ತುಳು ಕ್ರೈಂ ಥ್ರಿಲ್ಲರ್ ‘ಕಟ್ಟೆಮಾರ್’ ಟ್ರೇಲರ್‌ಗೆ ಅದ್ಧೂರಿ ಬಿಡುಗಡೆ: ಜ.23ರಂದು ತೆರೆಗೆ
ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಸಂಸ್ಥೆಯ ಲಂಚುಲಾಲ್ ಕೆ.ಎಸ್. ನಿರ್ಮಾಣದ ಬಹುನಿರೀಕ್ಷಿತ ಕ್ರೈಂ ಥ್ರಿಲ್ಲರ್ ತುಳು ಸಿನಿಮಾ ‘ಕಟ್ಟೆಮಾರ್’ ಇದೇ ಜನವರಿ 23ರಂದು ತೆರೆಗೆ ಬರಲಿದ್ದು, ಅದರ ಟ್ರೇಲರ್ ಬಿಡುಗಡೆ ಸಮಾರಂಭ ಮಂಗಳೂರಿನ ಬಿಗ್ ಸಿನಿಮಾಸ್‌ನಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ನೆರವೇರಿತು. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ನಿರ್ಮಾಪಕ ಲಂಚುಲಾಲ್ ಕೆ.ಎಸ್., “ಜನವರಿ 23ರಂದು ಕಟ್ಟೆಮಾರ್ ಸಿನಿಮಾ ಬಿಡುಗಡೆಯಾಗುತ್ತಿದೆ. ಬೇರೆ ಭಾಷೆಗಳ ಸಿನಿಮಾಗಳಿಗಿಂತ ತುಳು ಚಿತ್ರವೂ ಯಾವುದಕ್ಕೂ ಕಡಿಮೆಯಾಗಬಾರದು ಎಂಬ ಉದ್ದೇಶದಿಂದ ಈ ಚಿತ್ರವನ್ನು ಭರ್ಜರಿಯಾಗಿ ನಿರ್ಮಿಸಿದ್ದೇವೆ. ತುಳು…