ಕಸದ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆಗೆ ತಕ್ಷಣ ಪರಿಹಾರ ನೀಡಿ: ಉಪ್ಪಿನಂಗಡಿ ಗ್ರಾ.ಪಂಗೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಆಗ್ರಹ

ಪುತ್ತೂರು ತಾಲೂಕಿನ ೨ನೇ ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆಗಳೂ ಸೇರಿದಂತೆ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದರೂ ಉಪ್ಪಿನಂಗಡಿ ಗ್ರಾಮಪಂಚಾಯತ್ ಯಾವುದೇ ವಿಚಾರಕ್ಕೆ ಸ್ಪಂಧಿಸದೆ ಮೌನಾಚರಣೆ ಮಾಡುತ್ತಿದೆ. ಸಾರ್ವಜನಿಕರ ಆರೋಗ್ಯ ಹಾಗೂ ಬದುಕಿನ ಹಿತದೃಷ್ಟಿಯಿಂದ ತಕ್ಷಣ ಈ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಗ್ರಾಪಂ ಕ್ರಮಕೈಗೊಳ್ಳಬೇಕು ಎಂದು ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಆಗ್ರಹಿಸಿದೆ. ಸಂಘದ ಅಧ್ಯಕ್ಷ ಪ್ರಶಾಂತ್ ಡಿಕೋಸ್ತ ಮತ್ತು ಕಾರ್ಯದರ್ಶಿ ಯೂನಿಕ್ ಅಬ್ದುಲ್ ರಹಿಮಾನ್ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಉಪ್ಪಿನಂಗಡಿ ಗ್ರಾಪಂ…

Read More

ಮತದಾರರ ಪಟ್ಟಿಯ ಎಸ್‌ಐಆರ್‌ನಲ್ಲಿ ಮಹಿಳಾ ಸ್ನೇಹಿ ಕ್ರಮ ಅನುಸರಿಸಿ: ಜಿಲ್ಲಾಡಳಿತಕ್ಕೆ ಜನವಾದಿ ಮಹಿಳಾ ಸಂಘಟನೆ ಮನವಿ

ಮಂಗಳೂರು, ಜೂನ್ 13: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮಹಿಳಾ ಸ್ನೇಹಿ ಕ್ರಮಗಳನ್ನು ಅನುಸರಿಸಿ, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಶುದ್ಧೀಕರಣದ ಹೆಸರಿನಲ್ಲಿ ದೇಶಾದ್ಯಂತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಹಲವು ರಾಜ್ಯಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಿಂದ ಹೊರಗುಳಿದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಸಂಘಟನೆ ತಿಳಿಸಿದೆ. ಬಿಹಾರ, ಮಧ್ಯಪ್ರದೇಶ ಹಾಗೂ ಪಶ್ಚಿಮ…

Read More

ವಿಪತ್ತು ಸಂದರ್ಭಗಳಲ್ಲಿ ಧೈರ್ಯ ಮತ್ತು ಜಾಗೃತಿಯೇ ಜೀವ ರಕ್ಷಣೆ: ಎನ್‌ಡಿಆರ್‌ಎಫ್‌ನಿಂದ ವಿದ್ಯಾರ್ಥಿಗಳಿಗೆ ತರಬೇತಿ

ಪುತ್ತೂರು, ಜೂನ್ 13: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) 10ನೇ ಬಟಾಲಿಯನ್ ತಂಡದ ವತಿಯಿಂದ ಪುತ್ತೂರಿನ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವಿಪತ್ತು ನಿರ್ವಹಣಾ ಜಾಗೃತಿ ಹಾಗೂ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. 10ನೇ ಬಟಾಲಿಯನ್‌ನ ಇನ್ಸ್‌ಪೆಕ್ಟರ್ ಶಾಂತಿಲಾಲ್ ಜಾಟಿಯಾ ಅವರ ನೇತೃತ್ವದಲ್ಲಿ ಎಎಸ್‌ಐ ಸುಭಾಷ್ ಶಿಂಧೆ ಹಾಗೂ ತಂಡದ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ವಿಪತ್ತುಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಪ್ರವಾಹ, ಭೂಕುಸಿತ, ಚಂಡಮಾರುತ, ಸುನಾಮಿ ಹಾಗೂ ಅಗ್ನಿ…

Read More

ಕಾಂಗ್ರೆಸ್‌ಗಾಗಿ ನಿಷ್ಠೆಯಿಂದ ದುಡಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಉತ್ತಮ ಅವಕಾಶ ಖಚಿತ: ಸಚಿವ ಯು.ಟಿ. ಖಾದರ್

