ಗಡಿನಾಡು ಕನ್ನಡ ಸೇವೆಗೆ ರಾಜ್ಯ ಮಟ್ಟದ ಗೌರವ: ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ದಂಪತಿಗೆ “ಕರುನಾಡ ಕನ್ನಡ ಗಡಿನಾಡು ಪೋಷಕ ರತ್ನ” ಪ್ರಶಸ್ತಿ

ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗ(ರಿ), ಬೆಂಗಳೂರು ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ “ಕರುನಾಡ ಕನ್ನಡ ಗಡಿನಾಡು ಪೋಷಕ ರತ್ನ” ಪ್ರಶಸ್ತಿಗೆ ಗಡಿನಾಡು ಕಾಸರಗೋಡಿನ ಕನ್ನಡ ಸೇವಾ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಡಾ. ವಾಮನ್ ರಾವ್ ಬೇಕಲ್ ಹಾಗೂ ಶ್ರೀಮತಿ ಸಂಧ್ಯಾರಾಣಿ ಟೀಚರ್ ದಂಪತಿ ಆಯ್ಕೆಯಾಗಿದ್ದಾರೆ. ಮೇ 25ರಂದು ಹಾವೇರಿ ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಗಡಿನಾಡು…

Read More

ಕಾಸರಗೋಡಿನ ತಳ ಮಟ್ಟದ ಬಂಟರ ಏಳಿಗೆಗಾಗಿ ಹೊಸ ಬಂಟ ಸಂಘಟನೆ ಅಸ್ತಿತ್ವಕ್ಕೆ ರೂಪುರೇಷೆ

ಮಹಾದಾನಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ನೇತೃತ್ವದಲ್ಲಿ ನಡೆದ ಸಮಾನ ಮನಸ್ಕ ಬಂಟರ ಸಭೆ ಮಂಜೇಶ್ವರ : ಕಾಸರಗೋಡಿನ ಕೆಳಮಟ್ಟದ ಬಂಟರ ಏಳಿಗೆ ಮತ್ತು ಬಂಟರ ಭವನ ನಿರ್ಮಾಣದ ಸದುದ್ದೇಶವನ್ನು ಮುಂದಿಟ್ಟುಕೊಂಡು ಮಹಾದಾನಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿಯವರ ನೇತೃತ್ವದಲ್ಲಿ ಸಮಾನ ಮನಸ್ಸಿನ ಬಂಟರು ಭಾಗಿಯಾಗಿ ಕಾಸರಗೋಡು ಬಂಟ ಸಮಾಜದ ಸರ್ವತೋಮುಖ ಏಳಿಗೆಯ ಬಗ್ಗೆ ತೀವ್ರ ಚರ್ಚೆ ನಡೆಯಿತು.ಸದಾಶಿವ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಅವರ ಹೊಸ ನಿವಾಸ ಶ್ರೀಲಿಲಾ ಸದನದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಮಾಡಲಾಯಿತು. ಸಭೆಯಲ್ಲಿ…

Read More

ಪಂಚಾಯತ್ ರಾಜ್ ಬಲವರ್ಧನೆಗೆ ಸಂಘಟನೆಯ ಸಂಕಲ್ಪ: ಕೇಂದ್ರ ಸರಕಾರದ ವೈಫಲ್ಯಗಳ ವಿರುದ್ಧ ಪ್ರತಿಭಟನೆಗೆ ನಿರ್ಧಾರ: ಕುಳಾಲು ಸುಭಾಶ್ಚಂದ್ರ ಶೆಟ್ಟಿ

ಮಂಗಳೂರು, ಮೇ 19: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಮಾಸಿಕ ಸಭೆಯು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ. ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಹಾಗೂ ಗ್ರಾಮೀಣ ಮಟ್ಟದಲ್ಲಿ ಸಂಘಟನೆಯನ್ನು ಸಕ್ರಿಯಗೊಳಿಸುವ ಬಗ್ಗೆ ಮಹತ್ವದ ಚರ್ಚೆಗಳು ನಡೆದವು.ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ. ಕುಳಾಲು ಸುಭಾಶ್ಚಂದ್ರ ಶೆಟ್ಟಿಯವರು, “SIR” ಮತದಾರರ ಮ್ಯಾಪಿಂಗ್ ಕಾರ್ಯವನ್ನು ಪಂಚಾಯತ್ ರಾಜ್ ಸಂಘಟನೆಯ ಸದಸ್ಯರು ಗ್ರಾಮೀಣ…

