ಬಂಟ್ವಾಳದಲ್ಲಿ ಎರಡು ಸರ್ಕಾರಿ ಶಾಲೆಗಳಿಗೆ ಶೂನ್ಯ ದಾಖಲಾತಿ; ಶಾಲೆ ಮುಚ್ಚುವ ಭೀತಿ

ಬಂಟ್ವಾಳ, ಜೂನ್ 20: 2026-27ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದೇ ಒಂದು ವಿದ್ಯಾರ್ಥಿಯೂ ದಾಖಲಾತಿಯಾಗದ ಹಿನ್ನೆಲೆಯಲ್ಲಿ ಶಾಲೆಗಳ ಭವಿಷ್ಯದ ಬಗ್ಗೆ ಆತಂಕ ವ್ಯಕ್ತವಾಗಿದೆ. ತಾಲೂಕಿನ ಎಲಿಯನಡುಗೋಡು ಹಾಗೂ ನೇರಳಕಟ್ಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳು (ಎಲ್.ಪಿ. ಶಾಲೆ) ಈ ವರ್ಷ ಶೂನ್ಯ ದಾಖಲಾತಿ ಹೊಂದಿದ್ದು, ಒಂದರಿಂದ ಐದನೇ ತರಗತಿವರೆಗೆ ಯಾವುದೇ ವಿದ್ಯಾರ್ಥಿಗಳಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಈ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುವ ಭೀತಿ ಎದುರಿಸುತ್ತಿವೆ ಎಂದು ಸ್ಥಳೀಯರು ಕಳವಳ…

Read More

ಎಂಆರ್‌ಜಿ ಸಮೂಹಕ್ಕೆ ಖಾಸಗಿ ವಿಮಾನ ಸೇರ್ಪಡೆ: ಕರಾವಳಿಯ ಮೊದಲ ಉದ್ಯಮಿ ಎಂಬ ಹೆಗ್ಗಳಿಕೆಗೆ ಡಾ. ಕೆ. ಪ್ರಕಾಶ್ ಶೆಟ್ಟಿ

ಮಂಗಳೂರು, ಜೂನ್ 20: ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಅತ್ಯಾಧುನಿಕ ಖಾಸಗಿ ವಿಮಾನವನ್ನು ಸೇರ್ಪಡೆಗೊಳಿಸಿದ್ದು, ಕರ್ನಾಟಕ ಕರಾವಳಿಯ ಉದ್ಯಮಿಗಳ ಪೈಕಿ ಖಾಸಗಿ ವಿಮಾನ ಹೊಂದಿರುವ ಮೊದಲ ಉದ್ಯಮಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆತಿಥ್ಯೋದ್ಯಮ, ರಿಯಲ್ ಎಸ್ಟೇಟ್ ಹಾಗೂ ಮಾಹಿತಿ ತಂತ್ರಜ್ಞಾನ ಮೂಲಸೌಕರ್ಯ ನಿರ್ಮಾಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಉದ್ಯಮ ನಡೆಸುತ್ತಿರುವ ಡಾ. ಪ್ರಕಾಶ್ ಶೆಟ್ಟಿ ಅವರು ಅಮೆರಿಕದಿಂದ ತರಿಸಲಾದ 14 ಆಸನಗಳ ‘ಎಂಬ್ರೇಯರ್…

Read More

ಜೂನ್ ಅಂತ್ಯಕ್ಕೆ ಬೆಂಗಳೂರು-ಮಂಗಳೂರು ವಂದೇ ಭಾರತ್ ಘಾಟ್ ವಿಭಾಗದಲ್ಲಿ ಪ್ರಾಯೋಗಿಕ ಸಂಚಾರ

ಕರಾವಳಿ ಕರ್ನಾಟಕಕ್ಕೆ ಹೈಸ್ಪೀಡ್ ರೈಲು ಸಂಪರ್ಕದ ಕನಸು ನನಸಾಗುವತ್ತ ಮಹತ್ವದ ಹೆಜ್ಜೆ ಮಂಗಳೂರು, ಜೂನ್ 20: ಬೆಂಗಳೂರು ಮತ್ತು ಮಂಗಳೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಗೊಳ್ಳುವ ನಿರೀಕ್ಷೆಗೆ ಮತ್ತಷ್ಟು ಬಲ ಸಿಕ್ಕಿದ್ದು, ಜೂನ್ ಅಂತ್ಯದ ವೇಳೆಗೆ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದಲ್ಲಿ ರೈಲಿನ ಪ್ರಾಯೋಗಿಕ ಸಂಚಾರ ನಡೆಯುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿ ಭಾಗವನ್ನು ರಾಜ್ಯ ರಾಜಧಾನಿ ಬೆಂಗಳೂರಿನೊಂದಿಗೆ ವೇಗದ ರೈಲು ಸಂಪರ್ಕದ ಮೂಲಕ ಜೋಡಿಸುವ ಮಹತ್ವಾಕಾಂಕ್ಷಿ ಯೋಜನೆಯ ಭಾಗವಾಗಿ ಈ…

