ಜೂನ್ 27ರಂದು ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ವಿದ್ಯಾರ್ಥಿಗಳಿಗೆ ₹15 ಲಕ್ಷ ಮೌಲ್ಯದ ಉಚಿತ ಶೈಕ್ಷಣಿಕ ಪರಿಕರ ವಿತರಣೆ

ಉಡುಪಿ, ಜೂ.25: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವತಿಯಿಂದ ಸಾಮಾಜಿಕ ಕಳಕಳಿಯ ಧ್ಯೇಯದಡಿ ಉಡುಪಿ ಜಿಲ್ಲೆಯ ಸುಮಾರು 50 ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ₹15 ಲಕ್ಷ ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಜೂನ್ 27ರಂದು ಬೆಳಿಗ್ಗೆ 10.30ಕ್ಕೆ ನಗರದ ಟೌನ್ ಹಾಲ್‌ನಲ್ಲಿ ನಡೆಯಲಿದೆ ಎಂದು ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಮಾಜಿ ಸಚಿವ ಹಾಗೂ…

Read More

ಜು. 3-4ರಂದು ‘ಯಂಗ್ ಇಂಡಿಯನ್ಸ್ ಪಾರ್ಲಿಮೆಂಟ್-2026’

ಮಂಗಳೂರು, ಜೂ.25: ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ವಿಮರ್ಶಾತ್ಮಕ ಚಿಂತನೆ ಹಾಗೂ ನಾಗರಿಕ ಜಾಗೃತಿ ಬೆಳೆಸುವ ಉದ್ದೇಶದಿಂದ ಯಂಗ್ ಇಂಡಿಯನ್ಸ್ (ವೈಐ) ಮಂಗಳೂರು ಘಟಕವು ‘ಯಂಗ್ ಇಂಡಿಯನ್ಸ್ ಪಾರ್ಲಿಮೆಂಟ್-2026’ ಕಾರ್ಯಕ್ರಮವನ್ನು ಜುಲೈ 3 ಮತ್ತು 4ರಂದು ಬೋಂದೆಲ್‌ನ ಭಾರತ್ ಅಕಾಡೆಮಿಯಲ್ಲಿ ಆಯೋಜಿಸಿದೆ ಎಂದು ಘಟಕದ ಅಧ್ಯಕ್ಷ ಶರಣ್ ಶೆಟ್ಟಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 3ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ದಕ್ಷಿಣ ಕನ್ನಡ ಲೋಕಸಭಾ ಸದಸ್ಯ Capt. Brijesh Chowta ಹಾಗೂ ಶಾಸಕ…

Read More

ಅಡಿಕೆ ಬೆಳೆಗಾರರು ಮತ್ತು ವರ್ತಕರ ಮೇಲೆ ನಿರಂತರ ದೌರ್ಜನ್ಯ: SDPI ಖಂಡನೆ

▪️ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ ರಾಜ್ಯದ ಲಾರಿಗಳ ಬಿಡುಗಡೆಗೆ ಆಗ್ರಹ ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅಡಿಕೆ ಬೆಳೆಗಾರರು ಹಾಗೂ ವರ್ತಕರು ಕಳೆದ ಹಲವು ವರ್ಷಗಳಿಂದ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದೀಗ ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಣಿಕೆಯ ಲಾರಿಗಳನ್ನು ತಡೆಹಿಡಿದಿರುವ ಕ್ರಮವು ಅತೀಹೇಯಾ ಹಾಗೂ ಖಂಡನೀಯ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಡಿಕೆ ವರ್ತಕರು ಅತೀ ದೊಡ್ಡಮಟ್ಟದಲ್ಲಿ GST ಕಟ್ಟುವ ಮೂಲಕ ಸರ್ಕಾರಕ್ಕೆ ತೆರಿಗೆ ಪಾವತಿಯನ್ನು ಮಾಡುತ್ತಿದ್ದಾರೆ. ಮಹಾರಾಷ್ಟ್ರ…

