ಹೆಣ್ಣುಮಕ್ಕಳ ಸುರಕ್ಷತೆ, ಆರೋಗ್ಯ ಹಾಗೂ ಕಾನೂನು ಅರಿವಿಗೆ ವಿಶೇಷ ಒತ್ತು
ಮಂಗಳೂರು, ಜೂನ್ 24: ಇಂದಿನ ವೇಗವಾಗಿ ಬದಲಾಗುತ್ತಿರುವ ಸಾಮಾಜಿಕ ಪರಿಸ್ಥಿತಿಯಲ್ಲಿ ಹೆಣ್ಣುಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ ಹಾಗೂ ಮಾನಸಿಕ ಸ್ಥೈರ್ಯಕ್ಕೆ ಸಂಬಂಧಿಸಿದ ಸವಾಲುಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಚಲಿತ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಲೋಬೋ ಫೌಂಡೇಶನ್ (ರಿ) ಜಂಟಿ ಆಶ್ರಯದಲ್ಲಿ ಜುಲೈ ತಿಂಗಳ ಪೂರ್ತಿ ಮಂಗಳೂರಿನ ವಿವಿಧ ಹೋಬಳಿ ಮಟ್ಟದ ಶಾಲೆಗಳಲ್ಲಿ ‘ಬಾಲಿಕಾ ಜಾಗೃತಿ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ಪ್ರಚಲಿತ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯದರ್ಶಿ ಹನಿಷ ಸವಾದ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ…