ಮಂಗಳೂರು, ಜೂನ್ 13: ಕಾಂಗ್ರೆಸ್ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರಿಗೂ ಒಂದಲ್ಲಾ ಒಂದು ದಿನ ಉತ್ತಮ ಅವಕಾಶ ದೊರೆಯುವುದು ಖಚಿತವಾಗಿದ್ದು, ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಶುಕ್ರವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದ ಜನರ…

Read More

ಮಂಗಳೂರು ಖಾಸಗಿ ಬಸ್ ಪ್ರಯಾಣ ದರ ಏರಿಕೆ: ಕನಿಷ್ಠ ದರ ₹13ಕ್ಕೆ ಹೆಚ್ಚಳ

ಮಂಗಳೂರು: ನಗರದ ಖಾಸಗಿ ಬಸ್‌ಗಳ ಪ್ರಯಾಣ ದರವನ್ನು ಇಂದಿನಿಂದ ಪರಿಷ್ಕರಿಸಲಾಗಿದ್ದು, ಕನಿಷ್ಠ ಪ್ರಯಾಣ ದರದಲ್ಲಿ ₹1ರಷ್ಟು ಹೆಚ್ಚಳ ಮಾಡಲಾಗಿದೆ. ಈ ಹಿಂದೆ ಕನಿಷ್ಠ ಬಸ್ ದರ ₹12 ಇದ್ದು, ಹೊಸ ದರ ಪರಿಷ್ಕರಣೆಯಂತೆ ಅದು ₹13ಕ್ಕೆ ಏರಿಕೆಯಾಗಿದೆ. ಇಂಧನ ಬೆಲೆ, ನಿರ್ವಹಣಾ ವೆಚ್ಚ ಹಾಗೂ ಇತರೆ ಕಾರ್ಯಾಚರಣಾ ಖರ್ಚುಗಳ ಹೆಚ್ಚಳದ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಮಾಡಲಾಗಿದೆ ಎಂದು ಬಸ್ ಮಾಲೀಕರ ಸಂಘದ ಮೂಲಗಳು ತಿಳಿಸಿವೆ. ಹೊಸ ದರ ಪಟ್ಟಿ ಇಂದಿನಿಂದಲೇ ಜಾರಿಗೆ ಬಂದಿದ್ದು, ಮಂಗಳೂರು ನಗರ ವ್ಯಾಪ್ತಿಯಲ್ಲಿ…

Read More

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಜೇಶ್ವರ, ಜೂ.12: ಸುಮಾರು ಎರಡು ದಶಕಗಳ ಕಾಲ ಕಾನೂನಿನ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಂಬಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಹೊಸಂಗಡಿ ನಿವಾಸಿ ಪ್ರಶಾಂತ್ (44) ಬಂಧಿತ ಆರೋಪಿ. 2006ರ ಅಬಕಾರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರಶಾಂತ್, ಜಾಮೀನು ಪಡೆದು ಬಿಡುಗಡೆಯಾದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಕರ್ನಾಟಕಕ್ಕೆ ಪರಾರಿಯಾಗಿದ್ದನು. ಈ ಹಿನ್ನೆಲೆಯಲ್ಲಿ 2010ರಲ್ಲಿ ನ್ಯಾಯಾಲಯ ಆತನನ್ನು ಘೋಷಿತ ಆರೋಪಿಯಾಗಿ ಘೋಷಿಸಿತ್ತು. ಖಚಿತ ಮಾಹಿತಿ ಆಧರಿಸಿ ಕುಂಬಳೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಬೈಜು ಕೆ. ಜೋಸ್ ನೇತೃತ್ವದಲ್ಲಿ ಚಂದ್ರನ್,…