Read More

ಮಂಡ್ಯದಲ್ಲಿ ಕಾವೇರಿ ನದಿಯಲ್ಲಿ ದುರಂತ – ಮೃತರ ಕೊನೆಯ ಕ್ಷಣದ ವಿಡಿಯೋ ವೈರಲ್

ಮಂಡ್ಯ: ನಿನ್ನೆ ಮಳವಳ್ಳಿ ತಾಲೂಕಿನ ಮುತತ್ತಿ ಸಮೀಪದ ಕಾವೇರಿ ನದಿಯಲ್ಲಿ ಸಂಭವಿಸಿದ ಹೃದಯವಿದ್ರಾವಕ ದುರಂತದಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿಯಾಗಿದ್ದಾರೆ. ಘಟನೆಯ ಮುನ್ನ ನದಿಯಲ್ಲಿ ಸ್ನಾನ ಮಾಡುತ್ತಾ ಆಟವಾಡುತ್ತಿದ್ದ ಕುಟುಂಬ ಸದಸ್ಯರ ಕೊನೆಯ ಕ್ಷಣಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಕುಟುಂಬದ ಒಬ್ಬ ಸದಸ್ಯರು ನೀರಿನಲ್ಲಿ ಆಟವಾಡುತ್ತಿದ್ದ ನಾಲ್ವರಿಗೆ ತಮಾಷೆಯಾಗಿ “ಹ್ಯಾಪಿ ಜರ್ನಿ” ಎಂದು ಹೇಳಿರುವುದು ಕೇಳಿಬಂದಿದೆ. ವಿಧಿಯ ವಿಪರ್ಯಾಸವೆಂದರೆ, ಆ ಮಾತುಗಳೇ ಅವರ ಬದುಕಿನ ಕೊನೆಯ ಸಂತಸದ ಕ್ಷಣಗಳಾಗಿ ಪರಿಣಮಿಸಿದ್ದು, ಕೆಲವೇ ಕ್ಷಣಗಳಲ್ಲಿ…

Read More

ಶಾಲೆಯ ಸಿಮೆಂಟ್ ವೇದಿಕೆ ಕುಸಿತ: ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಿತ್ರದುರ್ಗ, ಜೂ.25: ಖಾಸಗಿ ಶಾಲೆಯೊಂದರಲ್ಲಿ ಸಿಮೆಂಟ್‌ನಿಂದ ನಿರ್ಮಿಸಲಾಗಿದ್ದ ವೇದಿಕೆ ಕುಸಿದ ಪರಿಣಾಮ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಚಿತ್ರದುರ್ಗ ನಗರದಲ್ಲಿ ನಡೆದಿದೆ. ನಗರದ ಹೊರಪೇಟೆ ಪ್ರದೇಶದಲ್ಲಿರುವ ಕ್ರೆಸೆಂಟ್ ಶಾಲೆಯಲ್ಲಿ ಈ ಅವಘಡ ಸಂಭವಿಸಿದೆ. ಶಾಲಾ ಆವರಣದಲ್ಲಿದ್ದ ವೇದಿಕೆ ಏಕಾಏಕಿ ಕುಸಿದ ಪರಿಣಾಮ ಅದರ ಮೇಲಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಗಳನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಜಿಯಾ, ಕಾವ್ಯ, ಫಾತಿಮಾ, ನಿಶ್ಚತ್ ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಚರಂಡಿಯ ಮೇಲೆಯೇ ಶಾಲೆಯ ವೇದಿಕೆಯನ್ನು…

Read More

ಸಂಘದ ಬಗ್ಗೆ ಸಮಾಜದಲ್ಲಿ ರೂಪುಗೊಳ್ಳುತ್ತಿರುವ ಮನಸ್ಥಿತಿಯ ಕುರಿತು ಆತ್ಮಾವಲೋಕನ ಅಗತ್ಯ: ಸತ್ಯಜಿತ್ ಸುರತ್ಕಲ್

ಮಂಗಳೂರು, ಜೂ.25: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಶತಮಾನೋತ್ಸವದ ಪಯಣದಲ್ಲಿಯೂ ಅನೇಕ ಟೀಕೆ, ಪ್ರಶ್ನೆಗಳು ಹಾಗೂ ಎರಡು ಬಾರಿ ನಿಷೇಧದಂತಹ ಸವಾಲುಗಳನ್ನು ಎದುರಿಸಿದ್ದರೂ, ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ಮುಂದುವರಿಸಿಕೊಂಡು ಬಂದಿದೆ ಎಂದು ಹಿಂದೂ ಸಂಘಟನೆಯ ಮುಖಂಡ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಂಘದ ಬಗ್ಗೆ ಪ್ರಶ್ನಿಸುವುದು ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವಾಗಿದ್ದು, ಎಲ್ಲರಿಗೂ ಆ ಹಕ್ಕಿದೆ ಎಂದರು. ಈ ಹಿಂದೆ ಸಂಘದ ವಿರುದ್ಧ ಟೀಕೆಗಳು ವ್ಯಕ್ತವಾದಾಗ ಸಮಾಜವೇ ಅದರ…

