ರಾಮ ಮಂದಿರ ದೇಣಿಗೆ ವಿವಾದಕ್ಕೆ ಹೊಸ ತಿರುವು: 1,250 ಅಮೂಲ್ಯ ಇಟ್ಟಿಗೆಗಳು ನಾಪತ್ತೆ ಆರೋಪ

ಅಯೋಧ್ಯೆ, ಅಯೋಧ್ಯೆಯ ರಾಮ ಮಂದಿರ ದೇಣಿಗೆ ನಿರ್ವಹಣೆ ಕುರಿತ ವಿವಾದಕ್ಕೆ ಹೊಸ ತಿರುವು ಸಿಕ್ಕಿದ್ದು, ರಾಮ ಜನ್ಮಭೂಮಿ ಚಳವಳಿಯ ಕಾರ್ಯಕರ್ತ ಸಂತೋಷ್ ದುಬೆ ಅವರು ಸುಮಾರು 1,250 ಚಿನ್ನ, ಬೆಳ್ಳಿ, ವಜ್ರ ಹಾಗೂ ಅಷ್ಟಧಾತುವಿನಿಂದ ತಯಾರಿಸಲಾದ ಅಮೂಲ್ಯ ಇಟ್ಟಿಗೆಗಳು ನಾಪತ್ತೆಯಾಗಿವೆ ಎಂದು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ, ದೇವಾಲಯದ ಆಡಳಿತಾಧಿಕಾರಿ ಗೋಪಾಲ್ ರಾವ್ ಹಾಗೂ ರಾಮ್ ಶಂಕರ್…

Read More

ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರದ ಆರೋಪ ಆತಂಕಕಾರಿ: ಶೀರೂರು ಶ್ರೀ

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪಗಳು ಆತಂಕಕಾರಿ ಬೆಳವಣಿಗೆಯಾಗಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಪರ್ಯಾಯ ಪೀಠಾಧಿಪತಿಗಳಾದ ಶೀರೂರು ಮಠದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದಂತಹ ಮಹತ್ವದ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ನಡೆಸಲು ನೂರಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದೆ ಎನ್ನುವ ಆರೋಪಗಳು ಕೇಳಿಬರುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ಆರೋಪಗಳ ಹಿಂದೆ…

Read More

ಕಲ್ಲರಕೋಡಿಯಲ್ಲಿ ನೂತನ ಪದವಿಪೂರ್ವ ಕಾಲೇಜು ಕಟ್ಟಡ ಉದ್ಘಾಟನೆ

ನರಿಂಗಾನ: ನರಿಂಗಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲರಕೋಡಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಉನ್ನತೀಕರಿಸಿದ ಪದವಿಪೂರ್ವ ಕಾಲೇಜು ಕಟ್ಟಡದ ಉದ್ಘಾಟನಾ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ನೂತನ ಕಾಲೇಜು ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ U. T. Khader ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಾಲೇಜು ಮಂಜೂರುಗೊಳಿಸುವುದಕ್ಕಿಂತ ಅದನ್ನು ಕಾರ್ಯರೂಪಕ್ಕೆ ತಂದು ಯಶಸ್ವಿಯಾಗಿ ನಡೆಸುವುದು ಮುಖ್ಯ ಎಂದು ಹೇಳಿದರು. “ಕಲ್ಲರಕೋಡಿಗೆ ಕಾಲೇಜು ಮಂಜೂರಾದ ಬಳಿಕ ಅದನ್ನು ಉಳಿಸಿ ಬೆಳೆಸುವುದು…

Read More

ಚೆಕ್ ಬೌನ್ಸ್ ಪ್ರಕರಣಗಳ ಇತ್ಯರ್ಥಕ್ಕೆ ವಿಶೇಷ ಲೋಕ ಅದಾಲತ್: ಜುಲೈ 18 ಮತ್ತು ನವೆಂಬರ್ 21ರಂದು ಆಯೋಜನೆ

ಮಂಗಳೂರು, ಜೂ.16: ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ ಚೆಕ್ ಬೌನ್ಸ್ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ 2026ರ ಜುಲೈ 18 ಹಾಗೂ ನವೆಂಬರ್ 21ರಂದು ವಿಶೇಷ ಲೋಕ ಅದಾಲತ್ ಆಯೋಜಿಸಲಾಗುತ್ತಿದೆ ಎಂದು ಖಾಯಂ ಜನತಾ ನ್ಯಾಯಾಲಯದ ನ್ಯಾಯಾಧೀಶ ಜೈಶಂಕರ್ ತಿಳಿಸಿದ್ದಾರೆ. ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿ, ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಸಮನ್ಸ್ ಮತ್ತು ವಾರಂಟ್ ಜಾರಿಯಿಂದ ಪೊಲೀಸ್ ಇಲಾಖೆಯ ಮೇಲೂ ಹೆಚ್ಚಿನ ಒತ್ತಡ ಉಂಟಾಗುತ್ತಿದೆ…