Read More

ವಾಚನಾ ವಾರಾಚರಣೆಗೆ ಚಾಲನೆ: ಓದುವಿಕೆ ಜ್ಞಾನ ವೃದ್ಧಿಗೆ ಪ್ರಮುಖ ಸಾಧನ – ರಾಜೇಶ್ವರಿ.ಬಿ

ಚೇವಾರು, ಜೂನ್ 20: ಚೇವಾರು ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಚನಾ ವಾರಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರಾಜೇಶ್ವರಿ.ಬಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಓದುವಿಕೆ ವಿದ್ಯಾರ್ಥಿಗಳ ಜ್ಞಾನ ವೃದ್ಧಿಗೆ ಹಾಗೂ ವ್ಯಕ್ತಿತ್ವ ವಿಕಾಸಕ್ಕೆ ಪ್ರಮುಖ ಸಾಧನವಾಗಿದ್ದು, ಉತ್ತಮ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ ರವಿಕುಮಾರ್ ವಹಿಸಿದ್ದು, ವಾಚನಾ ವಾರಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳು ಮತ್ತು ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಶಾಲಾ ಸಂಪನ್ಮೂಲ…

Read More

ಹೂಡಿಕೆದಾರರಿಗೆ ಸುಗಮ ಮಾರ್ಗ ಕಲ್ಪಿಸಿ, ಇಲಾಖಾ ಕಿರಿಕಿರಿಗೆ ಅಂತ್ಯ ಹಾಡಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಬೆಂಗಳೂರು, ಜೂನ್ 20: ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುವ ಮೂಲಕ ಹೆಚ್ಚಿನ ಹೂಡಿಕೆ ಆಕರ್ಷಣೆ, ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಬೆಳವಣಿಗೆಗೆ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೂಡಿಕೆದಾರರಿಗೆ ಸುಗಮ ಮತ್ತು ಸರಳವಾದ ವ್ಯವಸ್ಥೆ ಕಲ್ಪಿಸಬೇಕು. ಉದ್ಯಮಿಗಳು ವಿವಿಧ ಇಲಾಖೆಗಳ ಅನುಮತಿಗಳನ್ನು ಪಡೆಯುವ ಸಂದರ್ಭದಲ್ಲಿ ಎದುರಿಸುತ್ತಿರುವ ಕಿರಿಕಿರಿ…

Read More

ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕನ ದಾರುಣ ಸಾವು

ಮಂಜೇಶ್ವರ: ಕುಂಬಳೆ ನಾಯ್ಕಾಪು ಮುಜಂಗಾವು ಎಂಬಲ್ಲಿ ಶುಕ್ರವಾರ ಸಂಜೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರಿಂದ ಆಯತಪ್ಪಿ ಬಿದ್ದು ಕಾರ್ಮಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೇಳ ನಿವಾಸಿ ಫ್ರಾನ್ಸಿಸ್ ಡಿಸೋಜ (47) ಸಾವನ್ನಪ್ಪಿದ ದುರ್ದೈವಿ.​ಮನೆ ನಿರ್ಮಾಣದ ಕೆಲಸದಲ್ಲಿ ತೊಡಗಿದ್ದಾಗ ಫ್ರಾನ್ಸಿಸ್ ಅವರು ಆಕಸ್ಮಿಕವಾಗಿ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಸಹೋದ್ಯೋಗಿಗಳು ಆಸ್ಪತ್ರೆಗೆ ಸಾಗಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