Read More

ಮಳೆ, ಪ್ರಕೃತಿ ವಿಕೋಪ ನಿರ್ವಹಣೆಗೆ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು, ಜೂ.25: ರಾಜ್ಯದಲ್ಲಿ ಮಳೆ ಹಾಗೂ ಇತರ ಪ್ರಕೃತಿ ವಿಕೋಪಗಳ ಪರಿಣಾಮಕಾರಿ ನಿರ್ವಹಣೆ ಮತ್ತು ಮೇಲುಸ್ತುವಾರಿಗಾಗಿ ಉಪ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ರಾಜ್ಯ ಸರ್ಕಾರ ಹಂಚಿಕೆ ಮಾಡಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬಂದು ಮುಂದಿನ ಆದೇಶದವರೆಗೆ ಅನ್ವಯವಾಗಲಿದೆ. ಆದೇಶದಂತೆ, ಗೃಹ ಸಚಿವ G. Parameshwara ಅವರಿಗೆ ತುಮಕೂರು ಮತ್ತು ಚಿತ್ರದುರ್ಗ, ಕೆ.ಹೆಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಹಾಗೂ ವಿಜಯನಗರ, ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳ ಹೊಣೆಗಾರಿಕೆ…

Read More

ಜೂನ್ 29ರಿಂದ ವಿಶೇಷ ಸಹಕಾರ ಸಪ್ತಾಹ: ಡಿಕೆಸಿಸಿ ಬ್ಯಾಂಕ್‌ನಲ್ಲಿ ಉದ್ಘಾಟನಾ ಕಾರ್ಯಕ್ರಮ

ಮಂಗಳೂರು, ಜೂ.25: ಕೇಂದ್ರ ಸಹಕಾರ ಸಚಿವಾಲಯದ ವಾರ್ಷಿಕೋತ್ಸವದ ಅಂಗವಾಗಿ ಜೂನ್ 29ರಿಂದ ಜುಲೈ 6ರವರೆಗೆ ದೇಶಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಜೂನ್ 29ರಂದು ಬೆಳಗ್ಗೆ 10.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಕೆಸಿಸಿ ಬ್ಯಾಂಕ್) ಪ್ರಧಾನ ಕಚೇರಿಯ ಸಭಾಂಗಣದಲ್ಲಿ “ಸಹಕಾರದಿಂದ ಸಮೃದ್ಧಿ” ಧ್ಯೇಯವಾಕ್ಯದೊಂದಿಗೆ ವಿಶೇಷ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಡಿಕೆಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್…

Read More

ಜೂ. 28ರಂದು ‘ವಿಧಾತ್ರಿ ಸಂಭ್ರಮ-2026’; ‘ಜೈ ಹನುಮಾನ್’ ನಾಟಕ ಪ್ರದರ್ಶನ

ಮಂಗಳೂರು, ಜೂ.25: ಕಳೆದ 17 ವರ್ಷಗಳಿಂದ ತುಳು ರಂಗಭೂಮಿಯಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ವಿಧಾತ್ರಿ ಕಲಾವಿದೆರ್ ಕುಡ್ಲ (ರಿ.) ಸಂಸ್ಥೆಯ ವತಿಯಿಂದ ‘ವಿಧಾತ್ರಿ ಸಂಭ್ರಮ-2026’ ಕಾರ್ಯಕ್ರಮವು ಜೂನ್ 28ರಂದು ಸಂಜೆ 4.30ಕ್ಕೆ ನಗರದ ಪುರಭವನ (ಟೌನ್ ಹಾಲ್)ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಚಿದಾನಂದ ಅಡ್ಯಪಾಡಿ ಸಾರಥ್ಯದಲ್ಲಿ, ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ ಹಾಗೂ ಭರತ್ ಎಸ್. ಕರ್ಕೇರ ರಚನೆಯ ತುಳು-ಕನ್ನಡ ದ್ವಿಭಾಷಾ ನಾಟಕ ‘ಜೈ ಹನುಮಾನ್’ ಪ್ರದರ್ಶನಗೊಳ್ಳಲಿದೆ. ಈ ಕುರಿತು ಮಾಹಿತಿ ನೀಡಿದ ತುಳು ರಂಗಭೂಮಿ ಕಲಾವಿದ ಚಿದಾನಂದ…

Read More

ಗರ್ಭಿಣಿ ಅಪ್ರಾಪ್ತೆ ಆತ್ಮಹತ್ಯೆ: ಯುವಕನ ವಿರುದ್ಧ ಪೋಕ್ಸೊ, ಅತ್ಯಾಚಾರ ಪ್ರಕರಣ ದಾಖಲು

ಮಂಗಳೂರು, ಜೂ. 25: ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ವಿರುದ್ಧ ಪೋಕ್ಸೊ ಕಾಯ್ದೆ, ಅತ್ಯಾಚಾರ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಏಪ್ರಿಲ್ 23ರಂದು ಸಂಜೆ ಸುಮಾರು 4 ಗಂಟೆಯ ವೇಳೆಗೆ ಬಾಲಕಿ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೂ ಮುನ್ನ ಆಕೆ ಬರೆದಿಟ್ಟಿದ್ದ ಡೆತ್‌ನೋಟ್‌ನಲ್ಲಿ, “ನಾನು ಒಂದು…

Read More
error: Content is protected !!