ಬೈಕ್–ಸ್ಕೂಟರ್ ಡಿಕ್ಕಿ: ಬಂಟ್ವಾಳದಲ್ಲಿ 10 ವರ್ಷದ ಬಾಲಕಿ ಸಾವಿಗೆ ಶರಣು
ಬಂಟ್ವಾಳ: ಕಲ್ಲಡ್ಕದಿಂದ ಮಾಣಿಗೆ ತೆರಳುತ್ತಿದ್ದ ಬೈಕ್ ಗೆ ಸ್ಕೂಟರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಹತ್ತು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಬಾಳ್ತಿಲ ಗ್ರಾಮದ ಹೇಮಂತ್ ಕುಮಾರ್ ಎಂಬವರ ಪುತ್ರಿ ನೈರುತಿ ಎಂ. ಸುವರ್ಣ (10) ಮೃತಪಟ್ಟ ಬಾಲಕಿ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿಯ ವೇಳೆ ಮೃತಪಟ್ಟಿದ್ದಾಳೆ. ನೆಟ್ಲ ಸದಾಶಿವ ದೇವಸ್ಥಾನದಲ್ಲಿ…