Read More

ಟಿಎಂಸಿ ಸಂಸದರ ಬಿಜೆಪಿ ಗುಂಪಿನ ಸೇರ್ಪಡೆ ಜನಾದೇಶಕ್ಕೆ ದ್ರೋಹ: ಅಬ್ದುಲ್ ಮಜೀದ್

ಬಿಸಿ ರೋಡ್, ಜೂನ್ 16: ಟಿಎಂಸಿಯ 20 ಲೋಕಸಭಾ ಸದಸ್ಯರು ಮತದಾರರು ನೀಡಿದ ಜನಾದೇಶಕ್ಕೆ ವಿರುದ್ಧವಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಪಾಳಯವನ್ನು ಸೇರಿರುವುದು ಜನತಂತ್ರದ ಮೌಲ್ಯಗಳಿಗೆ ವಿರುದ್ಧವಾದ ನಡೆ ಹಾಗೂ ಮತದಾರರ ವಿಶ್ವಾಸಕ್ಕೆ ಮಾಡಿದ ದ್ರೋಹವಾಗಿದೆ ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ನಡೆದ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರತಿನಿಧಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪ್ರಜಾಪ್ರಭುತ್ವದ ಸವಾಲುಗಳು ಹಾಗೂ ಕರ್ನಾಟಕದ ರಾಜಕೀಯ ಪರಿಸ್ಥಿತಿಗಳ ಕುರಿತು…

Read More

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

ಗೋಲ್ಡ್ ಆ್ಯಂಡ್ ಡೈಮಂಡ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಶೋರೂಂಗಳ ವತಿಯಿಂದ ಆಯೋಜಿಸಲಾದ ಡೈಮಂಡ್‌ ಫೆಸ್ಟ್‌ನ ಅಂಗವಾಗಿ ಪುತ್ತೂರು ಶೋರೂಂನಲ್ಲಿ ಲಕ್ಕಿ ಡ್ರಾ ಕಾರ್ಯಕ್ರಮ ನಡೆಯಿತು. ಮಾ. 28ರಿಂದ ಮೇ 10ರ ವರೆಗೆ ನಡೆದ ಡೈಮಂಡ್ ಫೆಸ್ಟ್ ಅವಧಿಯಲ್ಲಿ ವಜ್ರಾಭರಣಗಳನ್ನು ಖರೀದಿಸಿದ ಗ್ರಾಹಕರಿಗೆ ಲಕ್ಕಿ ಡ್ರಾ ಕೂಪನ್ ಗಳನ್ನು ವಿತರಿಸಲಾಗಿದ್ದು, ಅವುಗಳಲ್ಲಿ ಆಯ್ಕೆಯಾದ ಅದೃಷ್ಟಶಾಲಿ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ಘೋಷಿಸಲಾಗಿತ್ತು. ಗ್ರಾಹಕರಿಂದದೊರೆತ ಅಭೂತಪೂರ್ವ ಪ್ರತಿಕ್ರಿಯೆಯಿಂದ ಡೈಮಂಡ್ ಫೆಸ್ಟ್ ಯಶಸ್ವಿಯಾಗಿ ಸಂಪನ್ನಗೊಂಡಿತು. ಲಕ್ಕಿ ಡ್ರಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ…

Read More

ಚಾರ್ಮಾಡಿ ಘಾಟ್‌ನಲ್ಲಿ ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಎಸ್ಪಿ ಸಿ.ಎ. ಸೈಮನ್ ಅವರು, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಮತ್ತೊಬ್ಬ ಸಿಬ್ಬಂದಿಯೊಂದಿಗೆ ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿಯಾಗಲು ತೆರಳುತ್ತಿದ್ದರು. ಈ ವೇಳೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಸಮೀಪ ಇನೋವಾ ಕಾರು ಚಾಲಕರ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮ ಎಸ್ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಚಾಲಕ ಹಾಗೂ ಸಿಬ್ಬಂದಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯ…

