ನರಹರಿ–ಕೃಷ್ಣಕೋಡಿ ಸಂಪರ್ಕ ಕಡಿತ: 150ಕ್ಕೂ ಹೆಚ್ಚು ಕುಟುಂಬಗಳಿಗೆ ತೊಂದರೆ
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಬಂದ್ ಆಗಿರುವ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಮಾಡುವಂತೆ ಹಾಗೂ ಕೆಡವಿ ಹಾಕಲಾದ ಬಸ್ ನಿಲ್ದಾಣವನ್ನು ಮರುಸ್ಥಾಪಿಸಿಕೊಡುವಂತೆ ನರಹರಿ ಭಾಗದ ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.ಬಿಸಿರೋಡು- ಅಡ್ಡಹೊಳೆವರೆಗೆ ರಾಷ್ಟ್ರೀಯ ಹೆದ್ದಾರಿ 75 ರ ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಾಣದ ವೇಳೆ ಕಲ್ಲಡ್ಕ ಸಮೀಪದ ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ನರಹರಿ ನಗರ ಮತ್ತು ಕೃಷ್ಣಕೋಡಿ ಎಂಬಲ್ಲಿ ಒಟ್ಟು ಮೂರು ರಸ್ತೆಗಳ ಸಂಪರ್ಕವನ್ನು ಕಡಿದು ಹಾಕಲಾಗಿತ್ತು. ಹಾಗಾಗಿ ಕಳೆದ ಮೂರು ವರ್ಷಗಳಿಂದ ಈ ಭಾಗದ ಸಾರ್ವಜನಿಕರು ಸಂಚರಿಸಲು…
