ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ

ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರದಲ್ಲಿ ’ಯೋಗ ವಿದ್ ಯೋಧ ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ ಒಂದಾದ ಹಾಗೂ ಕೊಡ್ಯಾಮಲೆ ಬೆಟ್ಟಗಳ ಶ್ರೇಣಿಯಲ್ಲಿರುವ ಪ್ರಕೃತಿ ರುದ್ರ ರಮಣೀಯ ಪ್ರದೇಶ ಮಹಾತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆವರಣದಲ್ಲಿ ಜೂ. 21ರ ಭಾನುವಾರ ಅಪರಾಹ್ನ 3 ಗಂಟೆಗೆ ನಡೆಯಲಿರುವ 3ನೇ…

Read More

ವಿ.ಡಿ. ಸತೀಶನ್ ಮಂಡಿಸಿದ ಬಜೆಟ್‌ನಲ್ಲಿ ಜಿಲ್ಲೆಗೆ ನಿರಾಶೆಯಷ್ಟೇ ಬಾಕಿ: ಎಂ.ಎಲ್. ಅಶ್ವಿನಿ

ಕಾಸರಗೋಡು: 13 ವರ್ಷಗಳಾಗುತ್ತಾ ಬಂದರೂ ನಿರ್ಮಾಣ ಕಾರ್ಯ ಪೂರ್ಣಗೊಳ್ಳದ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸಂಪೂರ್ಣವಾಗಿ ಸುಸಜ್ಜಿತಗೊಳಿಸಲು ಯಾವುದೇ ಅನುದಾನ ನೀಡದೆ, ದಕ್ಷಿಣ ಕೇರಳದಲ್ಲಿ ಹೊಸದಾಗಿ ಎರಡು ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿರುವುದು ಜಿಲ್ಲೆಯ ಬಗ್ಗೆ ಯು.ಡಿ.ಎಫ್. ಸರ್ಕಾರಕ್ಕಿರುವ ಕಡೆಗಣನೆಗೆ ಸ್ಪಷ್ಟ ಪುರಾವೆಯಾಗಿದೆ. ಜಿಲ್ಲೆಯಲ್ಲಿ ಸಾರ್ವಜನಿಕ ವಲಯದಲ್ಲಾಗಲಿ ಅಥವಾ ಖಾಸಗಿ ವಲಯದಲ್ಲಾಗಲಿ ಒಂದೇ ಒಂದು ವೈದ್ಯಕೀಯ ಕಾಲೇಜು ಇಲ್ಲದಿರುವಾಗ, ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಸರ್ಕಾರವೊಂದು ಹೊಸ ವೈದ್ಯಕೀಯ ಕಾಲೇಜುಗಳಿಗೆ ಅನುಮತಿ ನೀಡುತ್ತಿರುವುದು ತರ್ಕಕ್ಕೆ ನಿಲುಕದ…

Read More

ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ

ಸರಕಾರಿ ಪ್ರೌಢ ಶಾಲೆ, ಮಂಚಿ – ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ (ರಿ.) ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವಿಟ್ಲ ಘಟಕದ ಸಹಯೋಗದೊಂದಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ಮಂಚಿ ಕೊಳ್ನಾಡು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ನಾಟ್ಯ ತರಗತಿಯ ಯಕ್ಷಧ್ರುವ ಯಕ್ಷ ಶಿಕ್ಷಣ – 2026 ಕಾರ್ಯಕ್ರಮವು ದಿನಾಂಕ: 19.06.2026 ರ ಶುಕ್ರವಾರ ಶಾಲಾ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು. ದೀಪ ಬೆಳಗಿ ಉದ್ಘಾಟಿಸಿದ ಶಾಲಾ…

Read More

ವಿಟ್ಲವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಲು ಜೂ.23ರಂದು ಸಾಂಕೇತಿಕ ವೇಗ ಜಾಥಾ

