು…
