‘ವೋಟ್ ಚೋರಿ, ಸೀಟ್ ಚೋರಿ ಪ್ರಜಾಪ್ರಭುತ್ವಕ್ಕೆ ಕಳಂಕ’: ಐವನ್ ಡಿ’ಸೋಜಾ ಆರೋಪ

ಮಂಗಳೂರು, ಜೂನ್ 13: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ಇತ್ತೀಚಿನ ಕಾರ್ಯವೈಖರಿಯಿಂದ ದೇಶದಲ್ಲಿ ಪ್ರಜಾಪ್ರಭುತ್ವದ ಮೇಲಿನ ಜನರ ನಂಬಿಕೆ ಕುಸಿಯುವಂತಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಆರೋಪಿಸಿದರು. ನಗರದ ಮಹಾನಗರ ಪಾಲಿಕೆ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವೋಟ್ ಚೋರಿ” ಮತ್ತು “ಸೀಟ್ ಚೋರಿ” ಪ್ರಜಾಪ್ರಭುತ್ವಕ್ಕೆ ಗಂಭೀರ ಹೊಡೆತ ನೀಡಿದ್ದು, ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರು ಮೌನ…

Read More

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ–ಎನ್‌ಡಿಪಿಎಸ್‌ ಕಾಯ್ದೆಯಡಿ ಆರೋಪಿಯ ಬಂಧನ

ಉಡುಪಿ: ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ ರಾಜೀವನಗರ ನಿವಾಸಿ ಜಗದೀಶ ಪೂಜಾರಿ (33) ಎಂಬಾತನನ್ನು ಪಿಐಟಿ–ಎನ್‌ಡಿಪಿಎಸ್‌ (PIT-NDPS) ಕಾಯ್ದೆಯಡಿ ಬಂಧಿಸಲಾಗಿದೆ.ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದಲ್ಲಿ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಬಂಧನ ಆದೇಶ ಹೊರಡಿಸಿದ್ದು, ಅದರಂತೆ ಜೂನ್ 12ರಂದು ಆರೋಪಿಯನ್ನು ಬಂಧಿಸಲಾಗಿದೆ. ಜಗದೀಶ ಪೂಜಾರಿ ವಿರುದ್ಧ ಮಣಿಪಾಲ ಹಾಗೂ ಸೆನ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ…

Read More

‘ತಾಯಿಯ ಹೆಸರಲ್ಲಿ ಒಂದು ಗಿಡ’ ಅಭಿಯಾನಕ್ಕೆ ಚಾಲನೆ

ಮಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅವರ ಸ್ವಾಗತ ಸಮಾರಂಭದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ, ಪರಿಸರ ಸಂರಕ್ಷಣೆ ಮತ್ತು ಹಸಿರು ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಯಿತು. ಜಿಲ್ಲೆಯ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಮಹಿಳಾ ಮೋರ್ಚಾ ಹಾಗೂ ಯುವ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಸಮ್ಮುಖದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಗೆ ಸ್ಪಂದಿಸಿ ಹಮ್ಮಿಕೊಳ್ಳಲಾದ ‘ತಾಯಿಯ ಹೆಸರಲ್ಲಿ ಒಂದು ಗಿಡ’ ಅಭಿಯಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ಡಾ. ರಾಧಾ…

Read More

ಜಾಗತಿಕ ಸವಾಲುಗಳ ನಡುವೆಯೂ ಭಾರತ 7.7% ಆರ್ಥಿಕ ಬೆಳವಣಿಗೆ ಸಾಧನೆ: ರಾಧಾ ಮೋಹನ್ ದಾಸ್ ಅಗರ್ವಾಲ್

ಮಂಗಳೂರು, ಜೂನ್ 13: ಜಾಗತಿಕ ಆರ್ಥಿಕ ಹಿಂಜರಿತ, ಇಂಧನ ಬಿಕ್ಕಟ್ಟು ಹಾಗೂ ವಿವಿಧ ಅಂತರರಾಷ್ಟ್ರೀಯ ಸಂಘರ್ಷಗಳ ನಡುವೆಯೂ ಭಾರತವು ಶೇ.7.7ರ ಆರ್ಥಿಕ ಬೆಳವಣಿಗೆ ದರ ಸಾಧಿಸಿದ್ದು, ವಿಶ್ವದ ಪ್ರಮುಖ ಆರ್ಥಿಕ ರಾಷ್ಟ್ರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್ ಹೇಳಿದರು. ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013-14ರಲ್ಲಿ 1.9 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿದ್ದ ಭಾರತ ಇಂದು 4.1 ಟ್ರಿಲಿಯನ್ ಡಾಲರ್…

