ದ.ಕ.ದಲ್ಲಿ ಕಾಂಗ್ರೆಸ್ ಗೆಲುವಿನ ಗತವೈಭವ ಮರುಕಳಿಸುವುದೇ ಗುರಿ: ಪದ್ಮರಾಜ್
ಮಂಗಳೂರು: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಿಂತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಗೆಲುವಿನ ಗತವೈಭವವನ್ನು ಮರಳಿ ತರುವುದೇ ತಮ್ಮ ಮೊದಲ ಆದ್ಯತೆ ಎಂದು ಜಿಲ್ಲಾ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿನ ಪಕ್ಷದ ಹಿನ್ನಡೆಯನ್ನು ಪುನರ್‌ವಿಮರ್ಶಿಸಿ, ತಳಮಟ್ಟದಿಂದ ಪಕ್ಷ ಸಂಘಟನೆ ಬಲಪಡಿಸಲಾಗುವುದು. ಹಿರಿಯ-ಕಿರಿಯ ನಾಯಕರನ್ನು ವಿಶ್ವಾಸಕ್ಕೆ ಪಡೆದು ಗ್ರಾಮ ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಸಂಪರ್ಕಿಸಿ ಸಂಘಟನೆಗೆ ಹೊಸ ಚೈತನ್ಯ ನೀಡಲಾಗುವುದು ಎಂದರು….
