”ದಕ್ಷ್ ಪ್ಲೇ ಸ್ಕೂಲ್ ” 2026-27ನೇ ಶೈಕ್ಷಣಿಕ ಸಾಲಿನಿಂದ ಮಕ್ಕಳಿಗೆ ಕೃಷಿ ಕುರಿತು ಪ್ರಾಯೋಗಿಕ ಅಧ್ಯಯನ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಮೊಟ್ಟ ಮೊದಲ ಬಾರಿಗೆ ನರ್ಸರಿ , ಎಲ್ ಕೆ ಜಿ , ಯುಕೆಜಿ , ಡೇಕೇರ್ ಮಕ್ಕಳಿಗಾಗಿ ಉಳ್ಳಾಲಬೈಲಿನ ”ದಕ್ಷ್ ಪ್ಲೇ ಸ್ಕೂಲ್ ” 2026-27ನೇ ಶೈಕ್ಷಣಿಕ ಸಾಲಿನಿಂದ ಪುಟಾಣಿ ಮಕ್ಕಳಿಗೆ ಕೃಷಿ ಕುರಿತು ತಳಮಟ್ಟದ ಅಧ್ಯಯನ ನಡೆಸಲು ಫುಡ್ ಚೈನ್ ಕ್ಯಾಂಪೇನ್ (ಕೆ.ವಿ.ಕೆ.) ಮಂಗಳೂರು ಇದರ ಜೊತೆ ಪಾಲುದಾರಿಕೆಯೊಂದಿಗೆ ಈ ಚಟುವಟಿಕೆ ನಡೆಯಲಿದೆ ಎಂದು ದಕ್ಷ್ ಪ್ಲೇ ಸ್ಕೂಲ್ ಉಳ್ಳಾಲ ಇದರ ಫೌಂಡರ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರಾದ ಮಲ್ಲಿಕಾ ಉಳ್ಳಾಲಬೈಲ್ ತಿಳಿಸಿದರು…

Read More

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್; ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ

ವಿಮೆನ್ ಇಂಡಿಯಾ ಮೂವ್ಮೆಂಟ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಹಿದಾ ತಸ್ನೀಮ್ ಅವರು ಕರ್ನಾಟಕ ರಾಜ್ಯ ಸರ್ಕಾರವು ಹಿಜಾಬ್ ನಿಷೇಧವನ್ನು ಹಿಂಪಡೆಯಲು ತೆಗೆದುಕೊಂಡ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಈ ಕ್ರಮವು ವಿದ್ಯಾರ್ಥಿನಿಯರ ಶಿಕ್ಷಣ, ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಂವಿಧಾನಿಕ ಹಕ್ಕುಗಳನ್ನು ಗೌರವಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಇದೇ ವೇಳೆ, ಈ ನಿರ್ಧಾರವು ಜನಪರ ಹೋರಾಟ ಹಾಗೂ ನಿರಂತರ ಕಾನೂನು ಹೋರಾಟದ ಜಯವಾಗಿದೆ ಎಂದು ಅವರು ವಿವರಿಸಿದರು . ಮೊದಲ ಸಚಿವ ಸಂಪುಟ ಸಭೆಯಲ್ಲೇ ಹಿಜಾಬ್ ನಿಷೇಧವನ್ನು ಹಿಂಪಡೆಯುವುದಾಗಿ…

Read More

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಇಬ್ಬರು ಹಿಡಿತ

ಮಂಗಳೂರು: ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.ಭಜರಂಗದಳ ನೀಡಿದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ನಗರದ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ರಕ್‌ನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಟ್ರಕ್‌ನಲ್ಲಿ 27 ಜಾನುವಾರುಗಳನ್ನು ಅಮಾನುಷವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಹಾವೇರಿಯಿಂದ ಮಂಗಳೂರು ಮಾರ್ಗವಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು…

Read More

ಪೊಲೀಸರ ಕಣ್ಣುತಪ್ಪಿಸಿ ಓಡಾಡುತ್ತಿದ್ದ ಆರೋಪಿ ಕೊನೆಗೂ ಸೆರೆ

ಮಂಜೇಶ್ವರ: ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಕುಂಬಳೆ ಪೊಲೀಸರು ಚಾಣಾಕ್ಷತನದಿಂದ ಬಂಧಿಸಿದ್ದಾರೆ.ಆರಿಕ್ಕಾಡಿ ಬನ್ನಂಗುಳ ನಿವಾಸಿ ಅಬ್ದುಲ್ ಜಲೀಲ್ ಅಲಿಯಾಸ್ ಜಲ್ಲು (28) ಬಂಧಿತ ಆರೋಪಿ. ​ಬದಿಯಡ್ಕ ಮತ್ತು ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಯತ್ನ ಸೇರಿದಂತೆ ಹಲವಾರು ಗಂಭೀರ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ. ಕಳೆದ ಕೆಲವು ಸಮಯದಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಕಣ್ಣೂರು ಜಿಲ್ಲೆಯ ವಳಪಟ್ಟಣಂ ಎಂಬಲ್ಲಿ ಗುಟ್ಟಾಗಿ ನೆಲೆಸಿದ್ದ ಈತನ ಬಗ್ಗೆ ಕುಂಬಳೆ ಎಸ್‌….

