ವಿದ್ಯಾರ್ಥಿಗಳು ಜ್ಞಾನಾರ್ಜನೆಗೆ ತಂತ್ರಜ್ಞಾನ ಬಳಸಬೇಕು: ಎಂ.ಎಲ್. ಅಶ್ವಿನಿ
ಕಾಸರಗೋಡು: ಸ್ಮಾರ್ಟ್‌ಫೋನ್ ಸೇರಿದಂತೆ ಆಧುನಿಕ ತಂತ್ರಜ್ಞಾನ ವ್ಯವಸ್ಥೆಗಳನ್ನು ಕೇವಲ ಮನರಂಜನೆಗಾಗಿ ಮಾತ್ರವಲ್ಲದೆ ಜ್ಞಾನಾರ್ಜನೆ ಹಾಗೂ ಶಿಕ್ಷಣದ ಉದ್ದೇಶಕ್ಕೂ ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಕರೆ ನೀಡಿದರು. ಮಧೂರು ಎಸ್‌ಸಿ-ಎಸ್‌ಟಿ ಪಂಚಾಯತ್ ಸಮಿತಿಯ ವತಿಯಿಂದ ಕೂಡ್ಲು ಗೋಪಾಲಕೃಷ್ಣ ವಿದ್ಯಾಲಯದಲ್ಲಿ ಆಯೋಜಿಸಲಾದ ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಂತ್ರಜ್ಞಾನವನ್ನು ವಿದ್ಯಾರ್ಥಿಗಳು ದುರುಪಯೋಗಪಡಿಸಿಕೊಳ್ಳದಂತೆ ಪೋಷಕರು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ ಅವರು, ಕಳೆದ 12 ವರ್ಷಗಳಲ್ಲಿ ಶಿಕ್ಷಣ ಸೇರಿದಂತೆ…