Read More

ಮಂಗಳೂರಿನಲ್ಲಿ ಲಿಫ್ಟ್ ಅವಘಡದಿಂದ ಕಾರ್ಮಿಕ ಸಾವು, ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಸಂಸ್ಥೆಯ ವಿರುದ್ಧ ಕಠಿನ ಕಾನೂನು ಕ್ರಮಕ್ಕೆ ಎಸ್.ಡಿ.ಟಿ.ಯು ಆಗ್ರಹ

ಮಂಗಳೂರಿನ ಎಜೆ ಆಸ್ಪತ್ರೆಯ ಮುಂಭಾಗದಲ್ಲಿರುವ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವ ಇನ್ಟಾಮಾರ್ಟ್ ಸಂಸ್ಥೆಯಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ಬೆಳಲು ಪೂಂಜಕೆರೆ ನಿವಾಸಿ ಅವಿವಾಹಿತ 28 ವರ್ಷದ ಯುವಕ ನೌಫಲ್ ಎಂಬುವರು ಸಂಸ್ಥೆಯ ಅವೈಜ್ಞಾನಿಕವಾಗಿ ಯಾವುದೇ ಪರವಾನಿಗೆ ಪಡೆಯದೆ ನಿರ್ಮಿಸಿದ ಲಿಫ್ಟ್ ನಲ್ಲಿ ಸಿಲುಕಿ ಅವಘಡದಿಂದ ಸಾವನ್ನಪ್ಪಿದ್ದು ಈ ಘಟನೆಯು ಅತ್ಯಂತ ದುಃಖಕರ ಹಾಗೂ ಆತಂಕಕಾರಿ ಘಟನೆ ಎಂದು ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷರಾದ ಇರ್ಫಾನ್ ಕಾನ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ನಿರಂತರವಾಗಿ ನಿರ್ಮಾಣ…

Read More

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು. ಈ ವೇಳೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ತಮ್ಮ ಭಾಗದ ಸಮಸ್ಯೆ, ಬೇಡಿಕೆಗಳು ಮತ್ತು ಅಹವಾಲುಗಳನ್ನು ಸಂಸದರ ಗಮನಕ್ಕೆ ತಂದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಸಂಸದರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಮಸ್ಯೆಗಳ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದಲ್ಲದೇ ಸಾರ್ವಜನಿಕ ಭೇಟಿ ವೇಳೆ ವಿವಿಧ…

Read More

ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಾಗ್ರಿ ಕೊಡುಗೆ

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕುತ್ಲೂರು ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬಿಎಎಸ್ಎಫ್ ಸಿಎಸ್ ಆರ್ ನಿಧಿಯಿಂದ ನೀಡಲಾದ 50 ಸಾವಿರ ರೂಪಾಯಿ ಮೌಲ್ಯದ ಪುಸ್ತಕ ಸಾಮಾಗ್ರಿ ಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿನಾಯಕ ನರ್ವಾಡೆ ಶಾಲಾ ಮಕ್ಕಳಿಗೆ ಹಸ್ತಾ0ತರಿಸಿದರು. ಈ ವೇಳೆ ಮಾತನಾಡಿದ ಅವರು ಸರಕಾರಿ ಶಾಲೆಯ ಅಭಿವೃದ್ಧಿಗೆ ಸಂಘ ಸಂಸ್ಥೆಗಳ ಸಹಕಾರ ಅತೀ ಅಗತ್ಯವಾಗಿದೆ. ಕುತ್ಲೂರು ಸರಕಾರಿ ಶಾಲೆಯಲ್ಲಿ ಎಲ್ ಕೆ ಜಿ ಹಾಗೂ ಯು…

Read More

ಮೇ 22ಕ್ಕೆ ತೆರೆಕಾಣಲಿದೆ ‘ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ. ಕ್ರಿಕೆಟ್ ಹಿನ್ನೆಲೆ ಕಥೆಗೆ ಪ್ರೀಮಿಯರ್ ಶೋದಲ್ಲೇ ಭರ್ಜರಿ ಮೆಚ್ಚುಗೆ

ಪುತ್ತೂರು: ಪ್ರಜ್ವಲ್‌ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ ‘ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಮೇ.22ರಂದು ತೆರೆಕಾಣಲಿದೆ ಎಂದು ಚಿತ್ರದ ತಂಡ ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಚಿತ್ರದ ನಾಯಕ ನಟ ವಿನೀತ್ ಕುಮಾರ್ ಅವರು ಮಾತನಾಡಿ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಗೊಂಡಿದ್ದು, ಜೊತೆಗೆ ಹಲವು ಕಡೆ ಪ್ರೀಮಿಯರ್ ಶೋನಲ್ಲಿ ಉತ್ತಮ ಮೆಚ್ಚುಗೆ ಸಿಕ್ಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ತುಳುನಾಡು ಚಿತ್ರರಂಗಕ್ಕೆ ಹೊಸ…