Read More

​ಪಯ್ಯನ್ನೂರು ಚಿನ್ನಾಭರಣ ದರೋಡೆ ಪ್ರಕರಣ: ಉಪ್ಪಳದಿಂದ ಬಿಜೆಪಿ ಪ್ರಾದೇಶಿಕ ನಾಯಕನ ಬಂಧನ

ಮಂಜೇಶ್ವರ: ಪಯ್ಯನ್ನೂರು ಎಡಾಟ್‌ನಲ್ಲಿ ಸ್ವರ್ಣೋದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ, ಲಕ್ಷಾಂತರ ರೂಪಾಯಿ ನಗದು ಮತ್ತು ಚಿನ್ನಾಭರಣವನ್ನು ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಪ್ರಮುಖ ಆರೋಪಿಯನ್ನು ಉಪ್ಪಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ​ಕಣ್ಣೂರು ಅಂಜಾಪೀಡಿಗ ನಿವಾಸಿ, ಬಿಜೆಪಿ ಪ್ರಾದೇಶಿಕ ನಾಯಕ ಸನು ಅಲಿಯಾಸ್ ಸಂತೋಷ್ ಬಂಧಿತ ಆರೋಪಿ. ಈತನ ಬಂಧನವು ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು ಪಡೆದಿದೆ. ಮೂಲತಃ ಮಹಾರಾಷ್ಟ್ರದವರಾಗಿದ್ದು, ತಲಕ್ಕೇರಿಯಲ್ಲಿ ಚಿನ್ನಾಭರಣ ಸಂಸ್ಥೆಯನ್ನು ನಡೆಸುತ್ತಿದ್ದ ಕುಟುಂಬವು ಜೂನ್ 2ರಂದು ಪ್ರಯಾಣಿಸುತ್ತಿದ್ದಾಗ, ಎಡಾಟ್‌ನಲ್ಲಿ ದುಷ್ಕರ್ಮಿಗಳು ಕಾರನ್ನು ಹಿಂಬಾಲಿಸಿ, ಅಡ್ಡಗಟ್ಟಿ ದರೋಡೆ ನಡೆಸಿದ್ದರು….

Read More

ಅಕ್ರಮ ಆನೆದಂತ ಸಾಗಾಟ ಪತ್ತೆ: ಮೂವರು ವಶ

ಮಂಗಳೂರು,- ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದ ಬೆಳ್ತಂಗಡಿ ಶಶಾಂಕ ಪುದುವೆಟ್ಟು, ಮಂಜೇಶ್ವರದ ಅಬ್ದುಲ್ ಖಾದರ್, ಅತ್ತಾವರದ ಪ್ರಭಾಚಂದ್ರ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 2 ಕಾರು ಮತ್ತು 42.700 ಕಿ.ಗ್ರಾಂ ತೂಕದ 2 ಆನೆದಂತಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಬೆಂಗಳೂರು, ಮತ್ತು ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೆÇಲೀಸ್ ಅಧೀಕ್ಷಕ ಪವನ್‍ನೆಜ್ಜೂರು ಐ.ಪಿ.ಎಸ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಸಿ.ಐ.ಡಿ ಪೆÇಲೀಸ್ ಅರಣ್ಯ ಸಂಚಾರಿ…

Read More

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು: ನ್ಯಾಯಾಧೀಶೆ ಜೈಬುನ್ನೀಸಾ

ಮಂಗಳೂರು, ಜೂನ್ 13: ಬಾಲಕಾರ್ಮಿಕ ಎಂಬ ಸಾಮಾಜಿಕ ಪಿಡುಗನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಮಹಾನಗರಪಾಲಿಕೆ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಾಲಕಾರ್ಮಿಕ ನಿರ್ಮೂಲನೆ ಕುರಿತ…

Read More

ಕಣಪಗಾರು ಗ್ರಾಮದಲ್ಲಿ ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಲೋಕಾರ್ಪಣೆ: ಜನರ ಸಮಸ್ಯೆ ಆಲಿಸಿದ ಸಂಸದ ಬಿ.ವೈ. ರಾಘವೇಂದ್ರ