ವಿಟ್ಲ, ಜೂನ್ 20: ವಿಟ್ಲವನ್ನು ಪ್ರತ್ಯೇಕ ತಾಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಜೂನ್ 23ರಂದು ವಿಟ್ಲ ಜೈನ ಬಸಡಿಯಿಂದ ನಾಡಕಚೇರಿವರೆಗೆ ಸಾಂಕೇತಿಕ ವೇಗ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಟ್ಲ ತಾಲೂಕು ಹಾಗೂ ವಿಟ್ಲ ವಿಧಾನಸಭಾ ಕ್ಷೇತ್ರ ಮರುಸ್ಥಾಪನಾ ಸಮಿತಿಯ ಕಾರ್ಯದರ್ಶಿ ಕಾನಾ ಈಶ್ವರ ಭಟ್ ತಿಳಿಸಿದ್ದಾರೆ. ವಿಟ್ಲ ಪ್ರೆಸ್ ಕ್ಲಬ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಟ್ಲ ತಾಲೂಕು ರಚನೆಗಾಗಿ ಪಕ್ಷಾತೀತವಾಗಿ ಹೋರಾಟ ನಡೆಸಲಾಗುತ್ತಿದ್ದು, ಸಮಾಜದ ಎಲ್ಲ ವರ್ಗಗಳ ಜನರು ಈ ಹೋರಾಟಕ್ಕೆ ಬೆಂಬಲ ನೀಡುವಂತೆ…

Read More

ಮುಂಗಾರು ಮಳೆ ಕೊರತೆ: ನಾಡದೋಣಿ ಮೀನುಗಾರರಲ್ಲಿ ಆತಂಕ

ಉಡುಪಿ, ಕರಾವಳಿಯಲ್ಲಿ ಮುಂಗಾರು ಪ್ರವೇಶಿಸಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದಿರುವುದು ನಾಡದೋಣಿ ಮೀನುಗಾರರ ಆತಂಕಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ಯಾಂತ್ರಿಕ ಮೀನುಗಾರಿಕೆಗೆ ಎರಡು ತಿಂಗಳ ನಿಷೇಧ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ಆರಂಭವಾಗಬೇಕಿದ್ದರೂ, ಸಮುದ್ರದ ಪರಿಸ್ಥಿತಿ ಅನುಕೂಲಕರವಾಗದ ಕಾರಣ ಮೀನುಗಾರರು ಇನ್ನೂ ಸಮುದ್ರಕ್ಕಿಳಿಯಲು ಸಾಧ್ಯವಾಗದೆ ಕಾಯುತ್ತಿದ್ದಾರೆ. ಮುಂಗಾರು ಆರಂಭವಾಗುತ್ತಿದ್ದಂತೆ ನಾಡದೋಣಿ ಮೀನುಗಾರರು ದೋಣಿಗಳು, ಬಲೆಗಳು ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ. ಮಳೆಗಾಲದ ಅವಧಿಯಲ್ಲಿ ಯಾಂತ್ರಿಕ ದೋಣಿಗಳಿಗೆ ನಿಷೇಧ ಇರುವುದರಿಂದ ಇದೇ ಸಮಯದಲ್ಲಿ ನಾಡದೋಣಿ ಮೀನುಗಾರಿಕೆಯೇ ಸಾವಿರಾರು ಕುಟುಂಬಗಳ…

Read More

ರಾಮಕ್ಷತ್ರೀಯ ಸೇವಾ ಸಂಘದ ಮಾಜಿ ಅಧ್ಯಕ್ಷ ಸುರೇಶ್ ಕುಮಾರ್ ತಾಯಿ ಪುಷ್ಪ ನಿಧನ

ಪುತ್ತೂರು: ರಾಮಕ್ಷತ್ರೀಯ ಸೇವಾ ಸಂಘದ ಮಾಜಿ ಅಧ್ಯಕ್ಷ ಸುರೇಶ್ ಕುಮಾ‌ರ್ ಅವರ ತಾಯಿ ಪುಷ್ಪ (86ವ) ರವರು ಜೂ.19 ರಂದು ಬೆಳಿಗ್ಗೆ ನಿಧನರಾದರು. ಮರೀಲ್ ಪ್ರಗತಿ ಲೇಔಟ್‌ನ ದಿ.ಆನಂದ ರಾವ್ ಅವರ ಪತ್ನಿ ಪುಷ್ಪ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತರು ಪುತ್ರರಾದ ರಾಮಕ್ಷತ್ರೀಯ ಸೇವಾ ಸಂಘದ ಮಾಜಿ ಅಧ್ಯಕ್ಷ ಸುರೇಶ್‌ ಕುಮಾರ್, ದಿನೇಶ್ ಕುಮಾ‌ರ್, ಸೊಸೆಯಂದಿರು, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Read More

