ಐಲ ಶಾಲೆಯಲ್ಲಿ ಉಪಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವ ಉದ್ಘಾಟನೆ: ಶಾಲಾ ಪ್ರವೇಶೋತ್ಸವದಲ್ಲಿ ಕನ್ನಡ ಶಿಕ್ಷಣದ ಮಹತ್ವ ಒತ್ತಿಹೇಳಿದ ಶಾಸಕ ಎಕೆಎಂ ಅಶ್ರಫ್

ಮಂಜೇಶ್ವರ, ಜೂನ್ 2: ಮಲಯಾಳ ಮಾಧ್ಯಮದಲ್ಲಿ ಕಲಿಯುವ ಅವಕಾಶವಿದ್ದರೂ ಕನ್ನಡ ಮಾಧ್ಯಮವನ್ನೇ ಶೈಕ್ಷಣಿಕ ಭಾಷೆಯಾಗಿ ಆಯ್ಕೆ ಮಾಡಿಕೊಟ್ಟ ನನ್ನ ಹೆತ್ತವರ ನಿರ್ಧಾರ ನನ್ನ ಜೀವನ ಮತ್ತು ಬೆಳವಣಿಗೆಗೆ ಪೂರಕವಾಯಿತು ಎಂದು ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ A.K.M. Ashraf ಹೇಳಿದರು. ಅವರು ಐಲದ ಶ್ರೀ ಶಾರದ ಭೋವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಪ್ರವೇಶೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪಕ ಆನಂದ ಕೆ. ಐಲ ದೀಪ ಪ್ರಜ್ವಲನೆ ನೆರವೇರಿಸಿದರು….

Read More

ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿನ ಕೊನೆಯ ಬೋಗಿಯಲ್ಲಿ ಗಲಾಟೆ: ಮೂವರು RPF ವಶಕ್ಕೆ

ಸುಬ್ರಹ್ಮಣ್ಯ ರೈಲು ಸಂಖ್ಯೆ 56626ರ ಕೊನೆಯ ಬೋಗಿಯಲ್ಲಿ ಗಲಾಟೆ ಎಬ್ಬಿಸಿ ಒಬ್ಬ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೋಡಿಂಬಾಳ ರೈಲು ನಿಲ್ದಾಣದಲ್ಲಿ ರೈಲು ಹತ್ತಿದ್ದ ಮೂವರು ವ್ಯಕ್ತಿಗಳನ್ನು ಬಂಟ್ವಾಳ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ರೈಲನ್ನು ಕೆಲ ನಿಮಿಷಗಳ ಕಾಲ ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಬಳಿಕ ಆರ್‌ಪಿಎಫ್ ಸಿಬ್ಬಂದಿ ರೈಲಿಗೆ ತೆರಳಿ ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡರು. ಘಟನೆಯ ಕುರಿತು…

Read More

ಆರು ತಿಂಗಳಲ್ಲಿ ಕರ್ನಾಟಕ ವಿಧಾನಮಂಡಲ ಸಂಪೂರ್ಣ ಡಿಜಿಟಲ್: ಯು.ಟಿ. ಖಾದರ್

ಮಂಗಳೂರು: ಕರ್ನಾಟಕ ವಿಧಾನಮಂಡಲವನ್ನು ಸಂಪೂರ್ಣ ಡಿಜಿಟಲ್ ಮತ್ತು ಕಾಗದರಹಿತ ವ್ಯವಸ್ಥೆಯನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮುಂದಿನ ಆರು ತಿಂಗಳೊಳಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ತನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗುವುದೆಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದರು . ಅವರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಕರ್ನಾಟಕವು ದೇಶದ ಐಟಿ ರಾಜಧಾನಿಯಾಗಿ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ವಿಧಾನಮಂಡಲವೂ ಆಧುನಿಕ ತಂತ್ರಜ್ಞಾನಕ್ಕೆ ಹೊಂದಿಕೊಳ್ಳಬೇಕಾದ ಅಗತ್ಯವಿದ್ದು ಆಧುನೀಕರಣದ ದೃಷ್ಟಿಯಿಂದ ಈ ಒಂದು…

