ನೀಟ್ ಅಕ್ರಮ ಆರೋಪ: ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಸದಸ್ಯರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು. ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಶಿಕ್ಷಣ ಕ್ಷೇತ್ರದ ಅಕ್ರಮಗಳು ಮತ್ತು ಪರೀಕ್ಷಾ ಹಗರಣಗಳ ವಿರುದ್ಧ ಒಂದು ತಿಂಗಳಿನಿಂದ…