ಮಂಗಳೂರು ವಿವಿ ಘಟಕ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು,:2026-27ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಘಟಕ ಕಾಲೇಜುಗಳಲ್ಲಿ ಅಗತ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು ಮಂಗಳಗಂಗೋತ್ರಿ, ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿ ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಬನ್ನಡ್ಕ, ಮೂಡಬಿದಿರೆ ಕಾಲೇಜುಗಳ ಪದವಿ ಕಾರ್ಯಕ್ರಮಗಳಿಗೆ ನೇಮಕಾತಿ ನಡೆಯಲಿದೆ. ಇಂಗ್ಲಿಷ್, ಕನ್ನಡ, ಹಿಂದಿ, ಸಂಸ್ಕೃತ, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಭೂಗೋಳಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಮೈಕ್ರೋಬಯಾಲಜಿ, ಕಂಪ್ಯೂಟರ್ ಸೈನ್ಸ್/ಬಿಸಿಎ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ವಾಣಿಜ್ಯ ಮತ್ತು ನಿರ್ವಹಣೆ, ದೈಹಿಕ…

Read More

ಅಶೋಕ್ ರೈಗೆ ಸಚಿವ ಸ್ಥಾನ ಚರ್ಚೆ ಮತ್ತೆ ಗರಿಗೆದರಿತು.ಹೈಕಮಾಂಡ್ ಬುಲಾವ್ ಹಿನ್ನೆಲೆ ದೆಹಲಿಗೆ ತೆರಳಿದ ಶಾಸಕ

ಪುತ್ತೂರು, ಜೂನ್ 19: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆಗಳ ಬಗ್ಗೆ ಮತ್ತೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ರಚನೆಯ ಸಂದರ್ಭದಲ್ಲೇ ಅಶೋಕ್ ರೈ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಮಾತುಗಳು ಕೇಳಿಬಂದಿದ್ದವು. ಮೊದಲ ಹಂತದ ಸಚಿವ ಸಂಪುಟದಲ್ಲೇ ಅವಕಾಶ ದೊರೆಯಲಿದೆ ಎಂಬ ನಿರೀಕ್ಷೆ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಮೂಡಿತ್ತು….

Read More

ರಸಗೊಬ್ಬರ ದರ ಏರಿಕೆಯಿಂದ ರೈತರ ದೋಚಾಟ: ಕೆಆರ್‌ಎಸ್ ಗಂಭೀರ ಆರೋಪ

ಪುತ್ತೂರು; ರೈತರಿಗೆ ಅಗತ್ಯವಾದ ರಸಗೊಬ್ಬರಗಳ ಅಭಾವ ಸೃಷ್ಟಿಸಿ ದರ ಏರಿಕೆ ಮಾಡಿ ರೈತರನ್ನು ವಂಚಿಸುವ ಕೆಲಸ ಕಳೆದ ಹಲವಾರು ವರ್ಷಗಳಿಂದ ನಡೆಯುತ್ತಿದೆ. ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಉಂಟು ಮಾಡುವ ಮೂಲಕ ಸಬ್ಸಿಡಿ ವ್ಯಾಪ್ತಿಗೆ ಬರುವ ಯೂರಿಯಾ ಹಾಗೂ ಡಿಎಪಿ ರಸಗೊಬ್ಬರಗಳ ಮೂಲ ಬೆಲೆಯಿಂದ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಮೂಲಕ ರಾಜ್ಯದಲ್ಲಿ ಸುಮಾರು 2 ಸಾವಿರ ಕೋಟಿ ಹಣವನ್ನು ರೈತರಿಂದ ಮಾರಾಟಗಾರರು, ಅಧಿಕಾರಿಗಳು ಮತ್ತು ರಾಜಕಾರಣಿಗಳು ದೋಚುತ್ತಿದ್ದಾರೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ವೇಣುಗೋಪಾಲ್…

Read More

ರಾಹುಲ್ ಗಾಂಧಿ ಜನ್ಮದಿನ: ಹಿರಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸನ್ಮಾನ

ಉಡುಪಿ:ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಬೇಕಾದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಬ್ರಹ್ಮಾವರದಲ್ಲಿ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾದ ಹಿರಿಯ ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ ಹಾಗೂ ಸ್ವಚ್ಛತಾ ಕಾರ್ಮಿಕರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಿಜೆಪಿ ಉದ್ಯಮಿಗಳು ಮತ್ತು ಶ್ರೀಮಂತರ ಪರ ಇರುವ ಪಕ್ಷವಾಗಿದ್ದು, ಕಾಂಗ್ರೆಸ್…

Read More
error: Content is protected !!