Read More

ಕುಡಿತದ ಗಲಾಟೆ ಕೊಲೆಯಲ್ಲಿ ಅಂತ್ಯ: ಚಿಕ್ಕಪ್ಪ ಬಲಿ

ಪುಂಜಾಲಕಟ್ಟೆ ಜೂ.1: ಯುವಕನೋರ್ವ ಚಿಕ್ಕಪ್ಪನನ್ನೇ ಬಿಯರ್ ಬಾಟ್ಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಇಲ್ಲಿನ ನಿವಾಸಿ ಮಧುಸೂಧನ ( 38) ಅವರು ಮೃತಪಟ್ಟವರಾಗಿದ್ದು, ಅವರ ಅಣ್ಣ ಕೇಶವ ಪೂಜಾರಿ ಅವರ ಪುತ್ರ ರಾಹುಲ್ (23) ಕೊಲೆಗೈದವನಾಗಿ್ದ್ದಾನೆ.ಘಟನೆಯ ವಿವರ: ಕೇಶವ ಪೂಜಾರಿ ಅವರ ಮನೆಯಲ್ಲಿ ರವಿವಾರ ರಾತ್ರಿ ದೈವಕ್ಕೆ ತಂಬಿಲ ಕಾರ್ಯಕ್ರಮ ನಡೆಯುತ್ತಿತ್ತು. ರಾಹುಲ್ ಮತ್ತಿತರರು ಮನೆಯಿಂದ ಹೊರಗೆ ಕುಡಿದು ಗದ್ದಲ ಮಾಡುತ್ತಿದ್ದರು.ಇದನ್ನು ಆಕ್ಷೇಪಿಸಿದ ಮಧುಸೂದನ್ ಅವರನ್ನು…

Read More

ಮಂಗಳೂರಿನಲ್ಲಿ ಜೂನ್ 5-6ರಂದು ಸಿಎ ವಿದ್ಯಾರ್ಥಿಗಳ ರಾಷ್ಟ್ರೀಯ ಸಮ್ಮೇಳನ

ಮಂಗಳೂರು: ದಿ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ)ಯ ದಕ್ಷಿಣ ಭಾರತ ಚಾರ್ಟರ್ಡ್ ಅಕೌಂಟೆಂಟ್ಸ್ ಸ್ಟೂಡೆಂಟ್ಸ್ ಅಸೋಸಿಯೇಷನ್ (ಸಿಕಾಸಾ) ಮಂಗಳೂರು ಶಾಖೆಯ ವತಿಯಿಂದ ಜೂನ್ 5 ಮತ್ತು 6ರಂದು ಮಂಗಳೂರಿನ ಟೌನ್ ಹಾಲ್‌ನಲ್ಲಿ ಎರಡು ದಿನಗಳ ‘ಸಿಎ ವಿದ್ಯಾರ್ಥಿಗಳ ರಾಷ್ಟ್ರೀಯ ಸಮ್ಮೇಳನ’ ಆಯೋಜಿಸಲಾಗಿದೆ ಎಂದು ಐಸಿಎಐ ಮಂಗಳೂರು ಶಾಖೆಯ ಅಧ್ಯಕ್ಷ ಹಾಗೂ ಸಮ್ಮೇಳನ ಸಂಯೋಜಕರಾದ ಸಿಎ ಡೇನಿಯಲ್ ಮಾರ್ಕ್ ಪಿರೇರಾ ತಿಳಿಸಿದ್ದಾರೆ. ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಉತ್ಕೃಷ್ಟ –…

Read More

ಮುಂಗಾರಿಗೆ ದ.ಕ. ಜಿಲ್ಲಾಡಳಿತ ಸಜ್ಜು: 115 ಕಾಳಜಿ ಕೇಂದ್ರಗಳ ಸಿದ್ಧತೆ

ಮಂಗಳೂರು : ಮುಂಗಾರು ಈಗಾಗಲೇ ಕೇರಳಕ್ಕೆ ಪ್ರವೇಶಿಸಿದ್ದು ಜೂ. 4ರಿಂದ ಕರಾವಳಿಗೂ ಪ್ರವೇಶ ವಾಗುವ ಸಾಧ್ಯತೆ ಇರುವುದರಿಂದ ಕೃತಕ ನೆರೆ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪದ ಪರಿಸ್ಥಿತಿಗಳನ್ನು ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು. ಪಡೀಲ್‌ನ ಪ್ರಜಾಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 115 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ತಹಶೀಲ್ದಾರ್ ಹಂತದಲ್ಲಿ ವಿವಿಧ ತಾಲೂಕುಗಳಲ್ಲಿ ತುರ್ತು ಪರಿಹಾರ ಕ್ರಮಗಳಿಗಾಗಿ ಒಟ್ಟು 3.25 ಕೋಟಿ…

