ಜನನ-ಮರಣ ಪ್ರಮಾಣ ಪತ್ರ ವಿತರಣೆಯಲ್ಲಿ ವಿಳಂಬ ಖಂಡನೀಯ: ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ – ಯುವ ಕಾಂಗ್ರೆಸ್ ಎಚ್ಚರಿಕೆ

ಮಂಗಳೂರು, ಜೂನ್ 12: ಜನನ ಮತ್ತು ಮರಣ ಪ್ರಮಾಣ ಪತ್ರಗಳ ವಿತರಣೆಯಲ್ಲಿ ಉಂಟಾಗುತ್ತಿರುವ ವಿಳಂಬ ಹಾಗೂ ಇದರಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನಿಯೋಗವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಪ್ರಮಾಣ ಪತ್ರಗಳಿಗಾಗಿ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಪಾಸ್‌ಪೋರ್ಟ್ ಅರ್ಜಿದಾರರು ಸೇರಿದಂತೆ ಅನೇಕ ನಾಗರಿಕರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ನಿಯೋಗವು ಆಯುಕ್ತರ ಗಮನಕ್ಕೆ ತಂದಿತು. ಜನನ ಮತ್ತು ಮರಣ ಪ್ರಮಾಣ ಪತ್ರಗಳು ನಾಗರಿಕರ…

Read More

ಅಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ: ಬೆಂಗಳೂರು ಮೂಲದ ಆರೋಪಿ ಬಂಧನ

ಚಿಕ್ಕಮಗಳೂರು, ಜೂ.12: ಯುವತಿಯ ಅಶ್ಲೀಲ ಫೋಟೋಗಳನ್ನು ಆಕೆಯ ತಾಯಿಗೆ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ಮೂಲದ ಯೋಗೀಶ್ (25) ಎಂದು ಗುರುತಿಸಲಾಗಿದೆ. ಈತ ತರಿಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದ ಯುವತಿಯ ಅಶ್ಲೀಲ ಫೋಟೋಗಳನ್ನು ಆಕೆಯ ತಾಯಿಗೆ ಕಳುಹಿಸಿ ಹಣಕ್ಕಾಗಿ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿ ರಾತ್ರಿ ವೇಳೆ ಮಹಿಳೆಗೆ ಕರೆ ಮಾಡಿ ಅಶ್ಲೀಲ ಫೋಟೋಗಳನ್ನು…

Read More

ಪೋಕ್ಸೋ ಪ್ರಕರಣದ ವಾರಂಟ್ ಆರೋಪಿ ಬಂಧನ: ಬೆಂಗಳೂರಿನಲ್ಲಿ ಪುತ್ತೂರು ಪೊಲೀಸರ ಕಾರ್ಯಾಚರಣೆ

ಪುತ್ತೂರು, ಜೂ.12: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನಮನ್ ನಾಯಕ್ ಬಂಧಿತ ಆರೋಪಿ. ಈತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 53/2018ರಡಿ ಭಾರತೀಯ ದಂಡ ಸಂಹಿತೆಯ ಕಲಂ 448, 506, 354 ಹಾಗೂ ಪೋಕ್ಸೋ ಕಾಯ್ದೆಯ ಕಲಂ 12ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬೆಂಗಳೂರಿನ ಕೂಡ್ಲುಪೇಟೆ ಪ್ರದೇಶದಲ್ಲಿ…

