ಮಾದಕ ವಸ್ತುಗಳ ವಿರುದ್ಧ ಬಂಟ್ವಾಳದಲ್ಲಿ ಸಾವಿರಾರು ವಿದ್ಯಾರ್ಥಿಗಳ ಜಾಗೃತಿ ಅಭಿಯಾನ
ಬಂಟ್ವಾಳ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಬಂಟ್ವಾಳ ಉಪವಿಭಾಗ, ಬಂಟ್ವಾಳ ನಗರ ಪೊಲೀಸ್ ಠಾಣೆ, ಶಿಕ್ಷಣ ಇಲಾಖೆ, ಬಂಟ್ವಾಳ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳು ಹಾಗೂ ಲಯನ್ಸ್ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ‘ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಅಂತರಾಷ್ಟ್ರೀಯ ದಿನ–2026’ ಅಂಗವಾಗಿ ಜನಜಾಗೃತಿ ಕಾರ್ಯಕ್ರಮ ಹಾಗೂ ಕಾಲ್ನಡಿಗೆ ಜಾಥಾ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಉಪವಿಭಾಗದ ಎಎಸ್‌ಪಿ ಯಶ್ ಕುಮಾರ್ ಶರ್ಮಾ (ಐಪಿಎಸ್) ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಷ್ಪರಿಣಾಮಗಳ…