Read More

ಖಾಸಗಿ ಫೋಟೋ ದುರ್ಬಳಕೆ; ಪತಿ-ಮಗುವಿಗೆ ಕೊಲೆ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಮಂಜೇಶ್ವರ, ಜೂನ್ 2: ಮಹಿಳೆಯೊಬ್ಬರ ಖಾಸಗಿ ಫೋಟೋವನ್ನು ದುರ್ಬಳಕೆ ಮಾಡಿಕೊಂಡು, ಆಕೆಯ ಪತಿ ಹಾಗೂ ಮಗುವಿಗೆ ಕೊಲೆ ಬೆದರಿಕೆ ಹಾಕಿದ ಆರೋಪದಡಿ ಯುವಕನ ವಿರುದ್ಧ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ಆರೋಪಿಯನ್ನು ಕುಂಜತ್ತೂರಿನ ಇಬ್ರಾಹಿಂ ಖಲೀಲ್ (32) ಎಂದು ಗುರುತಿಸಲಾಗಿದೆ. ಪೊಲೀಸ್ ದೂರಿನ ಪ್ರಕಾರ, ಆರೋಪಿಯು ದೂರುದಾರಳಾದ 37 ವರ್ಷದ ಮಹಿಳೆಯೊಂದಿಗೆ ನಿಂತಿರುವ ಫೋಟೋವನ್ನು ಆಕೆಯ ಪತಿಯ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ಖಾತೆಗಳಿಗೆ ಕಳುಹಿಸಿದ್ದಾನೆ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸುವ ಪ್ರಯತ್ನ…

Read More

ಶತಮಾನೋತ್ಸವ ಕಂಡ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಬೊಳಂತೂರು ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ: ಶಿಕ್ಷಣದೊಂದಿಗೆ ಆರೋಗ್ಯಕ್ಕೂ ಆದ್ಯತೆ

ಬೊಳಂತೂರು: ರಾಜ್ಯಾದ್ಯಂತ 2026–27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಸಂಭ್ರಮದಿಂದ ನಡೆಯುತ್ತಿರುವ ಸಂದರ್ಭದಲ್ಲಿ, ಶತಮಾನೋತ್ಸವ ಕಂಡ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಳಂತೂರಿನಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು. ಶಿಕ್ಷಣದ ಜೊತೆಗೆ ಮಕ್ಕಳ ಆರೋಗ್ಯ ಮತ್ತು ಮೂಲಭೂತ ಸೌಲಭ್ಯಗಳಿಗೂ ಒತ್ತು ನೀಡಿದ ಈ ಕಾರ್ಯಕ್ರಮ ಪೋಷಕರ ಮೆಚ್ಚುಗೆಗೆ ಪಾತ್ರವಾಯಿತು.ಜಮಾಅತೆ ಇಸ್ಲಾಮಿ ಸೋಶಿಯಲ್ ಸರ್ವಿಸ್ ಯೂನಿಟ್ ಮಂಗಳೂರು ವತಿಯಿಂದ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು…

Read More

ಗುರುವಾಯನಕೆರೆಯಲ್ಲಿ ವ್ಯಕ್ತಿ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು: ಮೂವರು ಆರೋಪಿಗಳು ವಶಕ್ಕೆ

ಬೆಳ್ತಂಗಡಿ, ಜೂನ್ 2: ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಪ್ರದೇಶದಲ್ಲಿ ಅಸಹಜ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಪ್ರಕರಣವು ಕೊಲೆ ಪ್ರಕರಣ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆಯಲಾದ ಆರೋಪಿಗಳನ್ನು ಬೆಳ್ತಂಗಡಿ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿ ಪಡಂಗಡಿ ನಿವಾಸಿ ಇಬ್ರಾಹಿಂ (54) ಎಂದು ಗುರುತಿಸಲಾಗಿದೆ. ಜೂನ್ 1ರಂದು ಬೆಳಿಗ್ಗೆ ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಯತೀಶ್…

Read More

ಮಂಗಳೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಹವಾನಿಯಂತ್ರಿತ ವ್ಯವಸ್ಥೆ ಉದ್ಘಾಟನೆ

ಮಂಗಳೂರು, ಜೂನ್ 1: ಮಂಗಳೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಅಳವಡಿಸಲಾದ ಸಂಪೂರ್ಣ ಹವಾನಿಯಂತ್ರಿತ (ಎಸಿ) ವ್ಯವಸ್ಥೆಯ ಉದ್ಘಾಟನಾ ಕಾರ್ಯಕ್ರಮ ಸೋಮವಾರ ನ್ಯಾಯಾಲಯ ಸಂಕೀರ್ಣದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮೂರನೇ ಮಹಡಿಯಲ್ಲಿ ನಡೆಯಿತು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಅವರು ಹವಾನಿಯಂತ್ರಿತ ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೇಸಿಗೆ ಹಾಗೂ ಮಳೆಗಾಲ ಎರಡರಲ್ಲೂ ಹವಾನಿಯಂತ್ರಿತ ವ್ಯವಸ್ಥೆಯ ಅಗತ್ಯವಿದೆ. ಉತ್ತಮ ವಾತಾವರಣವಿರುವ ಕಾರ್ಯಸ್ಥಳ ಸಿಬ್ಬಂದಿ ಹಾಗೂ ನ್ಯಾಯಾಂಗ ಅಧಿಕಾರಿಗಳಿಗೆ ಕಾರ್ಯನಿರ್ವಹಣೆಯಲ್ಲಿ…

Read More
error: Content is protected !!