ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ವಿ. ಸುನಿಲ್ ಕುಮಾರ್

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಮುಂಬರುವ ಐತಿಹಾಸಿಕ ಶ್ರೀ ಗೊಮ್ಮಟೇಶ್ವರಸ್ವಾಮಿಯ ಮಹಾಮಸ್ತಕಾಭಿಷೇಕದ ಸಿದ್ಧತೆ ಕುರಿತು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದರು. ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಐತಿಹಾಸಿಕ ಮಹಾ ಮಸ್ತಕಾಭಿಷೇಕಕ್ಕೆ 2027ರ ಫೆಬ್ರವರಿ 18ರಿಂದ ಹತ್ತು ದಿನಗಳ ಕಾಲ ನಡೆಯಲಿದ್ದು ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು,ಮತ್ತು ಪ್ರವಾಸಿಗರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ಅಗತ್ಯ…

Read More

ಮಕ್ಕಳ ಕ್ಯಾನ್ಸರ್ ಕುರಿತು ‘ಶೌರ್ಯ’ ಮಾಹಿತಿ ಶಿಬಿರ ಸೆ.10ರಂದು

ಮಂಗಳೂರು:ಅಂತರಾಷ್ಟ್ರೀಯ ಲಯನ್ಸ್ ಜಿಲ್ಲೆ 317ಡಿ ಹಾಗೂ ತಪಸ್ಯ ಫೌಂಡೇಶನ್‌ ವತಿಯಿಂದ ವಿವಿಧ ವೈದ್ಯಕೀಯ ಸಂಸ್ಥೆಗಳ ಸಹಯೋಗದಲ್ಲಿ ಮಕ್ಕಳ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ‘ಶೌರ್ಯ’ ಮಾಹಿತಿ ಶಿಬಿರವನ್ನು ಸೆಪ್ಟೆಂಬರ್ 10ರಂದು ಮಂಗಳೂರಿನ ಟೌನ್‌ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ತಪಸ್ಯ ಫೌಂಡೇಶನ್‌ನ ವ್ಯವಸ್ಥಾಪನಾ ಟ್ರಸ್ಟಿ ಹಾಗೂ ಲಯನ್ಸ್ ಜಿಲ್ಲೆ 317ಡಿ ಮುಖ್ಯ ಸಂಯೋಜಕಿ ಲಯನ್ ಸಬಿತಾ ರಾಮನಾಥ್ ಶೆಟ್ಟಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ಕ್ಯಾನ್ಸರ್ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಆರಂಭಿಕ ಹಂತದಲ್ಲೇ…

Read More

ಸೌದಿ ಅರೇಬಿಯಾದಲ್ಲಿ ಕುತ್ತಾರುವಿನ ಅವಿವಾಹಿತ ಯುವಕ ದಿಢೀರನೆ ಸಾವು

ಉಳ್ಳಾಲ:ಕಳೆದ ಐದು ತಿಂಗಳ ಹಿಂದಷ್ಟೆ ಸೌದಿ ಅರೇಬಿಯಾಕ್ಕೆ ಕೆಲಸಕ್ಕೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕುತ್ತಾರುವಿನ ಅವಿವಾಹಿತ ಯುವಕನೋರ್ವನು ಮಂಗಳವಾರ ಬೆಳಿಗ್ಗೆ ಸೌದಿ ಅರೇಬಿಯಾದಲ್ಲಿ ತಾನು ತಂಗಿದ್ದ ಕೋಣೆಯಲ್ಲಿ ದಿಢೀರನೆ ಸಾವನ್ನಪ್ಪಿದ್ದು,ಯುವಕ ಹೃದಯಾಘಾತದಿಂದ ಸಾವನ್ನಪ್ಪಿರೋದಾಗಿ ಹೇಳಲಾಗಿದೆ.ಕುತ್ತಾರುವಿನ ಕೊರಗಜ್ಜನ ಆದಿ ಕ್ಷೇತ್ರದ ಬಳಿಯ ನಿವಾಸಿ ಶರತ್ ಕುಮಾರ್ (35)ಮೃತ ಪಟ್ಟ ಯುವಕ. ಕಳೆದ ಐದು ತಿಂಗಳ ಹಿಂದಷ್ಟೆ ಸೌದಿ ಅರೇಬಿಯಾಕ್ಕೆ ತೆರಳಿದ್ದ ಶರತ್ ಅವರು ಕನ್ಸ್ಟ್ರಕ್ಷನ್ ಕಂಪನಿಯೊಂದರಲ್ಲಿ ಸುಪರ್ ವೈಸರ್ ಕೆಲಸ ನಿರ್ವಹಿಸುತ್ತಿದ್ದರೆನ್ನಲಾಗಿದೆ.ಶರತ್ ಅವರು ತಮಿಳುನಾಡು ಮೂಲದ ಸಹೋದ್ಯೋಗಿ…