ಶಿವಮೊಗ್ಗ, ಜೂನ್ 13: ಸಾಗರ ತಾಲೂಕಿನ ಕಣಪಗಾರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಅನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿದರು. ಮೊಬೈಲ್ ಸಂಪರ್ಕ ಸೌಲಭ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನಿರ್ಮಿಸಲಾದ ಈ ಟವರ್‌ನಿಂದ ಕಣಪಗಾರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಉತ್ತಮ ದೂರಸಂಪರ್ಕ ಸೇವೆ ದೊರೆಯಲಿದೆ. ಬಳಿಕ ಭಾನುಕುಳ್ಳಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಜನಸಂಪರ್ಕ ಸಭೆ ನಡೆಸಿದ ಸಂಸದರು, ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿ ಸಮಸ್ಯೆಗಳ…

Read More

ಧರ್ಮಸ್ಥಳ ಪ್ರಕರಣ: ಅಂತಿಮ ವರದಿ ಸಲ್ಲಿಸಲು ಎಸ್‌ಐಟಿಗೆ ನಿರ್ದೇಶನ ನೀಡುವಂತೆ ಹೈಕೋರ್ಟ್‌ಗೆ ಚಿನ್ನಯ್ಯ ಅರ್ಜಿ

ಬೆಂಗಳೂರು: ಧರ್ಮಸ್ಥಳದಲ್ಲಿ ಸಂತ್ರಸ್ತರ ಮೃತದೇಹಗಳನ್ನು ತಾನು ಹೂತಿದ್ದೇನೆ ಎಂದು ಹೇಳಿಕೊಂಡಿದ್ದ ಸ್ವಚ್ಛತಾ ಕಾರ್ಮಿಕ ಚಿನ್ನಯ್ಯ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ವರದಿ ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ, ಪ್ರಾಥಮಿಕ ತನಿಖಾ ವರದಿಯಲ್ಲಿ ಹೆಸರು ಉಲ್ಲೇಖಗೊಂಡಿರುವ ವ್ಯಕ್ತಿಗಳು, ಯೂಟ್ಯೂಬರ್‌ಗಳು ಹಾಗೂ ಇತರ ಸಂಚುಕೋರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ 2025ರ ಡಿಸೆಂಬರ್ 18ರಂದು ತಾನು ನೀಡಿದ್ದ ದೂರನ್ನು ಪರಿಗಣಿಸುವಂತೆ ಮನವಿ ಮಾಡಲಾಗಿದೆ….

Read More

ಕೊಲ್ಲೂರು ದೇವಾಲಯದಲ್ಲಿ ವಿಜಯ್ ಭೇಟಿ; ಭದ್ರತೆ ಮತ್ತು ಭಕ್ತರ ಅನುಕೂಲದ ನಡುವೆ ಸಮತೋಲನದ ಪ್ರಶ್ನೆ

ವಿಐಪಿ ಭೇಟಿ ವೇಳೆ ಭಕ್ತರಿಗೆ ತೊಂದರೆ ತಪ್ಪಿಸಬೇಕು: ಕೊಲ್ಲೂರು ದರ್ಶನದ ಬಳಿಕ ಮತ್ತೆ ಚರ್ಚೆಗೆ ಬಂದ ವಿಶೇಷ ವ್ಯವಸ್ಥೆ ಉಡುಪಿ: ದೇವಾಲಯಗಳಲ್ಲಿ ಅತಿ ಗಣ್ಯ ವ್ಯಕ್ತಿಗಳಿಗೆ ವಿಶೇಷ ದರ್ಶನ ವ್ಯವಸ್ಥೆ ಬಗ್ಗೆ ಆಗಾಗ ನಮ್ಮ ದೇಶದ ನ್ಯಾಯಾಲಯಗಳು ಸಂದರ್ಭಾನುಸಾರ ಅಸಮಾಧಾನ ವ್ಯಕ್ತಪಡಿಸಿವೆ. ತಮಿಳು ನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಉಡುಪಿ ಜಿಲ್ಲೆಯ ಪ್ರಖ್ಯಾತ ಶಕ್ತಿ ಪೀಠ ಕೊಲ್ಲೂರು‌ ಶ್ರೀ ಮೂಕಾಂಬಿಕಾ ದೇವಾಲಯ ಭೇಟಿಗೆ ಆಗಮಿಸಿದರು.ಅವರ ಭದ್ರತೆ ಹೇಗಿತ್ತು ಎಂಬುದರ ಒಂದು ನೋಟ ಇಲ್ಲಿದೆ. ವಿ.ಐ.ಪಿ. ದರ್ಶನ…

Read More
error: Content is protected !!