Read More

ಯುಡಿಎಫ್ ಬಜೆಟ್: ಕಾಸರಗೋಡಿಗೆ ವಿಶೇಷ ಪ್ಯಾಕೇಜ್; ಎಂಡೋಸಲ್ಫಾನ್ ಸಂತ್ರಸ್ತರಿಗೆ ಭರವಸೆ

​ ಕಾಸರಗೋಡು : ಹತ್ತು ವರ್ಷಗಳ ಬಳಿಕ ಅಧಿಕಾರಕ್ಕೆ ಮರಳಿದ ಯುಡಿಎಫ್ ಸರ್ಕಾರ, ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರ ನೇತೃತ್ವದಲ್ಲಿ ಮಹತ್ವಾಕಾಂಕ್ಷೆಯ ಚೊಚ್ಚಲ ಬಜೆಟ್ ಮಂಡಿಸಿದೆ. ರಾಜ್ಯದ ಹಿಂದುಳಿದ ಜಿಲ್ಲೆಗಳಾದ ಕಾಸರಗೋಡು, ವಯನಾಡು ಮತ್ತು ಇಡುಕ್ಕಿಯ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ವಿಶೇಷವಾಗಿ ಕಾಸರಗೋಡಿನ ಎಂಡೋಸಲ್ಫಾನ್ ಸಂತ್ರಸ್ತರ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದ್ದು, ವೈದ್ಯಕೀಯ ಕಾಲೇಜು ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ​ಸಾಮಾಜಿಕ ಭದ್ರತೆಗೆ ಒತ್ತು ನೀಡಿದ ಬಜೆಟ್‌ನಲ್ಲಿ, ‘ಉಮ್ಮನ್ ಚಾಂಡಿ ಆರೋಗ್ಯ ವಿಮೆ’…

Read More

ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನ್ಮದಿನ: ವೆನ್ಲಾಕ್ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿದ ಎನ್‌ಎಸ್‌ಯುಐ

ಮಂಗಳೂರು, ಜೂನ್ 19: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಮೇಧಾವಿ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಎನ್‌ಎಸ್‌ಯುಐ (NSUI) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ಹಣ್ಣುಹಂಪಲು ವಿತರಿಸಿ, ಅವರ ಆರೋಗ್ಯ ಶೀಘ್ರ ಸುಧಾರಿಸಲೆಂದು ಹಾರೈಸಲಾಯಿತು. ಸಮಾಜಮುಖಿ ಚಟುವಟಿಕೆಗಳ ಮೂಲಕ ಜನಸೇವೆಗೆ ಹೆಚ್ಚಿನ…

Read More

ಕಲುಷಿತ ನೀರು ಪೂರೈಕೆ ಆರೋಪ: ಬಟ್ಟಗುಡ್ಡೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ತುರ್ತು ಸಭೆ

ಮಂಗಳೂರು, ಜೂನ್ 20: ನಗರದ ಕೆಲವೆಡೆ ಸಾರ್ವಜನಿಕರಿಗೆ ಕಲುಷಿತ ಕುಡಿಯುವ ನೀರು ಪೂರೈಕೆಯಾಗಿ ಹಲವರು ಅಸ್ವಸ್ಥಗೊಂಡಿರುವ ಹಿನ್ನೆಲೆಯಲ್ಲಿ ಬಿಜೈ 31ನೇ ವಾರ್ಡಿನ ನೋಡು ಬಟ್ಟಗುಡ್ಡೆ ಪರಿಸರದ ರಾಮಕೃಷ್ಣ ಭಜನಾ ಮಂದಿರದ ಆವರಣದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಸಾರ್ವಜನಿಕರು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ನೋಡು ಬಟ್ಟಗುಡ್ಡೆ ಪರಿಸರದ ಕೆಳಭಾಗದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ಗೆ ಡ್ರೈನೇಜ್ ನೀರು ಸೇರಿಕೊಂಡು ಹಲವು ಮನೆಗಳಿಗೆ ಕಲುಷಿತ ನೀರು…

Read More

ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ವೇಗ: ವಿಧಾನಸೌಧದಲ್ಲಿ ಮಹತ್ವದ ಸಮಾಲೋಚನಾ ಸಭೆ

ಬೆಂಗಳೂರು, ಜೂನ್ 19: ರಾಜ್ಯದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮಹತ್ವದ ಸಮಾಲೋಚನಾ ಸಭೆ ನಡೆಯಿತು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರಾವಳಿ ಭಾಗಗಳ ಸಮಗ್ರ ಅಭಿವೃದ್ಧಿ, ಪ್ರವಾಸೋದ್ಯಮ ಮೂಲಸೌಕರ್ಯಗಳ ವಿಸ್ತರಣೆ ಹಾಗೂ ಹೂಡಿಕೆ ಆಕರ್ಷಣೆಯ ಕುರಿತು ವಿಸ್ತೃತ ಚರ್ಚೆ ನಡೆಯಿತು. ಸಭೆಯಲ್ಲಿ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್, ಖ್ಯಾತ ನಟ ರಿಷಬ್ ಶೆಟ್ಟಿ, ಶಾಸಕರಾದ ಜಿ.ಟಿ. ದೇವೇಗೌಡ ಹಾಗೂ ಸತೀಶ್ ಸೈಲ್…

Read More
error: Content is protected !!