Read More

ಬೆಳ್ಳಾರೆ ವಿದ್ಯಾರ್ಥಿನಿಲಯದಲ್ಲಿ ಬಟ್ಟೆ ಕಳವು: ಆರೋಪಿ ಬಂಧನ

ಸುಳ್ಯ: ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ನೀಡಿದ ದೂರಿನ ಪ್ರಕಾರ, ಸೆಪ್ಟೆಂಬರ್ 2ರಂದು ಬೆಳಿಗ್ಗೆ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಕೆಲವು ಬಟ್ಟೆಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿತ್ತು. ಈ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಬೆಳಗಿನ ಜಾವ ಅಪರಿಚಿತ ಯುವಕನೋರ್ವ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ ಬಟ್ಟೆಗಳನ್ನು ಕಳವು ಮಾಡಿಕೊಂಡು ಹೋಗುತ್ತಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5ರಂದು…

Read More

ಕುಂಬಳೆ ಅನಂತಪುರ ಆಯಿಲ್ ಫ್ಯಾಕ್ಟರಿ ಬಂದ್‌ಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶ

ಸ್ಥಳೀಯರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದ ಕುಂಬಳೆ ಅನಂತಪುರದ ವಿವಾದಿತ ಆಯಿಲ್ ಫ್ಯಾಕ್ಟರಿಯನ್ನು ತಕ್ಷಣವೇ ಮುಚ್ಚುವಂತೆ ಜಿಲ್ಲಾಧಿಕಾರಿ ಪುನಃ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ​ಕಾರ್ಖಾನೆಯಿಂದ ಹೊರಹೊಮ್ಮುವ ತೀವ್ರ ದುರ್ಗಂಧ ಮತ್ತು ರಾಸಾಯನಿಕಯುಕ್ತ ಮಲಿನ ಜಲ ಸಮೀಪದ ಮನೆಗಳ ಬಾವಿ ನೀರನ್ನು ಕಲುಷಿತಗೊಳಿಸುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕಲುಷಿತ ವಾತಾವರಣದಿಂದಾಗಿ ಮಕ್ಕಳು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ಅಲೆಯುವ ಸ್ಥಿತಿ ನಿರ್ಮಾಣವಾಗಿತ್ತು. ​ಈ ಹಿಂದೆ ನೀಡಿದ ಭರವಸೆಗಳನ್ನು ಈಡೇರಿಸದ ಮಾಲೀಕರ ಬೇಜವಾಬ್ದಾರಿಯನ್ನು ತನಿಖೆಯಲ್ಲಿ ಖಚಿತಪಡಿಸಿಕೊಂಡ ಜಿಲ್ಲಾಡಳಿತ,…