Read More

ಅಪಘಾತಕ್ಕೀಡಾದ ಬೈಕ್ ಕಳವು; ಯುವಕ ಬಂಧನ

ಮಂಜೇಶ್ವರ: ಅಪಘಾತಕ್ಕೀಡಾಗಿ ರಸ್ತೆ ಬದಿಯಲ್ಲಿದ್ದ ಬೈಕನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೀಂಜ ಸಂತಡ್ಕ ನಿವಾಸಿ ಮುಹಮ್ಮದ್ ಅಲಿಯಾಸ್ ಮುನ್ನ (21) ಎಂಬಾತನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ​ಮೇ 1ರಂದು ಉಪ್ಪಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಂ.ಎನ್. ಸಂತೋಷ್ ಎಂಬವರ ಬೈಕ್ ಅಪಘಾತಕ್ಕೀಡಾಗಿತ್ತು. ಗಾಯಗೊಂಡಿದ್ದ ಸಂತೋಷ್ ಆಸ್ಪತ್ರೆಗೆ ದಾಖಲಾಗಿದ್ದರು. ಚೇತರಿಸಿಕೊಂಡು ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ​ ಈತನ ಮೇಲೆ ಈಗಾಗಲೇ ಮಂಜೇಶ್ವರ ಠಾಣೆಯಲ್ಲಿ ಪೋಕ್ಸೊ ಪ್ರಕರಣ…

Read More

ಕುಂಜತ್ತೂರು: ಬಸ್ ಚಾಲಕರ ಹಠಮಾರಿ ಧೋರಣೆಗೆ ಹೆಚ್ಚಿದ ಅಪಘಾತದ ಭೀತಿ: ಸಾರಿಗೆ ನಿಯಮ ಪಾಲಿಸುವಂತೆ ಮುಸ್ಲಿಂ ಯೂತ್ ಲೀಗ್ ಟೌನ್ ಕಮಿಟಿಯಿಂದ ಕಡಕ್ ಎಚ್ಚರಿಕೆ

ಮಂಜೇಶ್ವರ: ಕುಂಜತ್ತೂರು ಜಂಕ್ಷನ್‌ನಲ್ಲಿ ತಲಪಾಡಿ ಕಡೆಗೆ ಹೋಗುವ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್‌ಗಳು ನಿಗದಿಪಡಿಸಿದ ಬಸ್ ನಿಲ್ದಾಣದಲ್ಲಿ ನಿಲ್ಲಿಸದೆ, ಅಂಡರ್‌ಪಾಸ್ ಬಳಿಯೇ ನಿಲ್ಲಿಸುತ್ತಿರುವುದರಿಂದ ಅಪಘಾತಗಳು ನಿತ್ಯ ದರ್ಶನವಾಗಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಾದ ನಂತರ ಅಂಡರ್‌ಪಾಸ್ ಬಳಿ ಬಸ್‌ಗಳನ್ನು ಬೇಕಾಬಿಟ್ಟಿಯಾಗಿ ನಿಲ್ಲಿಸುತ್ತಿರುವುದು ಇತರ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ದೊಡ್ಡ ಪ್ರಾಣಭೀತಿಯನ್ನು ತಂದೊಡ್ಡಿದೆ. ​ಈ ಬಗ್ಗೆ ಸಾರ್ವಜನಿಕರು ಮತ್ತು ಸ್ಥಳೀಯರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳನ್ನು ಹಾಗೂ ಪೊಲೀಸರನ್ನು ಸಂಪರ್ಕಿಸಿದರೂ ಯಾರೂ ಇತ್ತಕಡೆ ತಿರುಗಿಯೂ ನೋಡಿಲ್ಲವೆಂಬ ಆರೋಪವಿದೆ. ​ಈ…

Read More

ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಗುರುತುಗಳಿಗೆ ಅವಕಾಶ: ಬ್ಯಾರಿಸ್ ಸೆಂಟ್ರಲ್ ಕಮಿಟಿ ಸ್ವಾಗತ

ಬೆಂಗಳೂರು:ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಹಕ್ಕುಗಳನ್ನು ಗೌರವಿಸುವ ದಿಸೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಬ್ಯಾರಿಸ್ ಸೆಂಟ್ರಲ್ ಕಮಿಟಿಯು ಸ್ವಾಗತಿಸುತ್ತದೆ ಎಂದು ಬೆಂಗಳೂರಿನ ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಶಬೀರ್ ಬ್ರಿಗೇಡ್ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಾಮಾನ್ಯವಾಗಿ ಧರಿಸುವ ಪೇಟ/ಟರ್ಬನ್, ಜನಿವಾರ/ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ತಲೆವಸ್ತ್ರ/ಹಿಜಾಬ್ ಸೇರಿದಂತೆ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತ ಸಂಕೇತಗಳನ್ನು ಶಿಸ್ತು, ಸುರಕ್ಷತೆ ಮತ್ತು ಗುರುತಿಸುವಿಕೆಗೆ ಅಡ್ಡಿಯಾಗದ ರೀತಿಯಲ್ಲಿ ಧರಿಸಲು ಅವಕಾಶ…

