ಸಮಾನತೆ ಹಾಳು ಮಾಡುತ್ತಿದೆ ಕಾಂಗ್ರೆಸ್ ಸರ್ಕಾರದ ಹಿಜಾಬ್ ನೀತಿ: ಭರತ್ ಶೆಟ್ಟಿ ಆರೋಪ
ಮಂಗಳೂರು: ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವ ಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ತೀವ್ರ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಈ ನಿರ್ಧಾರ ಶಿಕ್ಷಣ ಕ್ಷೇತ್ರದಲ್ಲಿ ಗೊಂದಲ ಹಾಗೂ ವಿಭಜನೆಗೆ ಕಾರಣ ಎಂದು ಅವರು ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, “ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವ ಮೂಲಕ ರಾಜ್ಯ ಸರ್ಕಾರ ಅನಗತ್ಯ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿದೆ. ಇದು ಕಾಂಗ್ರೆಸ್ನ ಮುಸ್ಲಿಂ ತುಷ್ಠೀಕರಣದ…