Read More

ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

ಕರ್ನಾಟಕದ ಕ್ರೀಡಾ ಕ್ಷೇತ್ರಕ್ಕೆ ಹೆಮ್ಮೆಯ ಕ್ಷಣವಾಗಿರುವ ಮಹತ್ವದ ಸಾಧನೆಯಲ್ಲಿ, ಮಂಗಳೂರಿನ Presidency PU College ವಿದ್ಯಾರ್ಥಿ ಹಾಗೂ ಪ್ರತಿಭಾವಂತ ಬಾಸ್ಕೆಟ್‌ಬಾಲ್ ಆಟಗಾರ ದೀಕ್ಷಿತ್ ಅಮೀನ್ ಅವರು ಶಾಲಾ ಕ್ರೀಡಾ ಮಹಾಸಂಘ (SGFI) ವತಿಯಿಂದ ಆಯ್ಕೆಯಾದ ಭಾರತೀಯ ಶಾಲಾ ಬಾಲಕರ ಅಂಡರ್-18 ಬಾಸ್ಕೆಟ್‌ಬಾಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅವರು ಜೂನ್ 13ರಿಂದ 23ರವರೆಗೆ ಸರ್ಬಿಯಾದ ಜ್ಲಾಟಿಬೋರ್‌ನಲ್ಲಿ ನಡೆಯಲಿರುವ ವಿಶ್ವ ಶಾಲಾ ಬಾಲಕರ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಈ ಸಾಧನೆಯನ್ನು ಇನ್ನಷ್ಟು ವಿಶೇಷಗೊಳಿಸುವ ಅಂಶವೆಂದರೆ, ರಾಷ್ಟ್ರೀಯ ತಂಡದಲ್ಲಿ ಸ್ಥಾನ…

Read More

ಇಂಧನ ದರ ಏರಿಕೆಯಿಂದ ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ: ಪದ್ಮರಾಜ್ ಪೂಜಾರಿ

ಮಂಗಳೂರು:ಕೇಂದ್ರ ಸರ್ಕಾರದ ಇತ್ತೀಚಿನ ಗ್ಯಾಸ್, ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದ ಜನಸಾಮಾನ್ಯರ ಜೀವನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ಬೆಲೆ ಏರಿಕೆಯ ಹೊರೆ ನೇರವಾಗಿ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಬಿದ್ದಿದೆ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆರೋಪಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗುತ್ತಿದ್ದರೂ ಅದರ ಪ್ರಯೋಜನವನ್ನು ಕೇಂದ್ರ ಸರ್ಕಾರ ಜನರಿಗೆ ತಲುಪಿಸುತ್ತಿಲ್ಲ ಎಂದು ಟೀಕಿಸಿದರು….

Read More

ಪ್ರೊ.ಬಾಲಕೃಷ್ಣ ಗಟ್ಟಿ ನಿಧನಕ್ಕೆ ಪತ್ರಕರ್ತರಿಂದ ಸಂತಾಪ ಸೂಚಕ ಸಭೆ

ಮಂಗಳೂರು, ಜೂ.16;ಹಿರಿಯ ಪತ್ರಕರ್ತ ಪ್ರೊ.ಬಾಲಕೃಷ್ಣ ಗಟ್ಟಿ ಯವರ ನಿಧನಕ್ಕೆದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ,ಮಂಗಳೂರುಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸಂತಾಪ ಸೂಚಕ ಸಭೆ ನಡೆಸಿ ನುಡಿನಮನ ಸಲ್ಲಿಸಲಾಯಿತು.ಈ ಸಂತಾಪ ಸೂಚಕ ಸಭೆಯಲ್ಲಿಹಿರಿಯ ಪತ್ರಕರ್ತರಾದ ಚಿದಂಬರ ಬೈಕಂಪಾಡಿ ಮಾತನಾಡುತ್ತಾ, ಬಾಲಕೃಷ್ಣ ಗಟ್ಟಿಯವರು ಶಿಕ್ಷಣ, ಪತ್ರಿಕೋದ್ಯಮದ ಜೊತೆಗೆ ಸಾಹಿತ್ಯ ಕ್ಷೇತ್ರಕ್ಕೂ ತಮ್ಮದೇ ಆದ ಕೊಡುಗೆ ನೀಡಿದವರು ಜೊತೆಗೆ ಸಂಘಟ ನೆಗೂ ಒತ್ತು ನೀಡಿದವರು ಎಂದು ಅವರ ಜೊತೆಗಿನ ಅನುಭವ…

Read More
error: Content is protected !!