Read More

ಮೇ 26ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯ ನಿರೀಕ್ಷೆ

ತಿರುವನಂತಪುರಂ: ಈ ಬಾರಿ ಕೇರಳಕ್ಕೆ ಮೇ 26ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಜೂನ್ 1ರಂದು ಕೇರಳ ಪ್ರವೇಶಿಸುವ ಮುಂಗಾರು, ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಆಗಮಿಸುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಬಂಗಾಳ ಕೊಲ್ಲಿಯ ದಕ್ಷಿಣ ಭಾಗ ಹಾಗೂ ಅಂಡಮಾನ್ ಸಮುದ್ರ ಪ್ರದೇಶದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳಲಿದ್ದು, ಮೇ 24ರೊಳಗೆ ಕೇರಳ ತಲುಪುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಮುಂಗಾರು ಉತ್ತರದತ್ತ…

Read More

ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್‌ನಲ್ಲಿ ಬಿಎ ಮೀಡಿಯಾ ಮತ್ತು ಕಮ್ಯುನಿಕೇಶನ್ ಕೋರ್ಸ್‌ಗೆ ಪ್ರವೇಶಮಾಧ್ಯಮ, ಚಿತ್ರರಂಗ ಹಾಗೂ ಡಿಸೈನ್ ಕ್ಷೇತ್ರದಲ್ಲಿ ವೃತ್ತಿಜೀವನಕ್ಕೆ ಅವಕಾಶ

ಮಂಗಳೂರು: NITTE Deemed to be University ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್‌ನಲ್ಲಿ ಬಿಎ (ಆನರ್ಸ್) ಮೀಡಿಯಾ ಮತ್ತು ಕಮ್ಯುನಿಕೇಶನ್ ಕೋರ್ಸ್‌ಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಚಿತ್ರರಂಗ, ಪತ್ರಿಕೋದ್ಯಮ, ಜಾಹೀರಾತು ಹಾಗೂ ಡಿಸೈನ್ ಕ್ಷೇತ್ರಗಳಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಈ ಕೋರ್ಸ್ ವಿಶೇಷ ಅವಕಾಶ ಕಲ್ಪಿಸಲಿದೆ. ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಸಂವಹನ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಸಂಸ್ಥೆ ಅತ್ಯಾಧುನಿಕ ತರಬೇತಿ ಸೌಲಭ್ಯಗಳನ್ನು ಒದಗಿಸುತ್ತಿದೆ. ಭಾರತದಲ್ಲೇ ಏಕೈಕ Godox ಪ್ರಮಾಣಿತ ಸಂಸ್ಥೆ ಎಂಬ ಹೆಗ್ಗಳಿಕೆಗೆ…

Read More

ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಫೋಟೋಗ್ರಫಿ–ಫಿಲ್ಮ್‌ಮೇಕಿಂಗ್ ಕೋರ್ಸ್‌ಗೆ ಪ್ರವೇಶ ಆರಂಭಆಧುನಿಕ ಸ್ಟುಡಿಯೋ ಹಾಗೂ ಕೈಗಾರಿಕಾ ಸಂಪರ್ಕ ಸೌಲಭ್ಯ

ಮಂಗಳೂರು: NITTE Deemed to be University ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್‌ನಲ್ಲಿ ಎಂ.ಎ. ಇನ್ ಫೋಟೋಗ್ರಫಿ ಮತ್ತು ಫಿಲ್ಮ್‌ಮೇಕಿಂಗ್ ಕೋರ್ಸ್‌ಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಮಾಧ್ಯಮ ಹಾಗೂ ದೃಶ್ಯ ಸಂವಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಈ ಕೋರ್ಸ್ ವಿಶೇಷ ಅವಕಾಶ ಕಲ್ಪಿಸಲಿದೆ. ಸಂಸ್ಥೆಯಲ್ಲಿ ಅತ್ಯಾಧುನಿಕ ಮಲ್ಟಿ-ಕ್ಯಾಮೆರಾ ಟೆಲಿವಿಷನ್ ಸ್ಟುಡಿಯೋ, ಐಮ್ಯಾಕ್ ಎಡಿಟಿಂಗ್ ಸ್ಟುಡಿಯೋ, ಆಡಿಯೋ–ವೀಡಿಯೋ ಎಡಿಟಿಂಗ್, ಗ್ರಾಫಿಕ್ ಹಾಗೂ ವೆಬ್ ಡಿಸೈನಿಂಗ್ ಸೌಲಭ್ಯಗಳಿವೆ. 2024 ಮತ್ತು 2025ರಲ್ಲಿ ಪ್ರಶಸ್ತಿ…

Read More
error: Content is protected !!