Read More

10ನೇ ತರಗತಿ ಬಾಲಕಿಗೆ ಅಶ್ಲೀಲ ಸಂದೇಶ: ವ್ಯಕ್ತಿಯ ವಿರುದ್ಧ ಪೋಕ್ಸೋ ಕೇಸ್

​ಕಾಸರಗೋಡು: ಮಗಳ ಸ್ನೇಹಿತೆಯಾದ 10ನೇ ತರಗತಿಯ ಬಾಲಕಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಸೆಬಾಸ್ಟಿಯನ್ ಎಂಬ ವ್ಯಕ್ತಿಯ ವಿರುದ್ಧ ಚಿಟ್ಟಾರಿಕಲ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ​ಆರೋಪಿ ಮತ್ತು ಆತನ ಮಗಳು ಒಂದೇ ಮೊಬೈಲ್ ಫೋನ್ ಬಳಸುತ್ತಿದ್ದು, ಈ ಮೂಲಕ ಬಾಲಕಿಯ ಫೋನ್ ಸಂಖ್ಯೆ ಆರೋಪಿಗೆ ಸಿಕ್ಕಿರಬಹುದು ಎಂದು ಶಂಕಿಸಲಾಗಿದೆ.ಪೋಷಕರ ಸ್ಥಾನದಲ್ಲಿದ್ದುಕೊಂಡು ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಈ ಘಟನೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ​ಸದ್ಯ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಸುದೀರ್ಘ…

Read More

ವಾಹನ ಢಿಕ್ಕಿ ಪ್ರಕರಣದಲ್ಲಿ ವ್ಯಕ್ತಿ ನಿಗೂಢ ಸಾವು

ಕಾಸರಗೋಡು: ವಾಹನ ಢಿಕ್ಕಿಯಾಗಿ ಪಾದಕ್ಕೆ ಗಾಯವಾಗಿದೆ ಎಂದು ಹೇಳಿ ಕಾಸರಗೋಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರನ್ನು ಮೂಲತಃ ಬೆಂಗಳೂರಿನವರಾಗಿದ್ದು, ಪ್ರಸ್ತುತ ಕುಂಬಳೆಯ ಕಳತ್ತೂರಿನಲ್ಲಿ ವಾಸವಾಗಿದ್ದ ಶಟರ್ ದುರಸ್ತಿ ಕೆಲಸಗಾರ ಅಸ್ಲಾಂ ಭಾಷಾ (39) ಎಂದು ಗುರುತಿಸಲಾಗಿದೆ. ವಾಹನ ಢಿಕ್ಕಿ ಹೊಡೆದಿರುವ ಬಗ್ಗೆ ಆರಂಭದಲ್ಲಿ ಪೊಲೀಸರಿಗೆ ದೂರು ನೀಡದಂತೆ ಅಸ್ಲಾಂ ಭಾಷಾ ಮನವಿ ಮಾಡಿದ್ದರು ಎನ್ನಲಾಗಿದೆ. ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ದಿಢೀರ್‌ ಆಗಿ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಹುಡುಕಾಟ…

Read More

150 ವರ್ಷಗಳಿಂದ ಬಳಕೆಯಲ್ಲಿದ್ದ ಕಾಲುದಾರಿ ಬಂದ್, ಗ್ರಾಮಸ್ಥರಿಂದ ಮನವಿ

ಬಂಟ್ವಾಳ: ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನಡುಮನೆ, ಸುದೆಕಟ್ಟೆಮಾರು ಹಾಗೂ ಪುಂಜಾವು ಭಾಗದ ಸಾರ್ವಜನಿಕರು ಸುಮಾರು 150ಕ್ಕೂ ಹೆಚ್ಚು ವರ್ಷಗಳಿಂದ ಬಳಸುತ್ತಿದ್ದ ಸರ್ವೆ ನಂಬರ್ 137ರ ಪ್ರಮುಖ ಕಾಲುದಾರಿಯನ್ನು ಬಂದ್ ಮಾಡಲಾಗಿದ್ದು, ಇದನ್ನು ತಕ್ಷಣವೇ ತೆರವುಗೊಳಿಸುವಂತೆ ಆಗ್ರಹಿಸಿ ಸ್ಥಳೀಯರು ಬಂಟ್ವಾಳ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ಈ ಹಳೆಯ ಕಾಲುದಾರಿಯನ್ನೇ ನೆಚ್ಚಿಕೊಂಡಿದ್ದು, ದಾರಿ ಬಂದ್ ಆಗಿರುವುದರಿಂದ ಶಾಲೆ, ಅಂಗನವಾಡಿ, ಹಾಲಿನ ಡೈರಿ, ಅಂಚೆ ಕಚೇರಿ ಹಾಗೂ ಆಸ್ಪತ್ರೆಗೆ ತೆರಳುವ ಸಾರ್ವಜನಿಕರು ಮತ್ತು ವೃದ್ಧರು…