Read More

ದ್ವಾರಕ ಕಾರ್ಪೋರೇಶನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ವಿಕಲ ಚೇತನರಿಗೆ ಸಂತ್ವ ಉದ್ಯೋಗ ಮಾಡಲು ಹೊಲಿಗೆ ಯಂತ್ರ ವಿತರಣೆ

ಪುತ್ತೂರು ತಾಲ್ಲೂಕು ಪಂಚಾಯತ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಕಲ ಚೇತನರ ಸೇವಾ ಕೇಂದ್ರ ಕಚೇರಿಯ ಪುತ್ತೂರು ತಾಲ್ಲೂಕು ಪಂಚಾಯತ್ ವಿಕಲ ಚೇತನರ ವಿವಿದೋದ್ದೇಶ ಪುನರ್ವಸತಿ ಕಾರ್ಯ ಕರ್ತರಾದ ನವೀನ್ ಕುಮಾರ್ ರವರ ಮನವಿಗೆ ಸ್ಪಂದಿಸಿದ ಪುತ್ತೂರು ಸರಕಾರಿ ನೌಕರರ ಸಭಾಂಗಣ ದಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರು ದ್ವಾರಕ ಕಾರ್ಪೋರೇಶನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ದಿನಾಂಕ :18/5/26ರ ಸೋಮವಾರ ದಂದು ಪುತ್ತೂರು ತಾಲ್ಲೂಕು ಕೇಮ್ಮಿಂಜೆ ಗ್ರಾಮದ ಮರೀಲ್ ಮನೆ ನಿವಾಸಿಯಾದ ತೀರ್ವತರದ ಎರಡು ಕಾಲು ಕಳೆದು ಕೊಂಡ ದೈಹಿಕವಾಗಿ 80%…

Read More

ಮೇ 24ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ದಿನಾಚರಣೆ ಮೇ 24 ರಂದು ಬೆಳಗ್ಗೆ 10 ಕ್ಕೆ ನಗರದ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. 2025 ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿರುವ ಸಮಾಜ ಸೇವಕ ದೀಪಕ್.ಜಿ.ಬೆಳ್ತಂಗಡಿ ಇವರಿಗೆ ಮಂಗಳೂರು ನಗರ ಪೊಲೀಸ್ ಕಮಿಷನರೆಟ್‌ನ ಉಪ ಪೊಲೀಸ್ ಆಯುಕ್ತ ಎಚ್.ಎನ್.ಮಿಥುನ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರೆಸ್…

Read More

ಅಧಿಕ ಮಾಸದ ಅಂಗವಾಗಿ ಧರ್ಮಸ್ಥಳದಲ್ಲಿ ಭಕ್ತಿಪರ ಮಹೋತ್ಸವ. ಜೂನ್ 7ರಿಂದ 13ರವರೆಗೆ ಅಖಂಡ ಹರಿನಾಮ ಸಂಕೀರ್ತನೆ

ಮಂಗಳೂರು:ಅಧಿಕ ಮಾಸದ ಪವಿತ್ರ ಸಂದರ್ಭವನ್ನು ಅಂಗವಾಗಿ ಮಾಡಿಕೊಂಡು ಶ್ರೀ ಚೈತನ್ಯ ಸದ್ಗುರು ಹರಿಪ್ರಸಾದ ಶರದ್ ಸ್ವಾಮಿ ಶಿವೂರಕರ ಅವರ ನೇತೃತ್ವದಲ್ಲಿ ಹಾಗೂ ಶ್ರೀ ಅನಂತ ಶ್ರೀ ವಿಭೂಷಿತ ಪ್ರೋತ್ರಿಯ ಬ್ರಹ್ಮನಿಷ್ಠ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿಸದ್ಗುರು ಬ್ರಹ್ಮಾನಂದ ಸರಸ್ವತಿಜೀ ಮಹಾರಾಜ್‌ (ಶ್ರೀ ಪಂಚದಶನಾಮ ಜುನಾ ಅಖಾಡಾ) ಅವರ ದಿವ್ಯ ಸಾನಿಧ್ಯದಲ್ಲಿ “ಶ್ರೀ ಗ್ರಂಥರಾಜ ಜ್ಞಾನೇಶ್ವರಿಯ ಸಾಮುದಾಯಿಕ ಪಾರಾಯಣ ಹಾಗೂ ಅಖಂಡ ಹರಿನಾಮ ಸಪ್ತಾಹ” ಕಾರ್ಯಕ್ರಮವು ಜೂನ್ 7ರಿಂದ 13ರವರೆಗೆ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದಲ್ಲಿರುವ ಶ್ರೀ ರಾಮ…

Read More
error: Content is protected !!