ವಿದೇಶಿ ಪ್ರಜೆಗಳೇ ಹೆಚ್ಚು ಬಲಿ: ದೆಹಲಿ ಅಗ್ನಿ ಅವಘಡದ ಬೆಚ್ಚಿಬೀಳಿಸುವ ವಿವರ
ರಾಷ್ಟ್ರ ರಾಜಧಾನಿ ದೆಹಲಿಯ ದಕ್ಷಿಣ ಭಾಗದ ಮಾಳವೀಯ ನಗರದಲ್ಲಿರುವ ಹೌಜ್ ರಾಣಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 21 ಮಂದಿ ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಮೃತರಲ್ಲಿ ಬಹುತೇಕರು ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಆಗಮಿಸಿದ್ದ ವಿದೇಶಿ ಪ್ರಜೆಗಳು ಎನ್ನಲಾಗಿದೆ. ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಮಾಹಿತಿ ಪ್ರಕಾರ, ಬೆಳಿಗ್ಗೆ ಸುಮಾರು 8.50ರ ವೇಳೆಗೆ ಐದು ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿದ್ದ ಮಿಕಾಸಾ ಇನ್ ಹಾಗೂ ಫ್ಲರಿಶ್ ಸ್ಟೇ ಹೋಟೆಲ್‌ಗಳ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಹೋಟೆಲ್‌ನ…