Read More

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ನೂತನ ‘ಬಿ’ ಬ್ಲಾಕ್ ಉದ್ಘಾಟನೆ

ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಕಳೇನ ಅಗ್ರಹಾರದಲ್ಲಿರುವ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ನೂತನ ‘ಬಿ’ ಬ್ಲಾಕ್ ಆವರಣವನ್ನು ಸೆ. 5ರಂದು ಉದ್ಘಾಟಿಸಲಾಯಿತು. ರಾಜ್ಯದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು. ಬೆಂಗಳೂರು ಧರ್ಮಪ್ರಾಂತ್ಯದ ಆರ್ಚ್‌ಬಿಷಪ್ ಅತಿ ವಂದನೀಯ ಡಾ. ಪೀಟರ್ ಮಚಾಡೊ ಆಶೀರ್ವಚನ ನೀಡಿದರು. ಕರ್ನಾಟಕ ಜೆಸ್ಯೂಟ್ ಪ್ರಾಂತ್ಯದ ಪ್ರಾಂತಾಧಿಕಾರಿ ಹಾಗೂ ವಿಶ್ವವಿದ್ಯಾಲಯದ ಕುಲಪತಿ ಫಾ. ಡಯೋನಿಸಿಯಸ್ ವಾಜ್, ಉಪಕುಲಪತಿ ಫಾ. ಡಾ. ವಿಕ್ಟರ್ ಲೋಬೋ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಮಾತನಾಡಿದ…

Read More

ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರ, ಅಯ್ಯಪ್ಪ ಸ್ವಾಮಿ ಮಂದಿರ, ಪರಿವಾರ ದೈವಗಳ ಸಾನಿಧ್ಯ ಜೀರ್ಣೋದ್ದಾರದ ನಿಧಿ ಸಂಚಯನಕ್ಕೆ ಚಾಲನೆ

ತೌಡುಗೋಳಿ : ಪುರಾತನ ಶ್ರೀ ದುರ್ಗಾದೇವಿ ಕ್ಷೇತ್ರ, ಅಯ್ಯಪ್ಪ ಸ್ವಾಮಿ ಮಂದಿರ, ಪರಿವಾರ ದೈವಗಳ ಸಾನಿಧ್ಯ ಜೀರ್ಣೋದ್ದಾರಕ್ಕೆ ನಿಧಿ ಸಂಚಯನಕ್ಕೆ ಚಾಲನೆ, ಧಾರ್ಮಿಕ ಸಭೆ ಸೆಪ್ಟೆಂಬರ್ 6ರಂದು ನಡೆಯಿತು. ಭಾರತೀಯ ಪರಂಪರೆಯ ಪಾರಮಾರ್ಥಿಕ ಬೆಳವಣಿಗೆಯ ದೃಷ್ಟಿಯಲ್ಲಿ ಜೀರ್ಣಾವಸ್ಥೆಯಲ್ಲಿದ್ದ ಕಾರಣಿಕದ ಕ್ಷೇತ್ರವೊಂದವೊಂದರ ನಿರ್ಮಾಣ ಹಿಂದೂ ಧರ್ಮಕ್ಕೆ ಒಂದು ದೊಡ್ಡ ಕೊಡುಗೆ ನೀಡಿದಂತೆ ಆಗಿದೆ. ಅಯ್ಯಪ್ಪನ ತ್ಯಾಗದ ಗುಣ ಚಿಂತಿಸಿದರೆ ಚಿಂತಿಸಿದರೆ ನಮ್ಮ ಬದುಕು ಪಾವನವಾದಂತೆ. ಹಾಗೆಯೇ ಕ್ಷೇತ್ರ ನಿರ್ಮಾಣಕ್ಕೆ ನಿಧಿ ಸಂಚಯನದಲ್ಲಿ ಲಕ್ಷ್ಮಿ ಹರಿದು ಬರಲಿದ್ದಾಳೆ ಎಂದು ಒಡಿಯೂರು…

Read More
error: Content is protected !!