Read More

ಎರಡು ವರ್ಷಗಳಿಂದ ಆತಂಕ ಸೃಷ್ಟಿಸಿದ್ದ ಹುಲಿ ಬೋನಿಗೆ ಬಿತ್ತು; ಗ್ರಾಮಸ್ಥರ ನಿಟ್ಟುಸಿರು

ಹುಣಸೂರು: ಕಳೆದ ಎರಡು ವರ್ಷಗಳಿಂದ ಗ್ರಾಮಸ್ಥರು ಹಾಗೂ ರೈತರಲ್ಲಿ ಆತಂಕ ಸೃಷ್ಟಿಸಿದ್ದ ಹೆಣ್ಣು ಹುಲಿಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿರುವ ಘಟನೆ ಹನಗೋಡು ಹೋಬಳಿಯ ಕೂಡ್ಲೂರು ಸಮೀಪ ನಡೆದಿದೆ. ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಅವರಿಗೆ ಸೇರಿದ ತೋಟದಲ್ಲಿ ಅಳವಡಿಸಲಾಗಿದ್ದ ಬೋನಿನಲ್ಲಿ ಬುಧವಾರ ಮುಂಜಾನೆ ಸುಮಾರು 3ರಿಂದ 4 ವರ್ಷ ವಯಸ್ಸಿನ ಹೆಣ್ಣು ಹುಲಿ ಸೆರೆಯಾಗಿದೆ. ಹುಲಿ ಬಂಧನದಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಈ ಭಾಗದಲ್ಲಿ ಸಂಚರಿಸುತ್ತಿದ್ದ ಹುಲಿ ಹತ್ತಾರು ಜಾನುವಾರುಗಳನ್ನು…

Read More

ಮುಕ್ರಂಪಾಡಿಯಲ್ಲಿ ತೃತೀಯ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ, ಜೂ.12: ಮುಕ್ರಂಪಾಡಿಯ ಸುಭದ್ರಾ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ತೃತೀಯ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಮತಿ ಪ್ರತಿಭಾ ಓಕುಣ್ಣಾಯ ಬೊಳ್ಳಿಂಬಳ ಹಾಗೂ ಶ್ರೀಮತಿ ರಜತಾ ಭಟ್ ಮುಕ್ರಂಪಾಡಿ ಅವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀಮತಿ ವೀಣಾ ಬಲ್ಲಾಳ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಶ್ರೀಮತಿ ಪವಿತ್ರಾ ದೊಡ್ಡಡ್ಕ ಮತ್ತು ಶ್ರೀಮತಿ ಸ್ವಯಂಪ್ರಭಾ…

Read More

ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯಿಂದ ಅಪಘಾತಗಳ ಭೀತಿ: ಸಮಸ್ಯೆ ಪರಿಹಾರಕ್ಕೆ ಸಾರ್ವಜನಿಕರ ಒತ್ತಾಯ

ಬಂಟ್ವಾಳ, ಜೂ.12: ಗಡಿಯಾರ ಸಮೀಪ ನಿನ್ನೆ ನಡೆದ ಕಾರು ಅಪಘಾತದಲ್ಲಿ ಚಾಲಕ ಮೃತಪಟ್ಟ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆ ಮತ್ತು ಕಾಮಗಾರಿ ಅವ್ಯವಸ್ಥೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. “ಹೆದ್ದಾರಿಯಲ್ಲಿ ಅಪಾಯಕಾರಿ ಕಲ್ಲು ಹಾಗೂ ತ್ಯಾಜ್ಯ ವಸ್ತುಗಳನ್ನು ತೆರವುಗೊಳಿಸದೆ ಅಮಾಯಕ ವಾಹನ ಸವಾರರ ಜೀವದೊಂದಿಗೆ ಚೆಲ್ಲಾಟ ನಡೆಸಲಾಗುತ್ತಿದೆ” ಎಂಬ ಬರಹಗಳೊಂದಿಗೆ ಹಲವು ಸಂದೇಶಗಳು ವೈರಲ್ ಆಗಿವೆ. ಬಿಸಿರೋಡು–ಅಡ್ಡಹೊಳೆ ನಡುವಿನ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿ ಇನ್ನೂ ಸಂಪೂರ್ಣಗೊಂಡಿಲ್ಲ. ಅಲ್ಲಲ್ಲಿ ಹೊಂಡ-ಗುಂಡಿಗಳು, ಕಾಮಗಾರಿಗೆ ಸಂಬಂಧಿಸಿದ…

Read More

ಕೇರಳದಲ್ಲಿ ಮತ್ತೆ ನಿಫಾ ಆತಂಕ; ಶಂಕಿತ ಪ್ರಕರಣ ಪತ್ತೆ, ರಾಜ್ಯಾದ್ಯಂತ ಹೈ ಅಲರ್ಟ್

ತಿರುವನಂತಪುರ: ಕೇರಳದಲ್ಲಿ ಮತ್ತೊಮ್ಮೆ ನಿಫಾ ವೈರಸ್ ಆತಂಕ ಸೃಷ್ಟಿಯಾಗಿದ್ದು, ಕೋಯಿಕ್ಕೋಡ್ ಜಿಲ್ಲೆಯ 43 ವರ್ಷದ ವ್ಯಕ್ತಿಯಲ್ಲಿ ಸೋಂಕಿನ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಪರೀಕ್ಷೆಯಲ್ಲಿ ನಿಫಾ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಕೇರಳ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ಸೋಂಕಿನ ಶಂಕೆ ವ್ಯಕ್ತವಾಗಿದ್ದು, ಅಂತಿಮ ದೃಢೀಕರಣಕ್ಕಾಗಿ ರೋಗಿಯ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (NIV) ಕಳುಹಿಸಲಾಗಿದೆ. ಅಂತಿಮ ವರದಿ ಶೀಘ್ರದಲ್ಲೇ…