Read More

ಪೂಜಾ–ಕೃಷ್ಣ ಜೆ. ರಾವ್ ಪ್ರಕರಣಕ್ಕೆ ಸಂಧಾನದ ನಿರೀಕ್ಷೆ: ಜೂನ್ 19ರಂದು ಮಧ್ಯಸ್ಥಿಕೆ ಸಭೆ

ಮಂಗಳೂರು, ಜೂ.12: ಪೂಜಾ ಆಚಾರ್ಯ ಹಾಗೂ ಕೃಷ್ಣ ಜೆ. ರಾವ್ ನಡುವಿನ ವಿವಾದಿತ ಪ್ರಕರಣಕ್ಕೆ ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯುತ್ತಿದ್ದು, ಜೂನ್ 19ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯಲಿರುವ ಮಧ್ಯಸ್ಥಿಕೆ ಸಭೆಯಲ್ಲಿ ಪ್ರಕರಣ ಸುಖಾಂತ್ಯ ಕಾಣುವ ವಿಶ್ವಾಸವಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಕೆ.ಪಿ. ನಂಜುಂಡಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಗು ಮತ್ತು ತಾಯಿಯ ಆರೈಕೆಗಾಗಿ ಪ್ರತಿ ತಿಂಗಳು ₹75 ಸಾವಿರ ನೀಡುವಂತೆ ಹೈಕೋರ್ಟ್ ಆದೇಶಿಸಿದ್ದು, ಈಗಾಗಲೇ ₹75 ಸಾವಿರ ಬಿಡುಗಡೆ…

Read More

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಮತ್ತೋರ್ವ ಪ್ರಮುಖ ಆರೋಪಿಗೆ ಮಧ್ಯಂತರ ಜಾಮೀನು

ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಝಾಕೀರ್ ಸವಣೂರು (35) ಜಾಮೀನು ಪಡೆದ ಆರೋಪಿಯಾಗಿದ್ದು, ಪ್ರಕರಣದ 18ನೇ ಆರೋಪಿಯಾಗಿ ಗುರುತಿಸಲಾಗಿದ್ದಾನೆ. ಪ್ರವೀಣ್ ನೆಟ್ಟಾರ್ ಹತ್ಯೆ ಸಂಚಿನಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪಿಗಳ ಪೈಕಿ ಈತನೂ ಒಬ್ಬನಾಗಿದ್ದಾನೆ. ಪ್ರಕರಣದ ತನಿಖೆ ಆರಂಭವಾದ ಸಂದರ್ಭದಲ್ಲೇ ಬಂಧಿಸಲ್ಪಟ್ಟ ಪ್ರಮುಖ ಶಂಕಿತರಲ್ಲಿ ಝಾಕೀರ್ ಸವಣೂರು ಕೂಡ ಸೇರಿದ್ದ. 2022ರ ಜುಲೈ 28ರಂದು ಬೆಳ್ಳಾರೆಯ ಶಫೀಕ್ ಜೊತೆ…

Read More

ಕಾಸರಗೋಡಿನ ಮಣ್ಣಿನ ಮಗನಿಗೆ ಜಿಲ್ಲೆಯ ‘ಖಾಕಿ’ ಕಿರೀಟ: ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಪಿ. ನಿತಿನ್ ರಾಜ್

ಕಾಸರಗೋಡು: ಕಾಸರಗೋಡು ಜಿಲ್ಲೆ ರಚನೆಯಾಗಿ 44 ವರ್ಷಗಳ ಸುದೀರ್ಘ ಅವಧಿಯ ನಂತರ, ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಕಾಸರಗೋಡಿನವರೇ ಆದ ಐಪಿಎಸ್ ಅಧಿಕಾರಿಯೊಬ್ಬರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಅಪರೂಪದ ವಿದ್ಯಮಾನ ಕಾಸರಗೋಡಿನ ಜನತೆಯಲ್ಲಿ ವಿಶೇಷ ಸಂಭ್ರಮ ಹಾಗೂ ಹೆಮ್ಮೆಯನ್ನು ಮೂಡಿಸಿದೆ. ​ಕಾಞಂಗಾಡಿನ ರಾವಣೇಶ್ವರಂನ ಕಳರಿಕಾಲ್ ನಿವಾಸಿ ಪಿ. ನಿತಿನ್ ರಾಜ್, ಈಗ ಕಾಸರಗೋಡಿನ ನೂತನ ಪೊಲೀಸ್ ಮುಖ್ಯಸ್ಥ. 2018ರ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ 210ನೇ ರ‍್ಯಾಂಕ್ ಗಳಿಸಿ ಐಪಿಎಸ್ ಪಡೆದ ಇವರು, ಈ…

Read More

ತಮಿಳುನಾಡು ಸಿಎಂ ವಿಜಯ್‌ಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ: ಕರವೇ ಕಾರ್ಯಕರ್ತರ ವಶ

ಉಡುಪಿ: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಕಾರ್ಯಕರ್ತರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದರು. ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಕೊಲ್ಲೂರು ಭೇಟಿ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಬಲಾಯಿಪಾದೆ ಪ್ರದೇಶದಲ್ಲಿ ಕರವೇ ಉಡುಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದರು. ಆದರೆ ವಿಜಯ್…

Read More
error: Content is protected !!