ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಸಾವು, ಒಬ್ಬ ಗಂಭೀರ
ಕಾಸರಗೋಡು : ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ದುರ್ಮರಣವನ್ನಪ್ಪಿದ್ದಾರೆ. ಮೊದಲನೆಯ ಘಟನೆಯು ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಿಯ ಸೇತುವೆ ಬಳಿ ನಡೆದಿದೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ, ಉದುಮ ಪಾಕ್ಯಾರ ನಿವಾಸಿ ಪ್ರಜೀಶ್ (26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜೊತೆಗಿದ್ದ ಅಮೀನ್ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಘಟನೆಯು…
