ಜಮೀರ್ ಮತ್ತು ನನ್ನ ನಡುವೆ ಸಚಿವ ಸ್ಥಾನಕ್ಕೆ ಪೈಪೋಟಿ ಇಲ್ಲ: ಯು.ಟಿ. ಖಾದರ್
ಮಂಗಳೂರು, ಜೂನ್ 2: ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ, ತಮ್ಮ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ನಡುವೆ ಯಾವುದೇ ರೀತಿಯ ಸಚಿವ ಸ್ಥಾನ ಪೈಪೋಟಿ ಇಲ್ಲ ಎಂದು ವಿಧಾನಸಭಾಧ್ಯಕ್ಷ U. T. Khader ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಡಿಸಿಎಂ ಸ್ಥಾನ ಸಿಗುವ ಕುರಿತು ನಡೆಯುತ್ತಿರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿ, “ನಾನು ಅದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಆದರೆ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ” ಎಂದರು….