Read More

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಅನಿತಾ ಕಾಸರಗೋಡು ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಹಾಗೂ ಬಂಟ್ಸ್ ಸಮುದಾಯಗಳ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್‌ಗಳನ್ನು ಪ್ರಕಟಿಸಿದ ಆರೋಪದಡಿ ಅನಿತಾ ಕಾಸರಗೋಡು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಮುದಾಯಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪೊಲೀಸರಿಗೆ ದೂರು ಸಲ್ಲಿಸಿದ್ದವು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿನ…

Read More

ಮಕ್ಕಳ ಹಕ್ಕುಗಳ ಆಯೋಗದ ನೇಮಕಾತಿ ರದ್ದುಪಡಿಸಲು ಆಗ್ರಹ: ಅರ್ಹತಾ ಮಾನದಂಡ ಉಲ್ಲಂಘನೆ ಆರೋಪ

ಮಂಗಳೂರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರಾಗಿ ನೇಮಕಗೊಂಡಿರುವ ಕೆಲವರು ನಿಗದಿತ ಅರ್ಹತಾ ಮಾನದಂಡಗಳನ್ನು ಹೊಂದಿಲ್ಲ. ಹೀಗಾಗಿ ಅವರ ನೇಮಕಾತಿ ಅಧಿಸೂಚನೆಯನ್ನು ತಕ್ಷಣ ಹಿಂಪಡೆದು, ಕಾನೂನಿನ ಪ್ರಕಾರ ಅರ್ಹ ವ್ಯಕ್ತಿಗಳನ್ನು ನೇಮಕ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳ ಹಕ್ಕುಗಳ ಪರವಾಗಿ ಕಾರ್ಯನಿರ್ವಹಿಸುವ ಸಮಾನಾಸಕ್ತ ಸಂಘಟನೆಗಳು ಆಗ್ರಹಿಸಿವೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಡಿ ಸಂಸ್ಥೆಯ ಸಂಚಾಲಕ ರೆನ್ನಿ ಡಿಸೋಜಾ, ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿಯಲ್ಲಿ…

Read More

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಗೆ ಖಾಸಗಿ ಬಸ್ ಮಾಲೀಕರ ವಿರೋಧ: ಮುಷ್ಕರದ ಎಚ್ಚರಿಕೆ

ತ್ರಿಶೂರ್: ಕೆಎಸ್‌ಆರ್‌ಟಿಸಿ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ ಖಾಸಗಿ ಬಸ್ ಮಾಲೀಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬಜೆಟ್‌ನಲ್ಲಿ ಖಾಸಗಿ ಬಸ್ ವಲಯಕ್ಕೆ ಸೂಕ್ತ ಪರಿಹಾರ ಘೋಷಿಸದಿದ್ದರೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಹಿಳಾ ಪ್ರಯಾಣಿಕರ ಸಂಖ್ಯೆಯೇ ಖಾಸಗಿ ಬಸ್‌ಗಳ ಆದಾಯದ ಪ್ರಮುಖ ಮೂಲವಾಗಿದ್ದು, ಉಚಿತ ಪ್ರಯಾಣ ಯೋಜನೆಯಿಂದ ಭಾರೀ ನಷ್ಟ ಉಂಟಾಗಲಿದೆ. ಇದರಿಂದ ಸೇವೆ ಮುಂದುವರಿಸುವುದು ಕಷ್ಟವಾಗಲಿದೆ ಎಂದು ಬಸ್ ಮಾಲೀಕರ ಸಂಘ ತಿಳಿಸಿದೆ. ಖಾಸಗಿ ಬಸ್‌ಗಳ ಸೇವೆ ಸ್ಥಗಿತಗೊಂಡರೆ…

Read More
error: Content is protected !!